NEWSಆರೋಗ್ಯನಮ್ಮಜಿಲ್ಲೆಬೆಂಗಳೂರು

BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ರೋಗ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಇಂದು ಪೂರ್ವ ವಲಯದ ರಾಮಸ್ವಾಮಿ ಪಾಳ್ಯದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತದನಾಡಿದ ಅವರು, ಡೆಂಘೀ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಸೊಳ್ಳೆ ನಿಯಂತ್ರಣ ಕುರಿತು ಅರಿವು ಮೂಡಿಸುವ ಹಾಗೂ ಔಷಧ ಸಿಂಪಡಣೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತತಿ ಹೆಚ್ವಾಗಲಿದ್ದು, ಅದನ್ನು ಫಾಗಿಂಗ್ ಮತ್ತು ಔಷಧ ಸಿಪಡಿಸುವ ಮೂಲಕ ತಡೆಯಬೇಕು. ಹೂವಿನ ಕುಂಡ, ಬೀಸಾಕಿದ ಟೈರ್, ನೀರು ಸಂಗ್ರಹಿಸುವ ತೊಟ್ಟಿ, ನೀರಿನ ಬಾಟಲ್ ಸೇರಿದಂತೆ ಇನ್ನಿತರೆಡೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಈ ಸಂಬಂಧ ಅಂತಹ ಜಾಗದಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಆಯಾ ವಲಯದ ವಾರ್ಡ್ ಮಟ್ಟದಲ್ಲಿ ಒಂದು ವಾರ್ಡ್ ಗೆ 4 ಔಷಧ ಸಿಂಪಡೆಣೆ ಮಾಡುವ ತಂಡಗಳನ್ನು ನಿಯೋಜನೆ ಮಾಡಿದ್ದು, ತಾತ್ಕಾಲಿಕವಾಗಿ ನೀರು ನಿಲ್ಲುವ ಸ್ಥಳ ಹಾಗೂ ಶಾಶ್ವತವಾಗಿ ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಫಾಗಿಂಗ್ ಮತ್ತು ಔಷಧಿ ಸಿಂಪಡಣೆ ಮಾಡಲಾಗುತ್ತದೆ ಎಂದು ಹೇಳಿದರು.

ಲಾರ್ವಾ ಸಮೀಕ್ಷೆ ಪ್ರಾರಂಭ: ಈಡೀಸ್, ಈಜಿಪ್ಟೈ ಎಂಬ ಸೊಳ್ಳೆಗಳಿಂದ ಡೆಂಗ್ಯೂ ರೋಗ ಹರಡುತ್ತದೆ. ಆ ಸೊಳ್ಳೆಗಳು ತೆರೆಡಿಟ್ಟ ನೀರಿನ ತೊಟ್ಟಿಗಳು, ಏರ್ ಕೂಲರ್ ಗಳು, ಹೂವಿನ ಕುಂಡದ ತಟ್ಟೆಗಳು, ಬಕೆಟ್ ಗಳು, ಸೀಮೆಂಟ್ ತೊಟ್ಟಿಗಳು, ತೆಂಗಿನ ಚಿಪ್ಪುಗಳು, ಒಡೆದ ಟೈರ್ ಗಳಲ್ಲಿ ಉತ್ಪತ್ತಿಯಾಗುತ್ತವೆ. ಈ ಸಂಬಂಧ ಪ್ರಾರಂಭಿಕ ಹಂತದಲ್ಲೇ ಸೊಳ್ಳೆ ನಿಯಂತ್ರಣ ಮಾಡಲು ಲಾರ್ವಾ ಉತ್ಪಿತ್ತಿಯಾಗುವ ತಾಣಗಳನ್ನು‌ ಗುರಿತಿಸಿ ನಾಶಪಡಿಸಲಾಗುತ್ತದೆ.

ಕೊಳಚೆ ಹಾಗೂ ಇನ್ನಿತರೆ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ನಮ್ಮ ಕ್ಲಿನಿಕ್ ವೈದ್ಯರ ತಂಡ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಗಳ ತಂಡಗಳನ್ನು ರಚಿಸಿಕೊಂಡು ಮನೆ-ಮನೆ ಭೇಟಿ ನೀಡಿ ಡೆಂಗ್ಯೂ  ಪ್ರಕರಣಗಳ ಪತ್ತೆ ಹಚ್ಚುವ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಸಾಮಾಜಿಕ ಜಾಲತಾಣ, ಜಾಥಾ ಹಾಗೂ ಧ್ವನಿವರ್ಧಕಗಳ ಮೂಲಕ ಡೆಂಗ್ಯೂ ಜಾಗೃತಿ ಅಭಿಯಾನ: ನಗರದಲ್ಲಿ ಡೆಂಗ್ಯೂ ನಿಯಂತ್ರಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ಆಯಾ ವಲಯಗಳ ವಾರ್ಡ್ ಮಟ್ಟದಲ್ಲಿ ಜಾಗೃತಿ ಜಾಥಾ ಹಾಗೂ ಪಾಲಿಕೆಯ ಕಸದ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ಡೆಂಗ್ಯೂ ಬಗ್ಗೆ ನಾಗರೀಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿಸಲಾಗುತ್ತಿದೆ. ಜೊತೆಗೆ ಮನೆ ಮನೆಗೆ ಡೆಂಗೀ ನಿಯಂತ್ರಣದ ಕುರಿತು ಬಿತ್ತಿಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.

ಈ ವೇಳೆ ಮುಖ್ಯ ಆರೋಗ್ಯಾಧಿಕಾರಿ ಡಾ. ಮದನಿ, ಪೂರ್ವ ವಲಯ ಆರೊಗ್ಯಾಧಿಕಾರಿ  ಡಾ. ಭಾಗ್ಯಲಕ್ಷ್ಮಿ, ಡೆಂಗ್ಯೂ ನೋಡಲ್ ಅಧಿಕಾರಿ  ಸುಜಾತಾ, ಆರೋಗ್ಯ ವೈದ್ಯಾಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ