NEWSವಿಡಿಯೋ

ಪಾಲಿಕೆ ಜಾಗದಲ್ಲಿದ್ದ ಅನಧಿಕೃತ ಮಾರ್ಬಲ್ ಅಂಗಡಿ ತೆರವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಾಲಿಕೆ ಜಾಗದಲ್ಲಿ ಅನಧಿಕೃತವಾಗಿ ಮಾರ್ಬಲ್ ಅಂಗಡಿಗಳನ್ನಿಟ್ಟು ವ್ಯಾಪಾರ ನಡೆಸುತ್ತಿದ್ದ ಸ್ಥಳವನ್ನು ಮೇಯರ್‌ ಗೌತಮ್‌ ಕುಮಾರ್‌ ನೇತೃತ್ವದಲ್ಲಿ ತಪಾಸಣೆ ನಡೆಸಿ ಅಧಿಕಾರಿಗಳು ವಶಕ್ಕೆ ಪಡೆದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೊಂಬೆಗೌಡನಗರ ವಾರ್ಡ್-145ರ ಬನ್ನೇರಘಟ್ಟ ರಸ್ತೆ, ಮೈಕೋ ಫ್ಯಾಕ್ಟರಿ ಹಿಂಭಾಗ, ಲಕ್ಕಸಂದ್ರ ಗ್ರಾಮದ ಸರ್ವೆ ಸಂ.14ರಲ್ಲಿ  ಒತ್ತುವರಿ ಆಗಿತ್ತು. ಈ  ಸ್ವತ್ತನ್ನು ಗುರುವಾರ ಮೇಯರ್‌  ಅಧ್ಯಕ್ಷತೆಯಲ್ಲಿ ತೆರವುಗೊಳಿಸಲಾಯಿತು.

ಈ ವೇಳೆ ಸುಮಾರು 10.04 ಎಕರೆ ಪಾಲಿಕೆ ಆಸ್ತಿಯನ್ನು ಸರ್ವೇ ಮಾಡಿ ಪಾಲಿಕೆಯ ಒಡೆತನಕ್ಕೆ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮೇಯರ್‌ ತಿಳಿಸಿದರು.

ಬಿಬಿಎಂಪಿ ಹೊಂಬೆಗೌಡನಗರ ವಾರ್ಡ್-145ರ ಬನ್ನೇರಘಟ್ಟ ರಸ್ತೆ, ಮೈಕೋ ಫ್ಯಾಕ್ಟರಿ ಹಿಂಭಾಗ, ಲಕ್ಕಸಂದ್ರ ಗ್ರಾಮದ ಸರ್ವೆ ಸಂ.14ರಲ್ಲಿ ಪಾಲಿಕೆಗೆ ಒಳಪಟ್ಟ ಆಸ್ತಿಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು, ಇಂದಿನಿಂದ ಸ್ಥಳ ತಪಾಸಣೆ ಪ್ರಾರಂಭಿಸಲಾಗಿದೆ. ಒತ್ತುವರಿ ಮಾಡಿರುವ ಪ್ರದೇಶವನ್ನು ಸರ್ವೇ ಮಾಡಿ ಪೊಲೀಸ್ ಅಧಿಕಾರಿಗಳ ಸಹಯೋಗದಲ್ಲಿ ನಾಮಫಲಕ ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಭೂದಾಖಲೆಗಳ ಸಹಾಯಕ ನಿರ್ದೇಶಕರು, ನಗರ ಮಾಪನ ತಂಡ-3 ರವರ ಕಚೇರಿಯಿಂದ ಅಳತೆ ಮಾಡಿ, ಸರ್ವೆ ನಕ್ಷೆಯನ್ನು ತಯಾರಿಸಿದ್ದಾರೆ. ಆದರೆ, ಸರ್ವೆ ವರದಿಯಲ್ಲಿ ಬ್ಲಾಕ್-3 ಮತ್ತು ಬ್ಲಾಕ್-4 ರಂತೆ ಗುರುತಿಸಲಾಗಿರುವ ಬ್ಲಾಕ್‌ಗಳಲ್ಲಿ ಕೂಡಲೇ ಅಧಿಕೃತವಾಗಿ ಸರ್ವೆ ಮಾಡಿ ಅತಿಕ್ರಮಿತ ಸರ್ಕಾರಿ ಆಸ್ತಿಯನ್ನು ವಶಪಡಿಸಿಕೊಳ್ಳಬೇಕು. ಅತಿಕ್ರಮ ಪ್ರದೇಶವನ್ನು ಒತ್ತುವರಿ ವಿಚಾರವಾಗಿ ಅಧಿಕಾರಿಗಳು ಶಾಮೀಲಾಗಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ವಹಿಸಲು ವಿಶೇಷ ಆಯುಕ್ತ(ಆಸ್ತಿಗಳು) ರಿಗೆ ಸೂಚಿಸಲಾಗಿದೆ ಎಂದರು.

ಉಪ ಮೇಯರ್‌ ರಾಮಮೋಹನ ರಾಜು, ಬೃಹತ್ ಸಾರ್ವಜನಿಕ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷರು ಮೋಹನ್ ಕುಮಾರ್, ವಿಶೇಷ ಆಯುಕ್ತರು(ಆಸ್ತಿಗಳು) ಶ್ರ ಜಿ.ಮಂಜುನಾಥ್, ದಕ್ಷಿಣ ವಲಯ ಉಪ ಆಯುಕ್ತೆ ಲಕ್ಷ್ಮೀದೇವಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(ಬಿಡಿಎ) ಅಧಿಕಾರಿಗಳು, ಬೆಂಗಳೂರು ನಗರ ಜಿಲ್ಲಾ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ