ಬನ್ನೂರು: ಹೋಬಳಿಯ ಬೀಡನಹಳ್ಳಿ ಗ್ರಾಮದ ಧರ್ಮಕ್ಷೇತ್ರ ಶ್ರೀ ನಂದಿಬಸವೇಶ್ವರ ಸ್ವಾಮಿಯ 13ನೇ ಕೊಂಡ ಮಹೋತ್ಸವ ಸೋಮವಾರ ಮಾ.3ರ ಮುಂಜಾನೆ 6ರಿಂದ 6.45ರವರೆಗೆ ವಿಜೃಂಭಣೆಯಿಂದ ನೆರವೇರಿತು.
ಮೈಸೂರು ಜಿಲ್ಲೆ, ತಿ.ನರಸೀಪುರ ತಾಲೂಕಿನ, ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮದ ಶ್ರೀ ನಂದಿಬಸವೇಶ್ವರ ಸ್ವಾಮಿಯ ಕೊಂಡವನ್ನು ಕಾಶಿವೇಷಧಾರಿ ಮಹದೇವಸ್ವಾಮಿ ಅವರು ಗಜಗಾಂಭೀರ್ಯದಿಂದ ಹಾಯ್ದರು. ಇವರ ನಂತರ ಶ್ರೀಸ್ವಾಮಿಯ ಗುಡ್ಡಪ್ಪನವರಾದ ನಂಜುಂಡೇಗೌಡ ಅವರು ಕೂಡ ಈಬಾರಿ ಭಾರಿ ನಿಧಾನವಾಗಿ ಕೊಂಡ ಹಾಯುವ ಮೂಲಕ ಭಕ್ತರಲ್ಲಿ ಭಕ್ತಿಯ ಸೆಲೆಯನ್ನು ಮೂಡಿಸಿದರು.
ಇನ್ನು ಕೊಂಡ ಹಾಯುವುದಕ್ಕೂ ಮುನ್ನಾ ಮುಂಜಾನೆ ಶ್ರೀಸ್ವಾಮಿಯ ಸನ್ನಿಧಿಯಿಂದ ಶ್ರೀಸ್ವಾಮಿಯ ಬಸವನ ಜತೆಗೆ ಗ್ರಾಮದೇವತೆ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆಯೊಂದಿಗೆ ರಾಜ ಬೀದಿಯಲ್ಲಿ ಮೆರವಣಿಗೆ ಮೂಲಕ ಗುರುಸ್ವಾಮಿ ಅವರ ಮನೆಗೆ ಕರೆತರಲಾಯಿತು.
ಗುರುಸ್ವಾಮಿ ಅವರ ಮನೆಯಲ್ಲಿ ಗ್ರಾಮದೇವತೆ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆಗಳಿಗೆ ಹೂ ಹೊಂಬಾಳೆ ಮಾಡಿದ ನಂತರ ಶ್ರೀಸ್ವಾಮಿಗೆ ಹರಕೆ ಹೊತ್ತ ಭಕ್ತರು ಬಾಯಿಬೀಗ ಚುಚ್ಚಿಸಿಕೊಂಡರು. ಈ ವೇಳೆ ತಮಟೆ, ಕೊಂಬು ಕಹಳೆಗಳ ಮಂಗಳವಾದ್ಯಗಳೊಂದಿಗೆ ಸಾವಿರಾರು ಭಕ್ತರು ಮೆರವಣಿಗೆ ಮೂಲಕ ಶ್ರೀಸ್ವಾಮಿಯ ಆವರಣ ತಲುಪಿದರು. ರಾತ್ರಿಯಿಡಿ ಹುಣಸೆ ಕಟ್ಟಿಗೆಗಳನ್ನು ಸುಟ್ಟು ಬೇಸಿಗೆ ಸೂರ್ಯನನ್ನು ಮೀರಿಸುವಂತೆ ಸಿದ್ಧಗೊಳಿಸಿದ್ದ ಕೊಂಡದ ಬಳಿ ಎಲ್ಲರೂ ಬಂದು ಸೇರಿದರು.
ಬಾಯಿಬೀಗ ಹರಕೆ ಹೊತ್ತಿದ್ದ ಭಕ್ತರು ಪಂಜಿನ ಸೇವೆಯನ್ನು ಮೆರವಣಿಗೆ ಸಾಗಿದ ದಾರಿಯುದ್ದಕ್ಕೂ ಮಾಡಿ ಶ್ರೀಸ್ವಾಮಿಗೆ ಭಕ್ತಿಯಿಂದ ನಮಿಸಿದರು. ಇನ್ನು ಕೊಂಡದ ಬಳಿ ಬರುತ್ತಿದ್ದಂತೆ ಕೊಂಗ ಬೀಸಿ ಕೆಂಡದ ಮೇಲೆ ಇದ್ದ ಬೂದಿಯನ್ನು ತೆರವುಗೊಳಿಸಲಾಯಿತು. ಬಳಿಕ ಕಾಶಿಯ ವೇಷಧಾರಿ ಮಹದೇವಸ್ವಾಮಿ, ಅವರ ಹಿಂದೆ ಶ್ರೀಸ್ವಾಮಿಯ ದೇವರ ಗುಡ್ಡಪ್ಪನವರಾದ ನಂಜುಂಡೇಗೌಡ ಅವರು ಕೊಂಡ ಹಾಯ್ದರು.
ಕೊಂಡ ಹಾಯುವುದನ್ನು ಪ್ರತಿಯೊಬ್ಬರೂ ನೋಡಲೆಂದು ಬೆಳ್ಳಿ ಪರದೆಯ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ ನೆರೆದಿದ್ದ ಸಾವಿರಾರು ಭಕ್ತರು ಕೊಂಡ ಹಾಯುವುದನ್ನು ತಮ್ಮ ಕಣ್ತುಂಬಿಕೊಂಡು ಶ್ರೀಸ್ವಾಮಿಯ ಕೃಪೆಗೆ ಪಾತ್ರರಾದರು.
ಇನ್ನು ಭಾನುವಾರ ಬಂಡಿಯುತ್ಸವ ನಡೆಯಿತು. ಇಂದು ಕೊಂಡೋತ್ಸವ ನೆರವೇರುವ ಮೂಲಕ ಬಂಡಿಕೊಂಡೋತ್ಸವ ಪೂರ್ಣಗೊಂಡಿತು. ಒಟ್ಟಾರೆ ಕಳೆದ 12 ವರ್ಷದಲ್ಲೇ ಇಂದು ನಡೆದ 13ನೇ ಕೊಂಡೋತ್ಸವ ಭಾರಿ ವಿಜೃಂಭಣೆಯಿಂದ ಕೂಡಿತ್ತು.
Related

You Might Also Like
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...