NEWSನಮ್ಮಜಿಲ್ಲೆರಾಜಕೀಯ

ಬೆಳಗಾವಿ: ಮಹಾನಗರ ಪಾಲಿಕೆ ಮೇಯರ್‌ಆಗಿ ಶೋಭಾ ಸೋಮನಾಚೆ, ಉಪಮೇಯರ್‌ಆಗಿ ರೇಷ್ಮಾ ಪಾಟೀಲ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆದು‌ ಕೊನೆಯಲ್ಲಿ ಮೇಯರ್‌ ಆಗಿ ಶೋಭಾ ಸೋಮನಾಚೆ ಹಾಗೂ ಉಪಮೇಯರ್ ಆಗಿ ರೇಷ್ಮಾ ಪಾಟೀಲ ಆಯ್ಕೆಯಾಗಿದ್ದಾರೆ.

ಈ ಮೂಲಕ ಚುನಾವಣೆಯಲ್ಲಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಬಿಜೆಪಿ ರಣತಂತ್ರ ರೂಪಿಸಿದ್ದ ತಂತ್ರ ಫಲನೀಡಿದ್ದು, ಮರಾಠಾ ಸಮುದಾಯದ ಶೋಭಾ ಸೋಮನಾಚೆ ಮೇಯರ್, ರೇಷ್ಮಾ ಪಾಟೀಲ್ ಉಪಮೇಯರ್ ಆಗಿ ಆಯ್ಕೆಯಾಗಿದರು.

58 ವಾರ್ಡ್‌ಗಳ ಪೈಕಿ 35 ವಾರ್ಡ್‌ಗಳಲ್ಲಿ ಗೆದ್ದಿರುವ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿತ್ತು. ಆದರೂ ಶಾಸಕರಾದ ಅಭಯ ಪಾಟೀಲ್, ಅನಿಲ್ ಬೆನಕೆ ಸಮ್ಮುಖದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಮೇಯರ್ ಸ್ಥಾನ ಯಾರಿಗೆ? ಉಪಮೇಯರ್ ಸ್ಥಾನ ಯಾರಿಗೆ ಎಂಬ ಬಗ್ಗೆ ಚರ್ಚೆಯಾಗಿತ್ತು.

ಮುಖ್ಯವಾಗಿ ಮೇಯರ್ ಸ್ಥಾನ ಮಹಿಳೆ, ಉಪಮೇಯರ್ ಹಿಂದುಳಿದ ವರ್ಗ ಬಿ ಮಹಿಳೆಗೆ ಮೀಸಲಾಗಿದ್ದರಿಂದ ಈ ಮೀಸಲು ಗೊಂದಲದಿಂದ ಮೇಯರ್ ಆಯ್ಕೆಯೇ ನಡೆದಿರಲಿಲ್ಲ. ಸದ್ಯ ಮೇಯರ್ ಸ್ಥಾನಕ್ಕೆ 7 ಮಂದಿ ಅರ್ಹರ ಪೈಕಿ 5 ಕಾರ್ಪೊರೇಟರ್‌ಗಳ ಪೈಪೋಟಿ ನಡೆಸಿದ್ದರು. ಈ ನಡುವೆಯೂ ಮರಾಠಾ ಸಮುದಾಯದ ಶೋಭಾ ಸೋಮನಾಚೆ ಮೇಯರ್, ರೇಷ್ಮಾ ಪಾಟೀಲ್ ಉಪಮೇಯರ್ ಆಗಿ ಆಯ್ಕೆಯಾಗಿ ಪಾಲಿಕೆ ಗದ್ದಿಗೆ ಏರಿದ್ದಾರೆ.

ಈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕನ್ನಡ ಭಾಷಿಕ ಸದಸ್ಯರಿಗೆ ಮೇಯರ್ ಸ್ಥಾನ ನೀಡಲು ಕನ್ನಡಪರ ಸಂಘಟನೆಗಳ ಆಗ್ರಹಿಸಿದ್ದವು. ಮತ್ತೊಂದೆಡೆ ಮೇಯರ್ ಸ್ಥಾನಕ್ಕಾಗಿ ಲಿಂಗಾಯತ ಮರಾಠಾ ಸಮುದಾಯ ಮಧ್ಯೆ ಪೈಪೋಟಿ ನಡೆದಿತ್ತು. ಸದ್ಯ ಸಭಾನಾಯಕ ಸ್ಥಾನ ಕನ್ನಡ ಭಾಷಿಕ ಸದಸ್ಯ, ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಮರಾಠಾ ಸಮುದಾಯ ಹಾಗೂ ಮರಾಠಿ ಭಾಷಿಕ ಸದಸ್ಯೆಗೆ ಮೇಯರ್, ಉಪಮೇಯರ್ ಸ್ಥಾನ ನೀಡಬೇಕು ಎಂದು ಬಿಜೆಪಿ ಇವರನ್ನು ಆಯ್ಕೆ ಮಾಡಿದೆ.

ಮೇಯರ್, ಉಪಮೇಯರ್ ಆಯ್ಕೆಗೂ ಮುನ್ನವೇ ಸಭಾನಾಯಕನ ಆಯ್ಕೆ ಮಾಡಲಾಗಿದ್ದು ಮಹಾನಗರ ಪಾಲಿಕೆಯ 36ನೇ ವಾರ್ಡ್ ಸದಸ್ಯ ರಾಜಶೇಖರ ಡೋಣಿ ಸಭಾನಾಯಕರನ್ನಾಗಿ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ಸಭಾನಾಯಕನ ಆಯ್ಕೆ ಮಾಡಲಾಗಿದೆ.

ಮುಂಚೆ ಭಾಷಾ ಆಧಾರಿತ ಚುನಾವಣೆ ನಡೆದು ಎಂಇಎಸ್ ಗೆಲುವು ಸಾಧಿಸುತ್ತ ಬಂದಿತ್ತು. ಇದೇ ಮೊದಲ ಬಾರಿ ಪಕ್ಷದ ಚಿಹ್ನೆ ಮೇಲೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆದಿತ್ತು. 2021ರ ಸೆ.3ರಂದು ಚುನಾವಣೆ ನಡೆದು ಸೆ.6ಕ್ಕೆ ಫಲಿತಾಂಶ ಬಂದಿದ್ದು ಇಂದು ಮೇಯರ್‌ ಮತ್ತು ಉಪಮೇಯರ್‌ ಆಯ್ಕೆಯಾಗಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...