NEWSನಮ್ಮಜಿಲ್ಲೆಸಂಸ್ಕೃತಿ

ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ದಕ್ಷಿಣ ಭಾರತದ ಅತ್ಯಂತ ಸುಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿರುವ ಬೆಳಗಾವಿ ಜಿಲ್ಲೆಯ ಹೆಸರಾಂತ ಶಕ್ತಿ ದೇವಿಯ ಕ್ಷೇತ್ರದಲ್ಲಿ ಈ ಬಾರಿ ₹ 1.96 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗುವ ಮೂಲಕ ದಾಖಲೆ ಪ್ರಮಾಣದಲ್ಲಿ ಕಾಣಿಕೆ ನೀಡಿದ್ದಾರೆ ಭಕ್ತರು.

ಹೌದು! ಸವದತ್ತಿ ಯಲ್ಲಮ್ಮ ಗುಡ್ಡದ ಯಲ್ಲಮ್ಮ ಕರ್ನಾಟಕವಲ್ಲದೆ ಇಡೀ ದಕ್ಷಿಣ ಭಾರತದ ಭಕ್ತರು ಆಗಮಿಸುವ ಸುಕ್ಷೇತ್ರವಾಗಿದೆ. ಈ ಸಲ ಅಂದರೆ ಏಪ್ರಿಲ್ 1 ರಿಂದ ಮೇ 20ರ ಅವಧಿಯಲ್ಲಿ ಭಕ್ತರು ಹಾಕಿದ ಕಾಣಿಕೆ ₹ 1.96 ಕೋಟಿ ರೂ. ಮೌಲ್ಯದ್ದಾಗಿದೆ. ಅದರಲ್ಲಿ 1.71 ಕೋಟಿ ರೂ. ನಗದು, 20.44 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 4.44 ಲಕ್ಷ ರೂ.ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ.

ಪ್ರತಿನಿತ್ಯ ಅಪಾರ ಸಂಖ್ಯೆಯಲ್ಲಿ ಆಗಮಿಸಿರುವ ಭಕ್ತರು ತಮ್ಮ ಇಷ್ಟಾರ್ಥ ಈಡೇರಿಸುವಂತೆ ಕೋರಿ ದೇವಿಗೆ ಕಾಣಿಕೆ ಸಮರ್ಪಿಸಿದ್ದಾರೆ. ಪ್ರತಿವರ್ಷ ಈ ಅವಧಿಯಲ್ಲಿ ಒಂದು ಕೋಟಿಯಿಂದ ಒಂದೂವರೆ ಕೋಟಿ ಕಾಣಿಕೆ ಸಂಗ್ರಹವಾಗುತ್ತಿತ್ತು.

ಆದರೆ ಇದೀಗ ಕಳೆದ ವರ್ಷದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಶಕ್ತಿ ಯೋಜನೆ ಪರಿಣಾಮ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸಿ ದೇವಿ ದರ್ಶನ ಪಡೆಯುವ ಜತೆಗೆ ಕಾಣಿಕೆ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಲವು ಹೆಚ್ಚಿನ ಕಾಣಿಕೆ ಸಂಗ್ರಹವಾಗಿರುವುದು ವಿಶೇಷ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ