ಬೀಡನಹಳ್ಳಿ: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದ ನಿವಾಸಿ ಮೈಸೂರಣ್ಣ ನರಸಿಂಹಗೌಡ (80) ಗುರುವಾರ ಬೆಳಗ್ಗೆ ನಿಧನರಾದರು.
ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮದ ಮೃತ ನರಸಿಂಹಗೌಡರು ಬಹುದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ಮೃತರು ಪತ್ನಿ ನಿಂಗಮ್ಮ, ಪುತ್ರಿ ಪದ್ಮಾ ಹಾಗೂ ಅಳಿಯ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
Related

Megha