NEWSನಮ್ಮಜಿಲ್ಲೆರಾಜಕೀಯ

ಬೆಂಗಳೂರು ಗ್ರಾಮಾಂತರ: ಮತದಾನ ಕುರಿತು ಅರಿವು ಬೈಕ್ ರ‍್ಯಾಲಿಗೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ದೊಡ್ಡಬೆಳವಂಗಲದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೈಕ್ ರ‍್ಯಾಲಿಗೆ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ. ನಾಗರಾಜು ಹಸಿರು ನಿಶಾನೆ ನೀಡುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಾಗಬೇಕಿದ್ದು, ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ನೈತಿಕ ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಸಹಕರಿಸಬೇಕೆಂದು ತಿಳಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದಲ್ಲಿ ಬೈಕ್ ರ‍್ಯಾಲಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ. ನಾಗರಾಜು ಇತರರು ಇದ್ದರು.

ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಶೇ. 100 ರಷ್ಟು ಮತದಾನವಾಗಬೇಕಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರೂ ನೋಂದಾಯಿಸಿಕೊAಡು ಯಾವುದೇ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತ ಚಲಾಯಿಸಬೇಕೆಂದು ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಮತದಾನದ ಕುರಿತು ಗ್ರಾಮಗಳಲ್ಲಿ ಅರಿವು ಮೂಡಿಸಬೇಕೆಂದು ತಿಳಿಸಿದರು.

ದೊಡ್ಡಬಳ್ಳಾಪುರ ತಹಸೀಲ್ದಾರ್ ಮೋಹನಕುಮಾರಿ, ತಾಲೂಕು ಯೋಜನಾಧಿಕಾರಿ ರಾಮಾಂಜನೇಯ ಅವರು, ದೊಡ್ಡಬೆಳವಂಗಲ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿಗಳ ಪಿಡಿಒಗಳು, ಕಾರ್ಯದರ್ಶಿಗಳು, ಎಸ್.ಡಿ.ಎ.ಎ, ಕರವಸೂಲಿಗಾರರು, ಡಿಇಓಗಳು, ಜಲಗಾರರು, ಕೃಷಿ, ತೋಟಗಾರಿಕೆ, ರೇಷ್ಮೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗಳ ಹೋಬಳಿ ಮಟ್ಟದ ಅಧಿಕಾರಿಗಳು ಮತ್ತು ನರೇಗಾ ಸಿಬ್ಬಂದಿ ಇದ್ದರು.

Leave a Reply

error: Content is protected !!
LATEST
ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ