NEWSನಮ್ಮಜಿಲ್ಲೆನಮ್ಮರಾಜ್ಯ

ಬೆಂಗಳೂರು ವಿಶ್ವವಿಖ್ಯಾತಿಗೆ ಕೆಂಪೇಗೌಡರೇ ಕಾರಣ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ನಾಡಪ್ರಭು ಕೆಂಪೇಗೌಡ ಅವರು ಪ್ರಮುಖ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಅಂಗವಾಗಿ ಜೂನ್‌ 27ರ ಗುರುವಾರ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬೆಂಗಳೂರು ನಗರ ನಿರ್ಮಾತೃವಿಗೆ ಗೌರವ ಸಮರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ನಾಡಪ್ರಭು ಕೆಂಪೇಗೌಡರ 515 ನೇ ಜನ್ಮಾದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡುತ್ತಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಜನಾನುರಾಗಿ ಪ್ರಭುಗಳಾಗಿದ್ದರು ಎಂದರು.

ಇನ್ನು ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದಲ್ಲದೆ ಅನೇಕ ಕೆರೆಗಳನ್ನು ಕಟ್ಟಿಸಿದರು. ಅವರ ಕಾಲದಲ್ಲಿಯೇ ಅತಿ ಹೆಚ್ಚು ದೇವಸ್ಥಾನ, ಕೆರೆಗಳು ನಿರ್ಮಾಣವಾಯಿತು. ವೃತ್ತಿಯಾಧಾರದ ಮೇಲೆ ಚಿಕ್ಕಪೇಟೆ, ದೊಡ್ಡಪೇಟೆ, ನಗರ್ತಪೇಟೆ , ತಿಗಳರಪೇಟೆ, ಬಳೆಪೇಟೆಗಳನ್ನು ನಿರ್ಮಿಸಿ ನಗರವನ್ನು ವ್ಯಾಪಾರ ಕೇಂದ್ರವನ್ನಾಗಿಸಲು ಪ್ರಯತ್ನಪಟ್ಟರು ಎಂದರು.

ಕೆಂಪೇಗೌಡರ ಆಡಳಿತ ನಮಗೆ ಪ್ರೇರಣೆ: ಮೊದಲಬಾರಿಗೆ ಕೆಂಪೇಗೌಡರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ತೀರ್ಮಾನ ಮಾಡಿದ್ದು, ಕೆಂಪೇಗೌಡರ ಪ್ರಾಧಿಕಾರ ರಚನೆ ಮಾಡಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಂದು ಸ್ಮರಿಸಿದರು.

ಇನ್ನು ಕೆಂಪೇಗೌಡ ಅವರ ಆಡಳಿತ ನಮಗೆಲ್ಲ ಪ್ರೇರಣೆಯಾಗಿದೆ. ಅವರ ಜನಪರ ಕಾಳಜಿ ಇಂದಿನ ಪ್ರತಿಯೊಬ್ಬ ರಾಜಕಾರಣಿಗಳು ಮೈಗೂಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ