NEWSಬೆಂಗಳೂರು

ವಾಯುವಿಹಾರಿಗಳಿಗೆ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಾಳೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಉದ್ಯಾನವನಗಳಲ್ಲಿ ವಾಯುವಿಹಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಪರಿಸರದ ಸಂರಕ್ಷಣೆ ಕುರಿತು ಅರಿವು ಮೂಡಿಸುವ ಸಲುವಾಗಿ ಸಾಂಸ್ಕೃತಿಕ ಮತ್ತು ಇನ್ನಿತರ ಕಲಾ ಚಟುವಟಿಕೆಗಳನ್ನೊಳಗೊಂಡ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಉದ್ಯಾನವನಗಳು ಬೆಂಗಳೂರಿನ ನಾಗರಿಕರಿಗೆ ಉತ್ತಮವಾದ ಆಮ್ಲಜನಕ ಮತ್ತು ಮನೋಲ್ಲಾಸವನ್ನು ಒದಗಿಸುವ ಮೂಲವಾಗಿದೆ. “ಉದ್ಯಾನ ನಗರಿ”ಯಲ್ಲಿ ಪಾಲಿಕೆಯು 1,287 ಉದ್ಯಾನವನಗಳನ್ನು ಅಭಿವೃದ್ಧಿಗೊಳಿಸಿ ನಿರ್ವಹಣೆ ಮಾಡಲಾಗುತ್ತಿದೆ.

ಉದ್ಯಾನವನಗಳಿಗೆ ವೀಕ್ಷಿಸಲು ಬರುವಂತಹ ಸಾರ್ವಜನಿಕರಿಗೆ ಮತ್ತು ವಾಯುವಿಹಾರಿಗಳಿಗೆ ಅನುಕೂಲವಾಗಲೆಂದು ಉದ್ಯಾನವನಗಳಲ್ಲಿ “ಬೆಂಗಳೂರು ಹಬ್ಬ” ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ನಮ್ಮ ಪಾರಂಪರಿಕ ಸಂಸ್ಕೃತಿ, ಕಲೆಗಳು ಮತ್ತು ಇನ್ನಿತರ ಕಲಾ ಚಟುವಟಿಕೆಗಳಾದ ಡೊಳ್ಳುಕುಣಿತ, ಜಾನಪದ ಗಾಯನ, ಸುಗಮ ಸಂಗೀತ ಮತ್ತು ಜಾನಪದ ಕಲಾತಂಡಗಳನ್ನು ಒಳಗೊಂಡಂತೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 27 ವಿಧಾನಸಭಾ ಕ್ಷೇತ್ರಗಳಲ್ಲಿ 1 ವಿಧಾನ ಸಭಾ ಕ್ಷೇತ್ರಕ್ಕೆ ಒಂದರಂತೆ 27 ಉದ್ಯಾನವನಗಳಲ್ಲಿ ಮೇ-2025 ರಿಂದ ಮಾರ್ಚ್-2026 ರವರೆಗೆ ವರ್ಷವಿಡೀ ಸಾಂಸ್ಕೃತಿಕ ಮತ್ತು ಮಕ್ಕಳಿಗೆ ಉತ್ತೇಜಿಸುವ ಕಲೆಗಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ನಾಳೆ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ: ನಗರದ ಉದ್ಯಾನವನಗಳಲ್ಲಿ ಹಮ್ಮಿಕೊಂಡಿರುವ “ಬೆಂಗಳೂರು ಹಬ್ಬ” ಕಾರ್ಯಕ್ರಮವನ್ನು ಬಸವನಗುಡಿ ವ್ಯಾಪ್ತಿಯ ಬ್ಯೂಗಲ್ ರಾಕ್ ಉದ್ಯಾನವನದಲ್ಲಿ ನಾಳೆ 17-05-2025 ರ ಸಂಜೆ 05.00 ಗಂಟೆಗೆ ಮಾನ್ಯ ಸ್ಥಳೀಯ ಶಾಸಕರಿಂದ ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ.

ಈ ವೇಳೆ ಪಾಲಿಕೆಯ ಆಡಳಿತಗಾರರು, ಮುಖ್ಯ ಆಯುಕ್ತರು, ವಿಶೇಷ ಆಯುಕ್ತರುಗಳು, ವಲಯ ಆಯುಕ್ತರುಗಳು ಸೇರಿದಂತೆ ಇನ್ನಿತರೆ ಗಣ್ಯರುಗಳು/ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಜಾಗೃತಿ ಜಾಥಾ ಕಾರ್ಯಕ್ರಮ: ಕಾರ್ಯಕ್ರಮಕ್ಕೂ ಮುಂಚಿತವಾಗಿ ರಾಮಕೃಷ್ಣ ಮಠ ವೃತ್ತದಿಂದ ಬ್ಯೂಗಲ್ ರಾಕ್ ಉದ್ಯಾನವನದವರೆಗೆ “ಬೆಂಗಳೂರು ಹಬ್ಬ” ಕುರಿತಾಗಿ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಕೂಡಾ ಹಮ್ಮಿಕೊಳ್ಳಲಾಗಿದ್ದು, ನಾಗರಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಯಶಸ್ವಿಗೊಳಿಸಬೇಕಾಗಿ ಕೋರಿದೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ