NEWS

ಬೆಳಗಾವಿ: ನಾಳೆಯಿಂದ ಸಾರಿಗೆ ನೌಕರರ ಅಹೋರಾತ್ರಿ ಧರಣಿ – ಸಮಾನ ಮನಸ್ಕರ ವೇದಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ನಾಳೆಯಿಂದ ಡಿಸೆಂಬರ್‌ 30ರ ವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲದ ವಿಶೇಷ ಅಧಿವೇಶದಲ್ಲಿ ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವುದಕ್ಕೆ ಸರ್ಕಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ನೌಕರರ ವಿವಿಧ ನೌಕರರ ಪರ ಸಂಘಟನೆಗಳು ಅಹೋರಾತ್ರಿ ಧರಣಿ ನಡೆಸುತ್ತಿವೆ.

ಹೌದು! ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 2 ವರ್ಷದಿಂದ ನಿರಂತವಾಗಿ ಸರ್ಕಾರ ಮತ್ತು ಸಾರಿಗೆಯ ನಾಲ್ಕೂ ನಿಗಮಗಳಿಗೂ ನೂರಾರು ಮನವಿ ಪತ್ರ ಸಲ್ಲಿಸಿದ್ದರೂ ಬೇಡಿಕೆ ಈಡೇರಿಸುವಲ್ಲಿ ಇನ್ನೂ ಮೀನಮೇಷ ಎಣಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಆಡಳಿತ ಮಂಡಳಿಗೆ ನೆನಪಿಸುವ ಸಲುವಾಗಿ ನಾವು ಕಳೆದ ಅ.10ರಿಂದ ನ.25ರವರೆಗೂ ರಾಜ್ಯದ 18 ಜಿಲ್ಲೆಗಳಲ್ಲಿ ಬೃಹತ್‌ ಸೈಕಲ್‌ ಜಾಥಾ ಮಾಡಿದ್ದವೆ. ಆದರೂ ಇದಾವುದಕ್ಕೂ ಸರ್ಕಾರ, ಆಡಳಿತ ಮಂಡಳಿ ಗಮನಹರಿಸಿಲ್ಲ. ಹೀಗಾಗಿ ಮತ್ತೆ ಸಾರಿಗೆ ನೌಕರರು ಹೋರಾಟ ಮಾಡುವುದು ಅನಿವಾರ್ಯವಾಗಿದ್ದು ನಾಳೆಯಿಂಧ (ಡಿ19) ನಡೆಯಲಿರುವ ಅಧಿವೇಶದ ವೇಳೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ತಿಳಿಸಿದ್ದಾರೆ.

ಡಿ.19ರಿಂದ ಡಿ.30ರ ವರೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಚಳಿಗಾಲದ ಈ ಅಧಿವೇಶದ ವೇಳೆ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ಹೋರಾಟ ಮಾಡುವುದಕ್ಕೆ ಈಗಾಗಲೇ ಸಜ್ಜಾಗಿದ್ದು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬೆಳಗಾವಿಗೆ ನಿನ್ನೆ ರಾತ್ರಿಯೇ ಪ್ರಯಾಣ ಬೆಳೆಸಿದ್ದು ಈಗಾಗಲೇ ಬೆಳಗಾವಿ ತಲುಪಿದ್ದಾರೆ ಸಾವಿರಾರು ನೌಕರರು.

ಇನ್ನು ನಮ್ಮ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ, ನಮ್ಮ ಸಮಸ್ಯೆ ನಿವಾರಣೆ ಮಾಡುವಂತೆ ಮನವಿ ಪತ್ರಗಳನ್ನು ಮುಖ್ಯ ಮಂತ್ರಿಗಳಿಗೆ, ಸಾರಿಗೆ ಸಚಿವರಿಗೆ ಮತ್ತು ವಿಪಕ್ಷ ನಾಯಕರಿಗೂ ನೀಡಲಾಗಿದೆ ಆದರೂ ಇನ್ನೂ ಬೇಡಿಕೆ ಈಡೇರಿಲ್ಲ ಎಂದು ವೇದಿಕೆ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾರಿಗೆ ಬಸ್‌ ಘಟಕಗಳಲ್ಲಿ ಪ್ರತಿ ಹಂತದಲ್ಲೂ ವ್ಯಾಪಕ ಭ್ರಷ್ಟಚಾರ ನಡೆಯುತ್ತಿದ್ದು ಫೋನ್ ಪೇ, ಗೂಗಲ್ ಪ್ಲೇ ಹಾಗೂ ಏಜೆಂಟ್ ಸಂಸ್ಕೃತಿ ಹೆಮ್ಮರವಾಗಿ ಬೆಳೆದು ನೌಕರರು ದಿನಂಪ್ರತಿ ನಾನಾ ರೀತಿಯ ಮಾನಸಿಕ ಕಿರುಕುಳಗಳನ್ನು ಅನುಭವಿಸುತ್ತ ಕರ್ತವ್ಯ ನಿರ್ವಹಿಸಬೇಕಾದ ವಾತಾವರಣ ಸಂಸ್ಥೆಗಳಲ್ಲಿ ಉದ್ಭವವಾಗಿದೆ. ನೊಂದ ಕೆಲವರು ಕಿರುಕುಳ ತಡೆಯಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆದರೂ ಈವರೆಗೂ ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ನಾವು ಈ ಕೆಳಕಂಡ ಬೇಡಿಕೆಗಳನ್ನು ಮುಂದಿಟ್ಟು ಡಿ.19ರಿಂದ ನಮ್ಮ ಬೇಡಿಕೆಗಳು ಈಡೇರುವವರೆಗೂ ಧರಣಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

1) ಸಾರಿಗೆ ಮುಷ್ಕರದ ಸಮಯದಲ್ಲಿ ಮಾಡಿರುವ ವಜಾ ಪ್ರಕರಣಗಳನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೇ ಈ ಕೂಡಲೇ ಮರು ನೇಮಕ ಮಾಡಿಕೊಳ್ಳುವುದು. ಮುಷ್ಕರದ ಸಮಯದಲ್ಲಿ ಮಾಡಿರುವ ವರ್ಗಾವಣೆ, ಇತರ ಶಿಕ್ಷೆಗಳನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೆ ರದ್ದು ಮಾಡುವುದು ಹಾಗೂ ಪೊಲೀಸ್ ಪ್ರಕರಣಗಳನ್ನು ಹಿಂಪಡೆದು ದಿನಾಂಕ; 06/04/2021ರ ಪೂರ್ವದ ಯಥಾಸ್ಥಿತಿಯನ್ನು ಕಾಪಾಡುವುದು.

2) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಾಲ್ಕು ನಿಗಮಗಳಲ್ಲಿ ಚಾಲ್ತಿಯಲ್ಲಿರುವ ನಾಲ್ಕು ವರ್ಷಕ್ಕೊಮ್ಮೆ ಮಾಡುವ ಅವೈಜ್ಞಾನಿಕ ಚೌಕಾಸಿ ವೇತನ ಪರಿಷ್ಕರಣಾ ಪದ್ಧತಿ ಕೈಬಿಟ್ಟು, ನಿಗಮ ಮಂಡಳಿಗಳಲ್ಲಿ ಚಾಲ್ತಿಯಲ್ಲಿರುವ ವೇತನ ಆಯೋಗದ ಮಾದರಿಯನ್ನು ಅಳವಡಿಸಿಕೊಂಡು ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವುದು.

3) 1992 ರ ನಂತರ, ಇಲ್ಲಿಯವರೆಗೂ ಸಾರಿಗೆ ಸಂಸ್ಥೆಯಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆಗಳು ನಡೆದಿಲ್ಲ. ಆದ್ದರಿಂದ ಈ ಕೂಡಲೆ ಕಡ್ಡಾಯವಾಗಿ ಸಾರಿಗೆ ನಿಗಮಗಳಲ್ಲಿ ಕಾರ್ಮಿಕ ಸಂಘಗಳ ಚುನಾವಣೆ ನಡೆಸುವುದು.

4) ಸಾರಿಗೆ ಸಂಸ್ಥೆಗಳಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಖಾಸಗಿ ಚಾಲಕರನ್ನು ಮತ್ತು ನಿರ್ವಾಹಣೆಯನ್ನು ಹಾಗೂ ಇತರ ವಾಹನಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲನಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಪರೋಕ್ಷವಾಗಿ ಮುಂದಿನ ದಿನಗಳಲ್ಲಿ ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುದ ಯೋಜನೆಯನ್ನು ಈ ಕೂಡಲೆ ಕೈ ಬಿಡುವುದು.

5) ಸಾರಿಗೆ ಸಂಸ್ಥೆಯ ಎಲ್ಲ ನೌಕರರಿಗೂ ದಿನಾಂಕ: 10/04/2002 ರ ಪೂರ್ವದಲ್ಲಿ ಉಪದಾನ ಪಾವತಿಸುತ್ತಿದ್ದ ನಿಯಮಾವಳಿಯನ್ನು ಪರಿಗಣಿಸಿ ಜಾರಿಗೊಳಿಸುವುದು, 6) ಕಾರ್ಯಸ್ಥಳಗಳಲ್ಲಿ ನೌಕರರು ಕಿರುಕುಳ ರಹಿತ ಮತ್ತು ನೆಮ್ಮದಿಯಾಗಿ ಕರ್ತವ್ಯ ನಿರ್ವಾಹಿಸುವ ವಾತಾವರಣ ಸೃಷ್ಟಿ ಮಾಡಬೇಕು ಎಂಬ ಒತ್ತಾಯಗಳನ್ನು ಮಾಡುತ್ತಾ ಧರಣಿ ಹಮ್ಮಿಕೊಳ್ಳುವುದಕ್ಕೆ ಸಮಾನ ಮನಸ್ಕರ ವೇದಿಕೆ ಸಜ್ಜಾಗಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು