NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ಬೆಂಗಳೂರು ಬಂದ್‌, ಹೋರಾಟ ಹತ್ತಿಕ್ಕಲು ರಾಜ್ಯ ಸರ್ಕಾರದ  ಯತ್ನ  ಖಂಡನಾರ್ಹ: ಜಗದೀಶ್ ವಿ. ಸದಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊನೆಯ ಕ್ಷಣಗಳಲ್ಲಿ ಬೆಂಗಳೂರು ಬಂದ್‌ಗೆ ಅನುಮತಿ ನಿರಾಕರಿಸುವ ಮೂಲಕ ರಾಜ್ಯ ಸರ್ಕಾರ ನಾಡಿನ ಜನತೆಗೆ ದ್ರೋಹ ಬಗೆದಿದೆ. ನಮ್ಮ ಜನರ ಕುಡಿಯುವ ನೀರಿಗಾಗಿ, ನಮ್ಮ ಜನರ ಬದುಕಿಗಾಗಿ ಹೋರಾಡುವುದಕ್ಕೂ ಅನುಮತಿ ನಿರಾಕರಿಸುತ್ತಿರುವುದು ದುಃಖಕರ ವಿಚಾರ ಎಂದು ಎಎಪಿ ಮುಖಂಡ ಜಗದೀಶ್ ವಿ. ಸದಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ ನಾಡಿನ ಹಿತಾಸಕ್ತಿಯನ್ನು ಕಡೆಗಣಿಸಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. 150ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲಕ್ಕೆ ನಿಂತಿವೆ.ಶಾಲೆಗಳು, ಖಾಸಗಿ ಬಸ್‌, ಓಲಾ, ಉಬರ್‌, ಟ್ಯಾಕ್ಸಿ, ಆಟೋ, ಗೂಡ್ಸ್‌ ವಾಹನ, ಎಪಿಎಂಸಿ ಮಾರುಕಟ್ಟೆ, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಮಾಲ್‌, ಮಲ್ಟಿಪ್ಲೆಕ್ಸ್‌ಗಳು, ಅಂಗಡಿ ಮಳಿಗೆಗಳು, ಕೈಗಾರಿಕೆಗಳು ಸ್ವಯಂ ಪ್ರೇರಣೆಯಿಂದ ಬಂದ್‌ಗೆ ಬೆಂಬಲ ನೀಡಿವೆ.

ಆದರೆ ರಾಜ್ಯ ಸರ್ಕಾರ ಬಂದ್‌ಗೆ ಅವಕಾಶ ನೀಡದೆ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ. ಪೊಲೀಸ್‌ ಇಲಾಖೆಯ ಮೂಲಕ ಹೋರಾಟವನ್ನು ಹತ್ತಿಕ್ಕಲು ಯತ್ನಿಸುತ್ತಿದೆ. ಇದು ಖಂಡನಾರ್ಹ ನಡೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರ ಉಳಿಸಿಕೊಳ್ಳಲು ರಾಜ್ಯದ ಹಿತಾಸಕ್ತಿಯನ್ನು ಬಲಿಕೊಡುತ್ತಿರುವುದು ನಾಚಿಕೆಗೇಡಿನ ವಿಚಾರ. ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾಗುವ ಮೂಲಕ ನಾಡಿನ ಜನರ ಶಾಪಕ್ಕೆ ಗುರಿಯಾಗುವುದು ನಿಶ್ಚಿತ. ನಾಡಿನ ಜನತೆ ನೀರಿನ ಬಗ್ಗೆ ಮನವರಿಕೆ ಮಾಡಿಕೊಂಡಿದ್ದಾರೆ, ಸ್ವಯಂ ಪ್ರೇರಣೆಯಿಂದ ಬೀದಿಗಿಳಿಯುತ್ತಿದ್ದಾರೆ, ಬೆಂಗಳೂರು ಬಂದ್‌ ಹತ್ತಿಕ್ಕಲು ಯಾರಿಗೂ ಸಾಧ್ಯವಿಲ್ಲ. ಬಂದ್‌ ಯಶಸ್ವಿಯಾಗೇ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ