ಬೆಂಗಳೂರು: ಮದುವೆಗೆ ಒಪ್ಪದ ಯುವತಿಗೆ ಪ್ರಿಯತಮ ಚಾಕುವಿನಿಂದ ಇರಿದಿದ್ದು ಸದ್ಯ ಆಕೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಜೆ.ಜೆ.ನಗರದಲ್ಲಿ ನಡೆದಿದೆ.
ಹತ್ಯೆ ಮಾಡಲು ಹೋಗಿದ್ದ ಆರೋಪಿ ಅಜಯ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇದು ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಯುವಕ ಮತ್ತು ಯುವತಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಗೂ ಎಲ್ಲ ಸಿದ್ಧತೆ ನಡೆದಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಯುವತಿ ಮದುವೆಗೆ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಪ್ರಿಯಕರ, ಯುವತಿಗೆ ಚಾಕುವಿನಿಂದ ಇರಿದಿದ್ದಾನೆ.
ಇರತಕ್ಕೆ ಒಳಗಾದ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಪ್ರಕರಣ ದಾಖಲಿಸಿಕೊಂಡಿರುವ ಜೆ.ಜೆ. ನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
