NEWSನಮ್ಮರಾಜ್ಯಬೆಂಗಳೂರು

ಬೆಂಗಳೂರು ಗುಂಡಿಯೂರು ಆಗಿ ಕುಖ್ಯಾತಿ ಈ ಅಪಮಾನಕ್ಕೆ ಸಿಎಂ ಡಿಸಿಎಂ ಹೊಣೆಗಾರರು : ಕೇಂದ್ರ ಸಚಿವ ಕುಮಾರಸ್ವಾಮಿ 

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ x ಮಾಡಿರುವ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಈ ಸರಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ ಎಂದು ಕಿಡಿಕಾರಿದ್ದಾರೆ.

ತೆರಿಗೆ ಹಾಕುವುದರಲ್ಲಿ ಸರಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇನ್ನು ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕು ಎಂದು ಕೇಳಿದ್ದಾರೆ.

ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಪನಿಗಳಿಗೆ ನನ್ನ ಮನವಿ ಇಷ್ಟೇ: ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ ಎಂದು ಕರೆ ನೀಡಿದ್ದಾರೆ.

Megha
the authorMegha

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ