Friday, November 1, 2024
NEWSನಮ್ಮಜಿಲ್ಲೆನಮ್ಮರಾಜ್ಯ

ಭೂಮಾಫಿಯಾಗಳ ಕೈಗೆ ಬಿಡಿಎ ವಾಣಿಜ್ಯ ಸಂಕೀರ್ಣ: ಬಿಡಿಎ ನಿರ್ಧಾರಕ್ಕೆ ಆಮ್ ಆದ್ಮಿ ಪಾರ್ಟಿ ತೀವ್ರ ವಿರೋಧ ಪ್ರತಿಭಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆರು ವರ್ಷಗಳ ಹಿಂದೆ ಅಂತಿಮಗೊಂಡಿದ್ದ ವಿವಾದಾದತ್ಮಕ ಒಪ್ಪಂದಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮರುಜೀವ ನೀಡಲು ಮುಂದಾಗಿದ್ದು, ಏಳು ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಶಾಪಿಂಗ್ ಮಾಲ್‌ಗಳನ್ನಾಗಿ ಪರಿವರ್ತಿಸಲಿದೆ. ಸಾವಿರಾರು ಕೋಟಿ ಬೆಲೆಬಾಳುವ ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಭೂ ಮಾಫಿಯಾಗಳ ಕೈಗೆ ನೀಡುತ್ತಿರುವ ಬಿಡಿಎ ನೀತಿ ವಿರೋಧಿಸಿ ಆಮ್ ಆದ್ಮಿ ಪಾರ್ಟಿ ತೀವ್ರ ಪ್ರತಿಭಟನೆ ನಡೆಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇದೇ ವೇಳೆ ಇಂದಿರಾನಗರದ ಬಿಡಿಎ ಕಾಂಪ್ಲೆಕ್ಸ್‌ಗೆ ಭೇಟಿ ನೀಡಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ, ಇಂದಿರಾ ನಗರದ ಬಿಡಿಎ ಕಾಂಪ್ಲೆಕ್ಸ್ ಅನ್ನು ದೊಡ್ಡ ದೊಡ್ಡ ಭೂಗಳ್ಳರಲ್ಲಿ ಒಬ್ಬರಾದ ಕೆಜೆ ಜಾರ್ಜ್ ಒಡೆತನದ ಎಂಬೆಸ್ಸಿ ಗ್ರೂಪ್‌ಗೆ ನೀಡಲಾಗುತ್ತಿದೆ. ಇಂದಿರಾನಗರ ಈಗಾಗಲೇ ವ್ಯಾಪಕ ವಾಣಿಜ್ಯೀಕರಣವಾಗಿ ಮಾರ್ಪಟ್ಟಿದೆ. ಮತ್ತೆ ಇಲ್ಲಿ ಕಮರ್ಷಿಯಲ್ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಲಾಗುತ್ತಿದೆ.

ಬ್ರಾಂಡ್ ಬೆಂಗಳೂರು ಅಂದ್ರೆ ಜನರ ಜೀವನ ಅಭಿವೃದ್ಧಿಯಾಗುವ ರೀತಿ ಇರಬೇಕು. ಡಿ.ಕೆ.ಶಿವಕುಮಾರ್ ಹೇಳುತ್ತಿರುವ ರೀತಿಯಲ್ಲ. ಇಷ್ಟು ಹಳೆಯ ಇಂದಿರಾನಗರ ಬಿಡಿಎ ಕಾಂಪ್ಲೆಕ್ಸ್‌ನಲ್ಲಿ ಮರಗಳನ್ನು ಬೆಳೆಸಿ, ಪ್ಲೇಗ್ರೌಂಡ್, ಲೈಬ್ರೆರಿಯನ್ನು ಮಾಡಬಹುದು. ಇದರಿಂದ ಸ್ಥಳೀಯ ಜನರಿಗೆ ಸಹಾಯವಾಗುತ್ತದೆ ಎಂದರು.

49 ಕೋಟಿ ರೂ. ಲಾಭಕ್ಕಾಗಿ ಬಿಡಿಎ ಸಾವಿರಾರು ಕೋಟಿ ರೂ. ಬೆಲೆಬಾಳುವ ಕಾಂಪ್ಲೆಕ್ಸ್ ಅನ್ನು ಭೂಗಳ್ಳರಿಗೆ ನೀಡುತ್ತಿರುವುದು ನಿಜಕ್ಕೂ ಹೇಸಿಗೆ ಕೆಲಸ. ಬೆಂಗಳೂರನ್ನ ಕಾಂಕ್ರೀಟ್ ಕಾಡನ್ನಾಗಿ ಮಾಡಬೇಡಿ. ಭೂಗಳ್ಳರಿಗೆ ಇಂದಿರಾ ನಗರ ಅಥವಾ ಬೆಂಗಳೂರಿನ ಬೇರೆ ಯಾವುದೇ ಬಿಡಿಎ ಕಾಂಪ್ಲೆಕ್ಸ್‌ಗಳನ್ನು ನೀಡಲು ಆಮ್ ಆದ್ಮಿ ಪಕ್ಷ ಬಿಡುವುದಿಲ್ಲ ಎಂದರು.

ಇನ್ನು ಇದು ನಿಲ್ಲುವವರೆಗೂ ಹೋರಾಟ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಪಬ್ ಮತ್ತು ಬಾರ್‌ಗಳಿರುವುದು ಇಂದಿರಾನಗರದಲ್ಲಿ. ಸಾರ್ವಜನಿಕರಿಗೆ ಉಪಯೋಗವಾಗುವಂತಹ ಕೆಲಸಗಳನ್ನು ಮಾಡಿ. ಕಾಂಪ್ಲೆಕ್ಸ್ ಅನ್ನು ಶಾಪಿಂಗ್ ಮಾಲ್ ಅನ್ನಾಗಿ ಮಾಡಿ ಜನರಿಗೆ ತೊಂದರೆ ಕೊಡಬೇಡಿ ಎಂದು ಹೇಳಿದರು.

ಭೂಗಳ್ಳರ ಆಸೆಗಾಗಿ ಜನರ ಜೀವನವನ್ನು ಒತ್ತೆ ಇಡಬೇಡಿ. ಪ್ರತಿಯೊಂದು ಬಿಡಿಎ ಕಾಂಪ್ಲೆಕ್ಸ್‌ಗೆ ತೆರಳಿ ಈ ಬಗ್ಗೆ ಹೋರಾಡಲಾಗುವುದು. ಯಾವುದೇ ಕಾರಣಕ್ಕೂ ಆಮ್ ಆದ್ಮಿ ಪಾರ್ಟಿ ಇದಕ್ಕೆ ಅವಕಾಶ ನೀಡುವುದಿಲ್ಲ. 30 ರಿಂದ 40 ವರ್ಷದ ಮರಗಳು ಇಲ್ಲಿವೆ. ಸಾರ್ವಜನಿಕರ ಆಸ್ತಿ ಸಾರ್ವಜನಿಕರಿಗೆ ಉಪಯೋಗವಾಗುವಂತೆ ಮಾಡಿ. ಇದೀಗ ಶಾಪಿಂಗ್ ಮಾಲ್ ಆಗಿ ಪರಿವರ್ತಿಸಲು ನಾವು ಬಿಡುವುದಿಲ್ಲ ಎಂದರು.

ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ ಮಾತನಾಡಿ, ಸರ್ಕಾರಿ ಆಸ್ತಿಯಲ್ಲಿ ಶಾಪಿಂಗ್ ಮಾಲ್‌ಗಳನ್ನು ಮಾಡಿದಾಗ ಅದು ಶ್ರೀಮಂತರಿಗಷ್ಟೇ ಉಪಯೋಗವಾಗುತ್ತದೆ. ಸಾರ್ವಜನಿಕ ಆಸ್ತಿ ಇದ್ದಾಗ ಮಾತ್ರ ಬಡವರಿಗೆ ಉಪಯೋಗವಾಗುತ್ತದೆ. ಸಿದ್ದರಾಮಯ್ಯ ಅವರೇ ಬಡವರ ವಿರೋಧಿ ಸರ್ಕಾರವನ್ನಾಗಿ ಮಾಡಬೇಡಿ. ಪಾರ್ಕ್, ಆಟದ ಮೈದಾನವನ್ನಾಗಿ ಮಾಡಿ, ಮರಗಳನ್ನು ನೆಡುವುದರಿಂದ ಹಲವು ಸಮಸ್ಯೆ ನಿವಾರಣೆಯಾಗುತ್ತದೆ ಎಂಧರು.

ಇನ್ನು ಇಲ್ಲಿ ಮಾಲ್ ನಿರ್ಮಾಣವಾದರೆ ಮತ್ತಷ್ಟು ಟ್ರಾಫಿಕ್ ಉಂಟಾಗುತ್ತದೆ. ಅದನ್ನು ತಡೆಯಲು ನಿಮ್ಮ ಬಳಿಯಿರುವ ಯೋಜನೆಯೇನು. ಕೋರಮಂಗಲ ಮತ್ತು ಇಂದಿರಾನಗರದಲ್ಲಿ ಈಗಾಗಲೇ ಟ್ರಾಫಿಕ್ ಜಾಸ್ತಿಯಿದೆ. 7 ಕಾಂಪ್ಲೆಕ್ಸ್‌ಗಳನ್ನು ಶಾಪಿಂಗ್ ಮಾಲ್‌ಗಳನ್ನಾಗಿ ಪರಿವರ್ತಿಸುವ ಅಗತ್ಯವಿಲ್ಲ. ನರೇಂದ್ರ ಮೋದಿ ಮತ್ತು ನಿಮಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ದೂರಿದರು.

ಸಾರ್ವಜನಿಕರಿಂದಲೂ ತೀವ್ರ ವಿರೋಧ: ಇಂದಿರಾನಗರದ ಬಿಡಿಎಸ್ ಕಾಂಪ್ಲೆಕ್ಸ್ ಸುತ್ತಮುತ್ತಲ ಜನರನ್ನು ಮತ್ತು ವ್ಯಾಪಾರಸ್ಥರನ್ನು ಮಾತನಾಡಿಸಿದಾಗ ಅವರು ಬಿಡಿಎನ ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದಿರಾನಗರದಲ್ಲಿರುವ ಕಾಂಪ್ಲೆಕ್ಸ್‌ನಲ್ಲಿ ನಾಗರಿಕರಿಗೆ ಅಗತ್ಯವಾದ ಕಚೇರಿಗಳಿವೆ. ಈ ಕಾಂಪ್ಲೆಕ್ಸ್ ಸಂಪೂರ್ಣವಾಗಿ ಸಾರ್ವಜನಿಕರಿಗೆ ಅಗತ್ಯ ಸೌಕರ್ಯಗಳನ್ನು ಮಾತ್ರ ಹೊಂದಿರಬೇಕು. ಬಿಡಿಎ ಇದೀಗ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಇಳಿದಿದೆ. ಬಿಡಿಎ ಕಾನೂನುಬಾಹಿರ ಕೆಲಸ ಮಾಡಲು ಮುಂದಾಗಿದೆ. ಇದನ್ನು ಯಾವುದೇ ಕಾರಣಕ್ಕೂ ನಾವು ಒಪ್ಪುವುದಿಲ್ಲ ಎಂದರು.

ಸರ್ಕಾರದಿಂದ ಯೋಜನೆಗೆ ಒಪ್ಪಿಗೆ: ಕಾಂಪ್ಲೆಕ್ಸ್‌ಗಳನ್ನು ಶಾಪಿಂಗ್ ಮಾಲ್‌ಗಳನ್ನಾಗಿ ಪರಿವರ್ತಿಸಲು 60 ವರ್ಷಗಳಿಗೆ ಒಪ್ಪಂದ ಮಾಡಿಕೊಂಡಿದ್ದು, ಪ್ರತಿವರ್ಷ ಬಿಡಿಎಗೆ 40 ಕೋಟಿ ರೂ.ಗೂ ಅಧಿಕ ಆದಾಯ ಬರಲಿದೆ ಎನ್ನಲಾಗಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ಈ ಯೋಜನೆಯ ಒಪ್ಪಂದಕ್ಕೆ ರಾಜ್ಯ ಸರ್ಕಾರ ಸಮ್ಮತಿ ನೀಡಿದೆ. ಕೋರಮಂಗಲ, ಎಚ್‌ಎಸ್‌ಆರ್ ಲೇಔಟ್, ಆರ್‌ಟಿ ನಗರ ಮತ್ತು ಸದಾಶಿವನಗರದಲ್ಲಿರುವ ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಎಂ-ಎಫ್‌ಎಆರ್ ಡೆವಲಪರ್ಸ್‌ಗೆ ಬಿಡಿಎ ಗುತ್ತಿಗೆ ನೀಡಿದ್ದು, ಇಂದಿರಾನಗರದಲ್ಲಿರುವ ಕಾಂಪ್ಲೆಕ್ಸ್ ಅನ್ನು ಎಂಬೆಸ್ಸಿ ಗ್ರೂಪ್ ಮರುಅಭಿವೃದ್ಧಿಗೊಳಿಸಲಿದೆ.

ಭೂಗಳ್ಳ ಕೆ.ಜೆ.ಜಾರ್ಜ್‌ಗೆ ಧಿಕ್ಕಾರ, ಭೂಗಳ್ಳ ಎನ್.ಎ. ಹ್ಯಾರಿಸ್‌ಗೆ ಧಿಕ್ಕಾರ, ಬೆಂಗಳೂರಿನ ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಉಳಿಸಿ ಎಂದು ಘೋಷಣೆ ಕೂಗಿದ ಆಮ್ ಆದ್ಮಿ ಪಕ್ಷದ ಹಲವಾರು ಕಾರ್ಯಕರ್ತರು ಮತ್ತು ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...