ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 322 ಮಂದಿ ಹೊಸದಾಗಿ ಸೇರ್ಪಡೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,721ಕ್ಕೆ ಏರಿಕೆಯಾಗಿದೆ.
ಕೆಲ ದಿನಗಳಿಂದ ಕೊರೊನಾಗೆ ಮೃತಪಡುತ್ತಿರುವ ಸಂಖ್ಯೆ ಏರುತ್ತಲೇ ಇದ್ದು ಇಂದು ಕೂಡ 8 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೃತ ಸಂಖ್ಯೆ 154ಕ್ಕೆ ಏರಿಕೆ ಆಗಿದೆ. (ಅನ್ಯಕಾರಣಕ್ಕೆ ನಾಲ್ವರು ಸೇರಿ).
ಇಂದು ಬೆಂಗಳೂರಿನಲ್ಲಿ ಮೂರು, ಕಲಬುರಗಿಯಲ್ಲಿ ಎರಡು, ರಾಮನಗರ, ಬಳ್ಳಾರಿ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
24 ಗಂಟೆಗಳಲ್ಲಿ ರಾಜ್ಯದಲ್ಲಿ 274 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 6,004 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇನ್ನು 3,563 ಸಕ್ರಿಯ ಪ್ರಕರಣಗಳಿವೆ. ಇಂದು ಕಂಡುಬಂದಿರುವ 322 ಹೊಸ ಪ್ರಕರಣಗಳಲ್ಲಿ64 ಮಂದಿ ಹೊರರಾಜ್ಯ ಮತ್ತು 5 ಮಂದಿ ಅಂತಾರಾಷ್ಟ್ರ ಪ್ರಯಾಣದ ಇತಿಹಾಸ ಹೊಂದಿದ್ದಾರೆ.
ಬೆಂಗಳೂರು ನಗರ 107, ಬಳ್ಳಾರಿ 53, ಬೀದರ್ 22, ಮೈಸೂರು 21, ವಿಜಯಪುರ 16, ಯಾದಗಿರಿ 13, ಉಡುಪಿ 11, ಗದಗ 9, ದಕ್ಷಿಣ ಕನ್ನಡ 8, ಕೋಲಾರ 8, ಹಾಸನ 7, ಕಲಬುರಗಿ 6, ಚಿಕ್ಕಬಳ್ಳಾಪುರ 5, ಶಿವಮೊಗ್ಗ5, ಧಾರವಾಡ 4, ತುಮಕೂರು 4, ಕೊಪ್ಪಳ 4, ಚಾಮರಾಜನಗರ 4, ರಾಯಚೂರು 3, ಉತ್ತರ ಕನ್ನಡ 3, ಮಂಡ್ಯ 2, ಬೆಳಗಾವಿ 2, ದಾವಣಗೆರೆ 2, ಹಾವೇರಿ 2, ಕೊಡಗಿನಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
ದೇಶದಲ್ಲಿ 441,948 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 441,948 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ 14,030 ಮಂದಿ ಮೃತಪಟ್ಟಿದ್ದಾರೆ. 248,889 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 9,225,827 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 475,076 ಜನರು ಮೃತಪಟ್ಟಿದ್ದಾರೆ 4,970,687 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail