ವಿಡಿಯೋ

ಘನತ್ಯಾಜ್ಯ ಘಟಕದಿಂದ ಗ್ರಾಮಸ್ಥರಿಗೆ ತೊಂದರೆಯಾದರೆ ಕ್ರಮ

ಘನತ್ಯಾಜ್ಯ ಸಂಸ್ಕರಣೆ ಘಟಕಕ್ಕೆ ಅನಂದ್‌ ಸಿಂಗ್ ದಿಢೀರ್‌ ಭೇಟಿನೀಡಿ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಘನತ್ಯಾಜ್ಯ ಸಂಸ್ಕರಣೆ ಹಾಗೂ ವಿಲೇವಾರಿ ಘಟಕದ ನಿರ್ವಹಣೆಯು ಸರ್ಕಾರದ ನಿಯಮಗಳ ಅನ್ವಯ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಅರಣ್ಯ ಹಾಗೂ ಪರಿಸರ ಸಚಿವ ಆನಂದ್‌ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲೂಕು, ಸೋಂಪುರ ಹೋಬಳಿಯ ಪೆಮ್ಮನಹಳ್ಳಿ, ತಿಮ್ಮನಾಯ್ಕನಹಳ್ಳಿ ಬಳಿಯ ದಾಬಸ್‌ಪೇಟೆ ಕೈಗಾರಿಕಾ ಪ್ರದೇಶದಲ್ಲಿರುವ ಘನತ್ಯಾಜ್ಯ ಸಂಸ್ಕರಣೆ ಹಾಗೂ ವಿಲೇವಾರಿ ಘಟಕಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು.

ಎ ಡಿವಿಜನ್ ಆಫ್ ರಾಮ್ಕಿ ಎನ್ವಿರೋ ಇಂಜಿನಿಯರ್ಸ್ ಲಿಮಿಟೆಡ್‌ ವತಿಯಿಂದ ಕರ್ನಾಟಕ ವೇಸ್ಟ್ ಮ್ಯಾನೇಜ್‌ಮೆಂಟ್ ಪ್ರಾಜೆಕ್ಟ್‌ನಡಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಕರಣಾ ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಹಾಗೂ ತ್ಯಾಜ್ಯ ಸಂಸ್ಕರಣೆ ನಿರ್ವಹಣೆ ಸಮರ್ಪಕವಾಗಿಲ್ಲ ಎಂಬ ದೂರಿನ ಹಿನ್ನೆಲೆ ಖುದ್ದು ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದರು.

ಸ್ಥಳೀಯರ ಸಹಕಾರದೊಂದಿಗೆ ಸರ್ಕಾರ ನಿಯಮಗಳನ್ನು ಪಾಲಿಸಬೇಕು. ಮತ್ತೊಮ್ಮೆ ಇಲ್ಲಿಗೆ ಭೇಟಿ ನೀಡಿದಾಗ ಇಂಥದ್ದೆ ಪರಿಸ್ಥಿತಿ ಕಂಡುಬಂದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಇಂತಹ ದೂರುಗಳು ಬಾರದಂತೆ ಜಾಗ್ರತೆ ವಹಿಸಬೇಕು ಎಂದು ಹೇಳಿದರು.

ಘಟಕದಲ್ಲಿ ನಿರಂತರ ತ್ಯಾಜ್ಯ ಸಂಸ್ಕರಣೆ ನಡೆಯುತ್ತಿದೆ. ಇದರಿಂದ ಹರಡುವ ವಾಸನೆ ಪ್ರಮಾಣವೂ ಹೆಚ್ಚಾಗಿದೆ. ಇದನ್ನು ತಡೆಯಲು ಈ ಪ್ರದೇಶದಲ್ಲಿ 200 ಮೀಟರ್ ಬಫರ್ ಜೋನ್ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.

ಘಟಕ ಆರಂಭದಿಂದಲೂ ಸಾಕಷ್ಟು ಸಮಸ್ಯೆ ಎದುರಾಗಿದೆ. ಸಂಜೆ ವೇಳೆ ಸಾರ್ವಜನಿಕರ ಓಡಾಟಕ್ಕೂ ತೊಂದರೆಯಾಗಿದೆ. ತ್ಯಾಜ್ಯ ಘಟಕದ ವಿಷಕಾರಿ ವಸ್ತುಗಳು ಅಂತರ್ಜಲ ಸೇರಿ ಕೊಳವೆಬಾವಿಗಳಲ್ಲಿ ನೀರು ಕಲುಷಿತಗೊಂಡಿವೆ. ಘಟಕದಿಂದ ಬರುವ ನೀರನ್ನು ಕುಡಿದು ಜಾನುವಾರುಗಳು ಮೃತಪಟ್ಟಿವೆ. ಸುತ್ತಮತ್ತಲ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ದುರ್ವಾಸನೆಗೆ ಸಾರ್ವಜನಿಕರು ಮೂಗುಮುಚ್ಚಿಕೊಂಡೇ ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು  ಸ್ಥಳೀಯ ಜನಪ್ರತಿನಿಧಿಗಳು ಸಮಸ್ಯೆ ತೋಡಿಕೊಂಡರು.

ರಾಮ್ಕಿ ಕಂಪನಿ ವ್ಯವಸ್ಥಾಪಕ ಅಮಿತ್ ಚೌಧರಿ ಘಟಕದ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ