Please assign a menu to the primary menu location under menu

NEWSನಮ್ಮಜಿಲ್ಲೆ

ಬಳ್ಳಾರಿ: ಒತ್ತುವರಿ ಕಾರ್ಯಾಚರಣೆಲಿ ನೆಲೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ – ಎಎಪಿ ಜಿಲ್ಲಾಧ್ಯಕ್ಷ ಮಂಜುನಾಥ್

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ನಗರದ 24ನೇ ವಾರ್ಡ್‌ನ ಗಿರಿನಗರದಲ್ಲಿ ಕಾಲುವೆ ಒತ್ತುವರಿಯಾಗಿದೆ ಎಂದು ತೆರವುಗೊಳಿಸಲು ಅಧಿಕಾರಿಗಳು ಮುಂದಾಗಿದ್ದು, ಅಲ್ಲಿನ ನಿವಾಸಿಗಳು ಬೀದಿಗೆ ಬೀಳುವ ಆತಂಕದಲ್ಲಿದ್ದು, ಅವರಿಗೆ ಮನೆಗಳನ್ನು ತೆರವು ಮಾಡಲು ಐದು ದಿನ ಅವಕಾಶ ಕೊಡಬೇಕು ಎಂದು ಆಮ್ ಆದ್ಮಿ ಪಾರ್ಟಿ ಬಳ್ಳಾರಿ ಜಿಲ್ಲಾಧ್ಯಕ್ಷ ಮಂಜುನಾಥ್ ಅಧಿಕಾರಿಗಳಿಗೆ ಮನವಿ ಮಾಡಿದರು.

ತೆರವು ಕಾರ್ಯಾಚರಣೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಮಂಜುನಾಥ್ ಸ್ಥಳೀಯರ ಕಷ್ಟಗಳನ್ನು ಆಲಿಸಿದರು. ಬಳಿಕ ಮಾತನಾಡಿ, ಅಧಿಕಾರಿಗಳು ಒಂದು ವಾರದ ಮುಂಚೆಯೇ ನೋಟಿಸ್ ನೀಡಿದ್ದಾರೆ. ಆದರೆ, ಇಲ್ಲಿನ ಮುಗ್ದಜನಗಳಿಗೆ ಕಾನೂನಿನ ಅರಿವು ಇಲ್ಲ.

ಈಗ ಅಧಿಕಾರಿಗಳು ತೆರವುಗೊಳಿಸಲು ಬಂದಿದ್ದು, ಜನ ಬೀದಿಗೆ ಬೀಳುವ ಭಯದಲ್ಲಿದ್ದಾರೆ, ಅವರು ಜಾಗವನ್ನು ತೆರವು ಮಾಡುತ್ತಾರೆ. ಆದರೆ, ಇನ್ನು ಐದು ದಿನ ಸಮಯ ಕೊಡಿ ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.

ಜನರು ಜಾಗವನ್ನು ಖಾಲಿ ಮಾಡಲ್ಲ ಎಂದು ಹೇಳುತ್ತಿಲ್ಲ. ಆದರೆ, ಅವರಿಗೆ ಯಾವ ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡುತ್ತಿದ್ದಾರೆ. ಶಾಸಕರು ಜಾಗ ಮಾಡಿಕೊಡುವುದಾಗಿ ಭರವಸೆ ಕೊಟ್ಟಿದ್ದಾರೆ, ಅವರು ಸದ್ಯ ಊರಲ್ಲಿಲ್ಲ.

ಹೀಗಾಗಿ ಇವರಿಗೆ ಸಮಸ್ಯೆಯಾಗಿದೆ. ಸರ್ಕಾರ ಮತ್ತು ಜನಪ್ರತಿನಿಧಿಗಳು, ಜಿಲ್ಲಾಡಳಿತ ಕೂಡಲೇ ಮನೆ ಕಳೆದುಕೊಳ್ಳುತ್ತಿರುವ ಬಡಜನರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂದರು.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ