CrimeNEWSಬೆಂಗಳೂರು

ಬೆಂಗಳೂರು: ರಾಜಧಾನಿಯ ಪ್ರಮುಖ 17 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಪ್ರಮುಖ 17 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಲ್ಲಿ ಆತಂಕದ ಮನೆ ಮಾಡಿದೆ.

ಬಸವೇಶ್ವರ ನಗರದ ನ್ಯಾಷಲ್ ಸ್ಕೂಲ್, ವಿದ್ಯಾಶಿಲ್ಪ ಸೇರಿದಂತೆ ಒಟ್ಟ 17ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಯಲಹಂಕದದಲ್ಲಿರುವ ಖಾಸಗಿ ಶಾಲೆ ಒಂದಕ್ಕೂ ಬೆದರಿಕೆಯ ಮೇಲ್ ಬಂದಿದೆ. ಇಂದು ಬೆಳಗ್ಗೆ ಮೇಲ್ ಓಪನ್ ಮಾಡಿದಾಗ ಬೆದರಿಕೆ ಹಾಕಿರೋದು ಕಂಡು ಬಂದಿದೆ.

ಮೇಲ್ ನೋಡಿದ ಶಾಲಾ ಆಡಳಿತ ಮಂಡಳಿ ಕೂಡಲೇ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಇನ್ನು ಶಾಲೆಯ ಮಕ್ಕಳನ್ನು ತರಗತಿಯಿಂದ ಹೊರಗಡೆ ಕರೆದುಕೊಂಡು ಬರಲಾಗಿದೆ.

ಪೊಲೀಸ್ ಕಮಿಷನರ್ ದಯಾನಂದ್: ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ವಿಚಾರವಾಗಿ ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಮಾತನಾಡಿದ್ದು, ಪೋಷಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಶಾಲೆಗಳಿಗೆ ಬೆದರಿಕೆ ಕರೆ ಬಂದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಕಮಿಷನರ್ ದಯಾನಂದ್, ಶಾಲೆಗಳಿಗೆ ಬಾಂಬ್​ ಪತ್ತೆ ದಳ, ನಿಷ್ಕ್ರಿಯ ದಳ ರವಾನಿಸಿದ್ದೇವೆ. ಬೆದರಿಕೆ ಸಂದೇಶ ಬಂದ ಶಾಲೆಗಳಲ್ಲಿ ಪೊಲೀಸರಿಂದ ತಪಾಸಣೆ ನಡೆಸಲಾಗುತ್ತಿದೆ. ಹೀಗಾಗಿ ಯಾವುದೇ ಆತಂಕ ಬೇಡ ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​: ಯಾವುದೇ ಗಾಬರಿ ಬೇಡ. ತಮ್ಮ ಮಕ್ಕಳು ಸುರಕ್ಷಿತವಾಗಿ ಇರ್ತಾರೆ ಎಂದು ಧೈರ್ಯ ತುಂಬಬುತ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾನು ಗಾಬರಿಯಾಗ್ಬಿಟ್ಟೆ. ಟಿವಿ ನೋಡ್ತಾ ಇದ್ದೆ ಈ ತರ ಬಂದಿದೆ ಅಂತ ಗೊತ್ತಾಗಿ ನನ್ನ ಸಂಬಂಧಪಟ್ಟ ಶಾಲೆಗಳು, ನನ್ನ ಮನೆಯ ಎದುರುಗಡೆ ಸ್ಕೂಲ್​ ಅಂತಾನು ಬರ್ತಾ ಇತ್ತು. ಗಾಬರಿಗೊಂಡು ಹೊರಗಡೆ ಬಂದೆ. ಪೊಲೀಸ್​ ಅಧಿಕಾರಿಗಳು ಮೇಲ್​ ತೋರಿಸಿದ್ದಾರೆ. ಏನು ಮೇಲ್​ ಬಂದಿದೆ ಅಂತ ತೋರಿಸಿದರು. ಇಲ್ಲಿಯವರೆಗೆ ಅದು ಫೇಕ್​ ನ್ಯೂಸ್​ ಅಂತ ಕಾಣ್ತಾ ಇದೆ. ನಮ್ಮ ಪೊಲೀಸ್​ ಅಧಿಕಾರಿಗಳೆಲ್ಲ ಮಾತನಾಡಿದ್ರು. ಆದರೆ ನಾವು ಜಾಗರೂಕರಾಗಿರಬೇಕು. ಪೋಷಕರು ಕೂಡ ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ.

ಸೈಬರ್​ ಕ್ರೈಮ್​ ಪೊಲೀಸರು ಆ್ಯಕ್ಟೀವ್​ ಆಗಿದ್ದಾರೆ. ಪೊಲೀಸರು ವೇಗವಾಗಿ ಎಲ್ಲರಿಗೂ ಕಮ್ಯುನಿಕೇಟ್​ ಮಾಡಿದ್ದಾರೆ. ಸಂಬಂಧಪಟ್ಟ ಶಾಲೆಗಳಿಂದ ಕೂಡ ನನಗೆ ಕರೆ ಬಂದಿವೆ. ನಮ್ಮ ಮನೆ ಮುಂದೆ ಕೂಡ ಪೊಲಿಸರು ತಕ್ಷಣ ಬಂದು ತಪಾಸಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು