NEWSನಮ್ಮಜಿಲ್ಲೆಸಂಸ್ಕೃತಿ

ಬೆಂ.ಗ್ರಾಮಾಂತರ:ಜಿಲ್ಲಾಡಳಿತ ಭವನದಲ್ಲಿ ವಿಶ್ವಮಾನವ ದಿನಾಚರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ವಿಶ್ವಮಾನವ ದಿನಾಚರಣೆಯನ್ನು ಇಂದು ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ‌ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಹಯೋಗದೊಂದಿಗೆ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಅಮರೇಶ್  ಎಚ್. ಅವರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೃಷ್ಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಈಶ್ವರ್ ಮಿರ್ಜಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ