NEWSನಮ್ಮರಾಜ್ಯರಾಜಕೀಯ

ಸಿಗ್ನಲ್‌ಗಳಲ್ಲಿ ಭಿಕ್ಷುಕರು, ಸಮಾರಂಭಗಳಲ್ಲಿ ಮಂಗಳಮುಖಿಯರಿಂದ ಮುಜುಗರ : ಮೇಲ್ಮನೆಯಲ್ಲಿ ಭಾರಿ ಚರ್ಚೆ

ಸಂಪೂರ್ಣ ಭಿಕ್ಷಾಟನೆ ನಿಲ್ಲಿಸಲು ಮುಂದಿನ ದಿನಗಳಲ್ಲಿ ಕ್ರಮ ಎಂದ ಕೋಟ ಶ್ರೀನಿವಾಸ ಪೂಜಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಭಿಕ್ಷುಕರ ಹಾವಳಿ ಮತ್ತು ಸಮಾರಂಭಗಳಲ್ಲಿ ಮಂಗಳಮುಖಿಯರಿಂದ ಆಯೋಜಕರು ಅನುಭವಿಸುತ್ತಿರುವ ಕಿರಿಕಿರಿ ತಪ್ಪಿಸಲು ಸರ್ಕಾರ ಮುಂದಾಗಬೇಕು ಎಂಬ ಬಗ್ಗೆ ವಿಧಾನಪರಿಷತ್‌ನಲ್ಲಿ ಭಾರಿ ಚರ್ಚೆಯೇ ನಡೆಯಿತು.

ನಗರದ ಸಿಗ್ನಲ್‌ಗಳಲ್ಲಿ ಭಿಕ್ಷುಕರು ಹಾಗೂ ಸಮಾರಂಭಗಳಲ್ಲಿ ಮಂಗಳಮುಖಿಯರು ಮುಜುಗರ ಉಂಟುಮಾಡುವ ಪ್ರಸಂಗಗಳು ಕಂಡುಬಂದಿದ್ದು, ಎರಡು ಮೂರು ತಿಂಗಳಲ್ಲಿ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ನಗರದಲ್ಲಿ ವಾಹನ ದಟ್ಟಣೆ ಇರುವ ಸಿಗ್ನಲ್‌ಗಳಲ್ಲಿ ಭಿಕ್ಷುಕರ ಹಾವಳಿ ಹೆಚ್ಚಾಗಿರುವ ಕುರಿತು ಬಿಜೆಪಿ ಸದಸ್ಯ ಅ. ದೇವೇಗೌಡ ಅವರು ವಿಧಾನಪರಿಷತ್ ನಲ್ಲಿ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ.

ಭಿಕ್ಷುಕರ ಹಾವಳಿ ಹೆಚ್ಚಾಗಿರುವುದನ್ನು ಸಚಿವರು ಉತ್ತರದಲ್ಲಿ ಒಪ್ಪಿದ್ದಾರೆ. ಈ ಕುರುತು ಕ್ರಮ ಕೈಗೊಂಡಿರುವುದನ್ನು ವಿವರಿಸಿರುವ ಸಚಿವರು, ಕರ್ನಾಟಕ ಭಿಕ್ಷಾಟನಾ ನಿಷೇಧ ಅಧಿನಿಯಮ 1975ರ ಪ್ರಕಾರ ಭಿಕ್ಷಾಟನೆಯನ್ನು ನಿಷೇಧಿಸಲಾಗಿದೆ.

ಭಿಕ್ಷಾಟನೆಯಲ್ಲಿ ತೊಡಗಿರುವ 18 ವರ್ಷ ಮೇಲ್ಪಟ್ಟ ಮಹಿಳೆಯರು ಹಾಗೂ 16 ವರ್ಷ ಮೇಲ್ಪಟ್ಟ ಪುರುಷರನ್ನು ಬಂಧಿಸಲು ಅವಕಾಶವಿದೆ. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರು ಹಾಗೂ 16 ವರ್ಷಕ್ಕಿಂತ ಕಡಿಮೆ ಬಯಸ್ಸಿನ ಪುರುಷರನ್ನು ಬಂಧಿಸಲು ಅವಕಾಶವಿಲ್ಲ. ಅಂಥವರನ್ನು ಮಹಿಳಾ ಮತ್ತು ಮಕ್ಕಳ ಹಿತರಕ್ಷಣಾ ಸಮಿತಿಗೆ ಒಪ್ಪಿಸಲಾಗುತ್ತದೆ.

ಸಾರ್ವಜನಿಕ ಸ್ಥಳಗಳಲ್ಲಿ ಭಿಕ್ಷೆ ಬೇಡುತ್ತಿರುವುದು ಕಂಡುಬಂದರೆ ಸಾರ್ವಜನಿಕರು 10581 ಅಥವಾ 9482300400 ಸಂಖ್ಯೆಗೆ ಕರೆ ಮಾಡಬಹುದು.

ಭಿಕ್ಷಾಟನೆ ಮಾಡುತ್ತಿರುವವರನ್ನು ಬಂಧಿಸಲು ಹಾಗೂ ರಕ್ಷಿಸಲು 8 ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. ಆಗಸ್ಟ್ ಅಂತ್ಯಕ್ಕೆ 1565 ಪುರುಷರು ಹಾಗೂ 272 ಮಹಿಳಾ ಭಿಕ್ಷುಕರನ್ನು ಬಂಧಿಸಲಾಗಿದೆ. ಇವರಲ್ಲಿ 15 ಮಂಗಳಮುಖಿಯರು, 9 ಮಕ್ಕಳನ್ನೂ ರಕ್ಷಣಿ ಮಾಡಲಾಗಿದೆ. ಪುನಃ ಭಿಕ್ಷಾಟನೆಯಲ್ಲಿ ತೊಡಗದಂತೆ ಎಚ್ಚರಿಕೆ ನೀಡಿ, ಮುಚ್ಚಳಿಕೆ ಬರೆಸಿಕೊಂಡು ಮಂಗಳಮುಖಿಯರನ್ನು ಬಿಡುಗಡೆ ಮಾಡಲಾಗಿದೆ.

ಈ ಕುರಿತು ಚರ್ಚಿಸಲು ವಿಶೇಷ ಸಭೆ ಕರೆಯಾಲಾಗಿದೆ. ಮೂರ್ನಾಲ್ಕು ರೀತಿಯ ಭಿಕ್ಷುಕರಿದ್ದಾರೆ. ಮಕ್ಕಳನ್ನು ಬಾಡಿಗೆ ತೆಗೆದುಕೊಂಡು ಮತ್ತು ಬರುವ ಔಷಧ ಕೊಟ್ಟು ಭಿಕ್ಷಾಟಣಿ ಮಾಡಲಾಗುತ್ತಿತ್ತು. ಇದೀಗ ಪ್ರಥಮ ಹಂತದ ಕಾರ್ಯಕ್ರಮ ಮಾಡಿ ನಿಯಂತ್ರಣಕ್ಕೆ ತರಲಾಗಿದೆ.

ಮಂಗಳ ಮುಖಿಯರು ಸಮಾರಂಭಗಳಲ್ಲಿ ಮುಜುಗರ ಉಂಟು ಮಾಡುತ್ತಿದ್ದಾರೆ. ಕಾನೂನು ಮಂತ್ರಿಗಳ ಜತೆ ಮಾತನಾಡಿ, ಅವರ ರಕ್ಷಣೆ ಮಾಡಲು ನಿರ್ಧಾರ ಮಾಡಲಾಗಿದೆ. ಎರಡೂರು ತಿಂಗಳ ಕಾಲದಲ್ಲಿ ಈ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುತ್ತೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...