NEWSನಮ್ಮರಾಜ್ಯರಾಜಕೀಯ

ಜುಲೈ 4- ರಾಜ್ಯದಲ್ಲಿ 1839 ಮಂದಿಗೆ ಕೊರೊನಾ ಸೋಂಕು ದೃಢ, 42 ಜನರು ಬಲಿ

ಬೆಂಗಳೂರಿನಲ್ಲಿ 1172 ಮಂದಿಯನ್ನು ಸುತ್ತಿಕೊಂಡ ಕೋವಿಡ್‌ ಸೋಂಕು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಧಾನಿಯಲ್ಲಿ ಇಂದು ಕೊರೊನಾ ಸ್ಫೋಟವಾಗಿದ್ದು, ಈ ಹಿಂದಿನಕ್ಕಿಂತಲು ಇಂದು ಅಂದರೆ 1172 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ 1,836 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 21,549ಕ್ಕೆ ಏರಿಕೆಯಾಗಿದೆ.

ಇಂದು 42 ಜನ ಕೊರೊನಾಗೆ ಬಲಿಯಾಗಿದ್ದು, ಒಟ್ಟಾರೆ ರಾಜ್ಯದಲ್ಲಿ ಸಾವಿನ ಸಂಖ್ಯೆ 339ಕ್ಕೆ  (ಅನ್ಯಕಾರಣಕ್ಕೆ 4 ಮಂದಿ ಸೇರಿ) ಏರಿಕೆಯಾಗಿದೆ. ಇನ್ನು ಐಸಿಯುನಲ್ಲಿ 226 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಒಟ್ಟು 21,549 ರಲ್ಲಿ 11966 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಇಂದು ಒಟ್ಟು 439  ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.  ರಾಜ್ಯದಲ್ಲಿ ಒಟ್ಟು 9244 ಮಂದಿ ಈವರೆಗೆ ಗುಣಮುಖರಾಗಿದ್ದಾರೆ. ಇತ್ತ ಬೆಂಗಳೂರು ಕೊರೊನಾ ಸಾವಿನ ಸಂಖ್ಯೆಯಲ್ಲಿ ಶತಕ ದಾಖಲಿಸಿದೆ. ಇಂದು  ರಾಜ್ಯದಲ್ಲಿ 42 ಮಂದಿ ಅದರಲ್ಲಿ ಬೆಂಗಳೂರಿನಲ್ಲಿ 24 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಬೀದರ್‌ 6, ದಕ್ಷಿಣ ಕನ್ನಡ 4, ಕಲಬುರಗಿ 3, ಧಾರವಾಡ 2, ಹಾಸನ, ಬೆಂಗಳೂರು ಗ್ರಾಮಾಂತರ ತಲಾ  ಒಬ್ಬರು ಬಲಿಯಾಗಿದ್ದಾರೆ.

ಇನ್ನು ಬೆಂಗಳೂರಿನಲ್ಲಿ 1172,  ದಕ್ಷಿಣ ಕನ್ನಡ 75, ಬಳ್ಳಾರಿ 73, ಬೀದರ್‌ 51, ಧಾರವಾಡ 45, ರಾಯಚೂರು 41, ಮೈಸೂರು 38, ಕಲಬುರ್ಗಿ ಮತ್ತು ವಿಜಯಪುರದಲ್ಲಿ ತಲಾ 37, ಮಂಡ್ಯ ಮತ್ತು ಉತ್ತರ ಕನ್ನಡದಲ್ಲಿ ತಲಾ 35, ಶಿವಮೊಗ್ಗ 31, ಹಾವೇರಿ 28, ಬೆಳಗಾವಿ 27, ಹಾಸನ 25, ಉಡುಪಿ 18, ಚಿಕ್ಕಬಳ್ಳಾಪುರ ಮತ್ತು ತುಮಕೂರಿನಲ್ಲಿ ತಲಾ 12, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರದಲ್ಲಿ ತಲಾ 11, ದಾವಣಗೆರೆ 7, ಚಾಮರಾಜನಗರ 5, ಗದಗ 4, ಕೊಪ್ಪಳ ಮತ್ತು ಚಿಕ್ಕಮಗಳೂರು ತಲಾ 3,  ರಾಮನಗರ 2, ಯಾದಗಿರಿಯಲ್ಲಿ 1 ಪ್ರಕರಣ ದೃಢಪಟ್ಟಿದೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ