NEWSಆರೋಗ್ಯ

ಮೊಬೈಲ್ ಫೀವರ್ ಕ್ಲಿನಿಕ್‌ಗೆ ಸಿಎಂ ಯಡಿಯೂರಪ್ಪ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೊಬೈಲ್ ಫೀವರ್ ಕ್ಲಿನಿಕ್‌ ಉಪಕ್ರಮವನ್ನು ಹೌಸ್‌ಜಾಯಿ ಸಿಇಒ ಸಂಜಿತ್ ಗೌರವ್, ಕೆಎಸ್‌ಆರ್‌ಟಿಸಿ, ಸಂಸದ ತೇಜಸ್ವಿ ಸೂರ್ಯ ಮತ್ತಿತರ ಪಾಲುದಾರರೊಂದಿಗೆ ಇಂದು ಬೆಂಗಳೂರಿನಲ್ಲಿ ಆರಂಭಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಮೊಬೈಲ್‌ ಫೀವರ್ ಕ್ಲಿನಿಕ್‌ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ  ಚಾಲನೆ ನೀಡಿ ಮಾತನಾಡಿದರು. ಬಸ್‌ನಲ್ಲಿ ಹಾಸಿಗೆಗಳು, ಸಮಾಲೋಚನೆ ಕೊಠಡಿ, ಸರಿಯಾಗಿ ನೈರ್ಮಲ್ಯ ಕಾಪಾಡಲು ಎರಡು ವಲಯಗಳಾಗಿ ವಿಂಗಡಿಸಲಾಗಿದೆ ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಈಗಾಗಲೇ ಮೈಸೂರು, ಮಂಡ್ಯ, ಹುಬ್ಬಳ್ಳಿ, ಮಂಗಳೂರಿನಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಕಾರ್ಯನಿರ್ವಹಿಸುತ್ತಿದೆ. ಕೆಎಸ್‌ಆರ್‌ಟಿಸಿ ಹಳೆಯ ಬಸ್‌ಗಳನ್ನು ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತಿಸಲಾಗಿದೆ. ಅನಾರೋಗ್ಯ ಕಂಡುಬಂದರೆ ಮೊಬೈಲ್‌ ಫೀವರ್ ಕ್ಲಿನಿಕ್ ಅನ್ನು ಸಂಪರ್ಕಿಸಬಹುದು ಎಂದರು.

ಬೆಂಗಳೂರಿನ ನಾಲ್ಕೂ ವಿಭಾಗಗಳಲ್ಲೂ ಈ ಮೊಬೈಲ್ ಫೀವರ್ ಕ್ಲಿನಿಕ್ ಸಂಚರಿಸಲಿದೆ. ಒಟ್ಟು ನಾಲ್ಕು ತಂಡಗಳು ಕಾರ್ಯಾಚರಿಸಲಿವೆ. ಪ್ರತಿ ತಂಡದಲ್ಲಿ ವೈದ್ಯರು, 3 ದಾದಿಯರು ಮತ್ತು ಒಬ್ಬ ಲ್ಯಾಬ್‌ ಟೆಕ್ನಿಷಿಯನ್‌ನನ್ನು ಒಳಗೊಂಡಿರಲಿದೆ. ಹಲವಾರು ಸ್ವಯಂ ಸೇವಕರು ಇದರ ನಿರ್ವಹಣೆ ಮಾಡಲಿದ್ದಾರೆ ಎಂದು ವಿವರಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇಂದು ಮಧ್ಯಾಹ್ನ ಪ್ರಧಾನಿಯವರೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಯಲಿದೆ. ನಮ್ಮ ರಾಜ್ಯದ ನಿಲುವಿನ ಬಗ್ಗೆ ಅಲ್ಲಿ ಪ್ರಸ್ತಾಪಿಸುತ್ತೇನೆ. ರಾಜ್ಯದ ಪ್ಯಾಕೇಜ್‌ ಬಗ್ಗೆಯೂ ಅಲ್ಲಿ ಸ್ಪಷ್ಟವಾಗಿ ಹೇಳುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.

ಕೆಎಸ್‌ಆರ್‌ಟಿಸಿ ಬಸ್‌ನ ಸಹಯೋಗದಿಂದ ಆರಂಭಿಸಿರುವ ಮೊಬೈಲ್ ಕ್ಲಿನಿಕ್‌ ಅನ್ನು ಮುಖ್ಯಮಂತ್ರಿ ಉದ್ಘಾಟಿಸಿದ್ದಾರೆ. ನವೋದ್ಯಮವೊಂದರ ಸಹಕಾರದಲ್ಲಿ ಸಂಸದರ ಕಚೇರಿ ಇದನ್ನು ಆರಂಭಿಸಿದೆ. ಒಟ್ಟು ಐದು ಬಸ್‌ಗಳು ಬೆಂಗಳೂರಿನ ಹಲವಾರು ಕಡೆ ತೆರಳಿ ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆ ನಡೆಸಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು. ಕಂದಾಯ ಸಚಿವ ಆರ್.ಅಶೋಕ್‌, ಸಾರಿಗೆ ಸಚಿವ ಲಕ್ಷ್ಮಣ ಸವದಿ, ವೈದ್ಯರು ಸೇರಿ ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್​ ಪಾರ್ಟಿ: ನಟಿಯರು ಸೇರಿ 80ಕ್ಕೂ ಹೆಚ್ಚು ಬಂಧನ KSRTC: ಹೆದ್ದಾರಿಯಲ್ಲಿ ಕೆಟ್ಟುನಿಂತ ಬಸ್‌ಗಳು - ಕಿಮೀ ವರೆಗೆ ಟ್ರಾಫಿಕ್ ಜಾಮ್ KSRTC: ₹185 ಟಿಕೆಟ್‌ ಕೊಟ್ಟು ₹200 ಕೇಳಿದ ಕಂಡಕ್ಟರ್‌ - ದೂರು ಕೊಟ್ಟ ಪ್ರಯಾಣಿಕ ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು ಪತ್ನಿ, ಮಗನಿಗೆ ಮಾಸಿಕ ಜೀವನಾಂಶ ಪಾವತಿಸದ ಪತಿ ಆಸ್ತಿ ಮುಟ್ಟುಗೋಲು: ಹೈಕೋರ್ಟ್ ಮಹತ್ವದ ಆದೇಶ ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಕಾರು ನಜ್ಜುಗುಜ್ಜು - ಪ್ರಯಾಣಿಕರು ಸೇಫ್ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:‌ ಶೇ.25.5 ವೇತನ ಹೆಚ್ಚಳ ಬಹುತೇಕ ಖಚಿತ