NEWSನಮ್ಮರಾಜ್ಯರಾಜಕೀಯ

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಆಸ್ತಿ 16.02 ಕೋಟಿ ರೂ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಉಡುಪಿ ಬಿಟ್ಟು ಬೆಂಗಳೂರಿಗೆ ಬಂದಿರುವ ಅವರು ನಾಮಪತ್ರ ಸಲ್ಲಿಕೆ ವೇಳೆ 16.02 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದಾರೆ.

ಹೌದು! ಶೋಭಾ ಕರಂದ್ಲಾಜೆ ಅವರು ಸದ್ಯ 16.02 ಕೋಟಿ ಆಸ್ತಿಯ ಒಡತಿ. ಚರಾಸ್ತಿ – 9.23 ಕೋಟಿ ರೂ. ಹಾಗೂ ಸ್ಥಿರಾಸ್ತಿ – 6.78 ಕೋಟಿ ರೂ. ಮೌಲ್ಯದ್ದು. ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಿಂದ 4.06 ಕೋಟಿ ರೂಪಾಯಿ ಸಾಲ ಮಾಡಿದ್ದಾರೆ.

ಕರಂದ್ಲಾಜೆ ಬಳಿ 1 kg ಚಿನ್ನದ ಬಿಸ್ಕಟ್ (68.40 ಲಕ್ಷ ಮೌಲ್ಯ) ಹಾಗೂ 650‌ ಗ್ರಾಂ ಚಿನ್ನದ ಆಭರಣಗಳಿವೆ. 1620 ಗ್ರಾಂ ಬೆಳ್ಳಿ ಆಭರಣ ‌ಹಾಗೂ ಬೆಳ್ಳಿ ವಸ್ತುಗಳು ಇವೆ. ಶೋಭಾ ಕರಂದ್ಲಾಜೆ ಅವರ ವಾರ್ಷಿಕ ಆದಾಯ 2022-23ರಲ್ಲಿ 24.90 ಲಕ್ಷ ರೂಪಾಯಿ.

ಶೋಭಾ ಅರುವ ನಗದು ಹಣ 1.71 ಲಕ್ಷ ರೂ.ಗಳು ಮಾತ್ರ ಇದೆ. ಇನ್ನು ಕರಂದ್ಲಾಜೆ ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳಿದ್ದು ಅವುಗಳು ಇತ್ಯರ್ಥಕ್ಕೆ ಬಾಕಿ ಇವೆ. ಅದರಲ್ಲಿ ಎರಡು ಕ್ರಿಮಿನಲ್ ಕೇಸ್, 1 ಮಾನನಷ್ಟ ಮೊಕದ್ದಮೆಯೂ ಇದೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ