NEWSಬೆಂಗಳೂರುರಾಜಕೀಯ

ಬಿಡಿಎ, ಬಿಬಿಎಂಪಿ ನಿಷ್ಕ್ರಿಯತೆಗೆ ಸಣ್ಣ ಮಳೆಗೂ ನಗರ ಜಲಾವೃತ: ಎಎಪಿ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರತಿವರ್ಷವೂ ಒಂದು ಸಣ್ಣ ಮಳೆ ಬಂದರೂ ಬೆಂಗಳೂರು ಜಲಾವೃತ್ತವಾಗುತ್ತಿದೆ ಈ ಪರಿಸ್ಥಿತಿಗೆ ಬಿಡಿಎ ಮತ್ತು ಬಿಬಿಎಂಪಿ ನಿಷ್ಕ್ರಿಯತೆಯೇ ಕಾರಣ ಎಂದು ಆಮ್ ಆದ್ಮಿ ಪಾರ್ಟಿ ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್ ಕುಮಾರ್ ಕಿಡಿಕಾರಿದರು.

ನಗರದಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಎಲ್ಲೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಮೆಟ್ರೋ ಲೈನ್‌ ಮೇಲೆ ಮರ ಉರುಳಿಬಿದ್ದಿದೆ. ಚರಂಡಿ ಬ್ಲಾಕ್‌, ಮುಳುಗಿದ ಅಂಡರ್‌ ಪಾಸ್, ಸಂಚಾರ ದಟ್ಟಣೆ, ನೂರಾರು ಮರಗಳು ಧರೆಗುರುಳಿರುವುದು ಸೇರಿದಂತೆ ನಾನಾ ರೀತಿಯ ತೊಂದರೆಗಳಿಂದ ನಗರವಾಸಿಗಳು ಹೈರಾಣಾಗಿದ್ದಾರೆ. ಈ ಪರಿಸ್ಥಿತಿ ವರ್ಷವರ್ಷವೂ ಮುಂದುವರಿಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಒಂದು ದಿನ ಸುರಿದ ಮಳೆಗೆ ಈ ಪ್ರಮಾಣದಲ್ಲಿ ತೊಂದರೆಯಾದರೆ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಏನಾಗಬಹುದು? ಬಿಬಿಎಂಪಿ ಕೆಲಸ ಮಾಡದಿರುವುದೇ ಸಮಸ್ಯೆಗೆ ಕಾರಣವಾಗಿದೆ. ನಗರದಲ್ಲಿ ಮಳೆಗಾಲದ ಆರಂಭಕ್ಕೂ ಮುನ್ನವೇ ನಗರದಲ್ಲಿನ ಮರಗಳ ಗಣತಿ ನಡೆಸಬೇಕಿತ್ತು. ಅಪಾಯಕಾರಿ ಒಣಕೊಂಬೆಗಳನ್ನು ತೆರವುಗೊಳಿಸಲು ಬಿಬಿಎಂಪಿಗೆ 6 ಸಾವಿರಕ್ಕೂ ಹೆಚ್ಚು ಮನವಿಗಳನ್ನು ಸಾರ್ವಜನಿಕರು ಸಲ್ಲಿಸಿದ್ದರೂ, ಈ ಪೈಕಿ ಕೇವಲ 478 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಉಳಿದ ಅರ್ಜಿಗಳನ್ನು ಕಸದಬುಟ್ಟಿಗೆ ಎಸೆದಿರುವುದು ಬಿಬಿಎಂಪಿಯ ವೈಫಲ್ಯವನ್ನು ತೋರಿಸುತ್ತದೆ. ಆದಷ್ಟು ಬೇಗ ಬಿಬಿಎಂಪಿ ಎಚ್ಚೆತ್ತುಕೊಳ್ಳಬೇಕು ಮತ್ತು ಸಾರ್ವಜನಿಕರ ಅಹವಾಲುಗಳನ್ನು ಆಲಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಒತ್ತಾಯಿಸುತ್ತದೆ ಎಂದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿನ 40 ಪರ್ಸೆಂಟ್ ಕಮಿಷನ್ ಹಗರಣ ಕಾಂಗ್ರೆಸ್ ಸರ್ಕಾರದಲ್ಲೂ ಮುಂದುವರಿಯುತ್ತಿರುವಂತೆ ಕಾಣುತ್ತಿದೆ. ವೈಟ್ ಟಾಪಿಂಗ್ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ಕಾಮಗಾರಿಯಲ್ಲಿ ಅಕ್ರಮ ಮುಂದುವರಿದೆ ಎನ್ನಲಾಗುತ್ತಿದ್ದು, ಇದು ನಗರಕ್ಕೆ ಮತ್ತಷ್ಟು ಸಂಕಷ್ಟ ಉಂಟುಮಾಡಿದೆ. ಮಳೆ ಸಂಬಂಧಿತ ಸಮಸ್ಯೆಗಳಿಗಾಗಿ ಸಹಾಯವಾಣಿ ಆರಂಭಿಸಿದ್ದರೂ, ಯಾವುದೇ ಪ್ರಯೋಜನವಾಗುತ್ತಿಲ್ಲ.

ಕಳೆದ ರಾತ್ರಿ ಎರಡೂವರೆ ಸಾವಿರಕ್ಕೂ ಹೆಚ್ಚು ಕರೆಗಳು ಬಂದರೂ, ಸ್ಪಂದಿಸುವವರು ಯಾರೂ ಇಲ್ಲ. ಮಳೆಗಾಲವನ್ನು ಸಮರ್ಥವಾಗಿ ಎದುರಿಸಲು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿಕೆ ಶಿವಕುಮಾರ್ ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ. ಈ ಹಿಂದೆ ನಗರದಲ್ಲಿ ಉಂಟಾಗಿದ್ದ ಪ್ರವಾಹದಿಂದಲೂ ಪಾಠ ಕಲಿತಿಲ್ಲ. ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಂಪೂರ್ಣ ನಿಷ್ಕ್ರಿಯವಾಗಿದ್ದು, ಅಭಿವೃದ್ಧಿ ಹೆಸರಿನಲ್ಲಿ ಹಣ ಮಾಡುವ ಖಾತೆಯಾಗಿದೆ ಎಂದು ದೂರಿದರು.

ಬಿಬಿಎಂಪಿ ಹಾಗೂ ಬಿಡಬ್ಲ್ಯುಎಸ್ಎಸ್‌ಬಿ ನಡುವಿನ ಸಮನ್ವಯದ ಕೊರತೆ ಕಾಣುತ್ತಿದೆ. BBMP, BWSSB, BDA, BMRCL ಮತ್ತು BTP ನಡುವೆ ಸಮನ್ವಯ ಸಾಧಿಸಬೇಕೆಂದೇ ಸಿದ್ದರಾಮಯ್ಯನವರ ಸರ್ಕಾರದಲ್ಲೇ ಬೆಂಗಳೂರು ನಗರಾಭಿವೃದ್ಧಿ ಸಚಿವಾಲಯವನ್ನು ಸ್ಥಾಪಿಸಲಾಯಿತು. ಆದರೆ, ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಒಂದೇ ಒಂದು ಸಮನ್ವಯ ಸಭೆ ನಡೆಸಿಲ್ಲ ಎಂದು ಆರೋಪಿಸಿದರು.

ನಗರದಲ್ಲಿ ಮಳೆ ಬಂತೆಂದರೆ ಸಾಕು ಸಂಚಾರ ದಟ್ಟಣೆ ಸಮಸ್ಯೆ ದೊಡ್ಡದಾಗಿ ಬೆಳೆಯುತ್ತಲೇ ಸಾಗಿದೆ. ಪಾಪದ ಶಿಶುಗಳಾಗಿರುವ ಬೆಂಗಳೂರಿನ ಟ್ರಾಫಿಕ್‌ ಪೊಲೀಸರು ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು, ರಸ್ತೆ ಮೇಲೆ ಮರ ಬೀಳುವುದು, ಪ್ರವಾಹದಿಂದ ರಸ್ತೆಗಳು ಬಂದ್‌ ಸೇರಿದಂತೆ ಸೇರಿ ಏನೇ ಪ್ರಕೃತಿ ವಿಕೋಪ ಉಂಟಾದರೂ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಉಳಿದಂತೆ, BBMP, BWSSB, BESCOM ಮುಂತಾದ ಸಂಸ್ಥೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ ಎಂದರು.

ಎಎಪಿಯಿಂದ ವಿಭಾಗವಾರು ಸಹಾಯವಾಣಿ ಆರಂಭ: ಸಾರ್ವಜನಿಕರ ಸಮಸ್ಯೆಗೆ ಧ್ವನಿಯಾಗಲೆಂದು ಬೆಂಗಳೂರು ನಗರದಲ್ಲಿ ವಿಭಾಗವಾರು ಆಮ್ ಆದ್ಮಿ ಪಾರ್ಟಿಯ ಐವರು ಸಂಘಟನಾ ಕಾರ್ಯದರ್ಶಿಗಳಿಗೆ ಜವಾಬ್ದಾರಿಯನ್ನು ಹಂಚಲಾಗಿದ್ದು, ಬೆಂಗಳೂರು ನಗರ ನಿವಾಸಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು.

ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸದಿದ್ದರೆ ಆಮ್ ಆದ್ಮಿ ಪಾರ್ಟಿಯ ಸಹಾಯವಾಣಿಗೆ ಕರೆ ಮಾಡಿ ಸಂಘಟನಾ ಕಾರ್ಯದರ್ಶಿಗಳ ಗಮನಕ್ಕೆ ತರಬೇಕು. ಬೆಂಗಳೂರಿನ ನಾಗರಿಕ ಸಂಸ್ಥೆಗಳು ಸಮಸ್ಯೆಗೆ ಸ್ಪಂದಿಸದೇ ಹೋದರೆ, ಸಾರ್ವಜನಿಕರ ಅಹವಾಲುಗಳನ್ನು ನಾವು ಆಲಿಸಿ ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ಜವಾಬ್ದಾರಿ ಹಂಚಿಕೆ ವಿವರ: ಜಗದೀಶ್ ಬಾಬು- ಪೂರ್ವ ವಿಭಾಗ 9880582899. ವಿಶ್ವನಾಥ್- ಬೆಂಗಳೂರು ಸೆಂಟ್ರಲ್ 8861761966. ಶಶಿಧರ್ ಆರಾಧ್ಯ- ಬೆಂಗಳೂರು ಉತ್ತರ 9742011243. ಅಶೋಕ್ ಮೃತ್ಯುಂಜಯ- ಬೆಂಗಳೂರು ದಕ್ಷಿಣ 6363524983. ಉಮೇಶ್ ಬಾಬು ಪಿಳ್ಳೇಗೌಡ- ಬೆಂಗಳೂರು ಪಶ್ಚಿಮ ವಿಭಾಗ 9449355804 ಇವರನ್ನು ಸಾರ್ವಜನಿಕರು ಸಂಪರ್ಕಿಸಿ ಅಹವಾಲು ಸಲ್ಲಿಸಬಹುದಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ