NEWSVideosಮೈಸೂರುಸಂಸ್ಕೃತಿ

ಬೀಡನಹಳ್ಳಿ: ಏಳೂರಲ್ಲಿ ಏಕಕಾಲಕ್ಕೆ ಅದ್ದೂರಿಯಾಗಿ ಜರುಗಿದ ಮಾರಿಹಬ್ಬ, ತಂಬಿಟ್ಟಿನಾರತಿ ಬೆಳಗಿದ ಹೆಂಗಳೆಯರು

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಪ್ರತಿ ವರ್ಷ ಬೀಡನಹಳ್ಳಿ ಸೇರಿದಂತೆ ಏಕಕಾಲಕ್ಕೆ ನಡೆಯುವ ಏಳೂರಿನ ಮಾರಿಹಬ್ಬ ಮಂಗಳವಾರ (ಫೆ.10) ಮತ್ತು ಬುಧವಾರ (ಫೆ.11) ಆಯಾಯ ಗ್ರಾಮಗಳಲ್ಲಿ ವಿಜೃಂಭಣೆಯಿಂದ ನೆರವೇರಿತು.

ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯಲ್ಲಿ ಬರುವ ಗ್ರಾಮಗಳಾದ ಬೀಡನಹಳ್ಳಿ, ಮಾಕನಹಳ್ಳಿ, ಬಸವನಹಳ್ಳಿ, ಬನ್ನೂರು, ಬೆಟ್ಟಹಳ್ಳಿ, ಚಾಮನಹಳ್ಳಿ ಮತ್ತು ಅತ್ತಹಳ್ಳಿ ಗ್ರಾಮಗಳಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿತ್ತು. ತಲಾತಲಾಂತರದಿಂದಲೂ ಏಕಕಾಲಕ್ಕೆ ಈ ಏಳು ಗ್ರಾಮಗಳಲ್ಲೂ ಹಬ್ಬ ಆಚರಣೆ ಮಾಡಿಕೊಂಡು ಬರಲಾಗುತ್ತಿದ್ದು, ಅದರಂತೆ ಈ ವರ್ಷ ಫೆ. 10 ಮತ್ತು 11ರಂದು ಹಬ್ಬದ ಸಡಗರದಲ್ಲಿ ಗ್ರಾಮಸ್ಥರು ಮಿಂದೆದ್ದರು.

ಹಬ್ಬದ ಅಂಗವಾಗಿ ಮಂಗಳವಾರ ಆಯಾಯ ಗ್ರಾಮ ದೇವತೆ ಮಾರಮ್ಮನಿಗೆ ವಿಶೇಷವಾಗಿ ಮೊದಲ ಪೂಜೆ (ತಂಪು ಸೇವೆ) ಕಾರ್ಯಕ್ರಮ ನೆರವೇರಿಸಲಾಯಿತು. ಈ ಹಿನ್ನೆಲೆಯಲ್ಲಿ ಮಂಗಳವಾರ ಗ್ರಾಮದ ಹೆಂಗಳೆಯರು ಬಿಂದಿಗೆಯಲ್ಲಿ ನೀರು ತುಂಬಿಸಿ (ಮೀಸಲು ನೀರು) ಗಂಗೆ ಪೂಜೆ ನೆರವೇರಿಸಿ ಮನೆಗೆ ತೆಗೆದುಕೊಂಡು ಹೋಗುವ ಸಂಭ್ರಮ ನೋಡುವುದೇ ಚಂದವಾಗಿತ್ತು.

ಇನ್ನು ಬುಧವಾರ ಮುಂಜಾನೆ ಮಡೆ ಊಯ್ಯುವರು: ಉತ್ತನಹಳ್ಳಿ ಮಾರಮ್ಮನಿಗೆ ಗ್ರಾಮದ ಪ್ರತಿ ಮನೆಯಿಂದ ಒಬ್ಬರಂತೆ ಮುಂಜಾನೆ 5.30ರಲ್ಲಿ ಒಂದೆಡೆ ಸೇರಿ ಮಡೆ ಊಯ್ದರು. (ಹೊಸ ಮಡಿಕೆ, ತಂದು ಅದರಲ್ಲಿ ಅಕ್ಕಿ, ಬೇಳೆ, ಉಪ್ಪು ತಕ್ಕಷ್ಟು ನೀರು ಹಾಕಿ ಅನ್ನಮಾಡುವುದು) ನಂತರ ಅನ್ನ ಪ್ರಸಾದ ಸಿದ್ಧವಾದ ಮಡಿಕೆಯ ಬಾಯಿಯನ್ನು ಅಡಕೆಯ ಎಲೆ( ಒಡಾಳೆ)ಯಿಂದ ಮುಚ್ಚಿ ಅದನ್ನು ಒಡಾಳೆ ದಾರದಿಂದಲೇ ಕಟ್ಟಿದರು. ಈ ವೇಳೆ ಜವನ ಬೇವಿನ ಸೊಪ್ಪು ಕಟ್ಟುವ ಮೂಲಕ ಅಲಂಕರಿಸಿ ತಾವು ಮಡೆ ಊಯ್ಯಿದಿರುವ ಮಡಿಕೆಯನ್ನು ಗುರುತು ಮಾಡಲು ತಮ್ಮ ಮನೆತದ ಹೆಸರನ್ನು ಬರೆದರು.

ಮತ್ತೆ ಬುಧವರಾ ಮಧ್ಯಾಹ್ನ 130 ನಂತರ ಗ್ರಾಮದ ಹೆಂಗಳೆಯರು ತಂಬಿಟ್ಟಿನಾರತಿ ಜತೆಗೆ ಹಣ್ಣು ಕಾಯಿ ಭೂಪ ಸಮೇತ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆ ಹೊತ್ತು ಬೀಡನಹಳ್ಳಿ ಗ್ರಾಮದ ರಾಜ ಬೀದಿಗಳ ಮೂಲಕ ಮೆರವಣಿಗೆ ಹೊರಟು ಮಡೆ ಊಯ್ಯಿದಿರುವ ಸ್ಥಳ ತಲುಪಿದರು.

ಈ ಸ್ಥಳದಲ್ಲಿ ತಮ್ಮ ಮನೆಯ ಗಂಡುಮಕ್ಕಳು ಮುಂಜಾನೆ ಮಡೆ ಊಯ್ಯಿದಿರುವ ಮಡಿಕೆಯ ಬಳಿ ಈ ಹೆಂಗಳೆಯರು ಮೆರವಣಿಗೆ ಮೂಲಕ ಹೊತ್ತು ತಂದ ತಂಬಿಟ್ಟಿನಾರತಿ ಇಟ್ಟು ಹಣ್ಣು ಮುರಿದು, ಕಾಯಿ ಒಡೆದು ಗಂಧದಕಡ್ಡಿ ಹಚ್ಚಿ ಭಕ್ತಿಭಾವದಿಂದ ಪೂಜೆ ನೆರವೇರಿಸಿದರು.

ಇದನಕ್ಕೂ ಮುನ್ನ ಗ್ರಾಮದ ರಾಜ ಬೀದಿಯಲ್ಲಿ ಮೆರವಣಿಗೆ ಬಂದ ಪೂಜೆಗಳನ್ನು ಬನ್ನೂರು ಹೆಗ್ಗೆರೆಗೆ ತಂದು ಮತ್ತೆ ಹೂ ಹೊಂಬಾಳೆ ಮಾಡಿದ ಬಳಿಕ ಬೀಡನಹಳ್ಳಿ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆಗಳನ್ನು ಹೊತ್ತ ದೇವರ ಗುಡ್ಡಪ್ಪಂದಿರು ಮಡೆ ಊಯ್ಯಿದಿರುವ ಸ್ಥಳಕ್ಕೆ ತಲುಪಿ ಅಲ್ಲಿ ಮೂರು ಸುತ್ತು ಪ್ರದಕ್ಷಿಣೆ ಹಾಕಿದರು. ಬಳಿಕ ಮಡೆಗಳ ಮೇಲೆ ತೀರ್ಥ ಸಂಪ್ರೊಕ್ಷಣೆ ಮಾಡಿದರು.

ಆ ನಂತರ ಮಡೆ ಊಯ್ಯಿದಿರುವ ಮಡಿಕೆಗಳನ್ನು ಹೊತ್ತ ಯುವಕರು ಮನೆ ಬಂದರು. ಈ ವೇಳೆ ಬಾಗಿಲ ಬಳಿ ಮಡೆ ಹೊತ್ತವರ ಪಾದಪೂಜೆಯನ್ನು ಅಂದರೆ ಗಂಗೆಯನ್ನೆರೆಯುವ ಮೂಲಕ ದೇವರ ಸ್ವರೂಪಿ ಎಂದು ಮಡೆಯನ್ನು ಮನೆಗೆ ಬರಮಾಡಿಕೊಂಡದರು. ಈ ಮಡೆ ಪ್ರಸಾದವನ್ನು ಮನೆಯ ಪ್ರತಿ ಸದಸ್ಯರು ಊಟಮಾಡುವುದರೊಂದಿಗೆ ಸ್ವೀಕರಿಸಿದರು. ಈ ಮೂಲಕ ಮಡೆ ಪ್ರಸಾದ ಪೂರ್ಣಗೊಂಡಿತು. ಜತೆಗೆ ಹಬ್ಬದ ಸಡಗರಕ್ಕೂ ತೆರೆ ಎಳೆಯಲಾಯಿತು.

Deva
the authorDeva

Leave a Reply

error: Content is protected !!
Latest news
KSRTC: ಶೇ.12-15ರ ನಡುವೆ ವೇತನ ಹೆಚ್ಚಳ ಬಹುತೇಕ ಖಚಿತ, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ! ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ, ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ... KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್ ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ! ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ನಿಧನ NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ