NEWSನಮ್ಮರಾಜ್ಯ

ಜೂನ್‌ 18- ರಾಜ್ಯದಲ್ಲಿ 12 ಮಂದಿ ಕೊರೊನಾಗೆ ಬಲಿ, 210 ಜನರಿಗೆ ಪಾಸಿಟಿವ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 210 ಮಂದಿಗೆ  ಹೊಸದಾಗಿ ಸೇರ್ಪಡೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 7,944ಕ್ಕೆ ಏರಿಕೆಯಾಗಿದೆ.

ಕೆಲ ದಿನಗಳಿಂದ ಕೊರೊನಾಗೆ ಮೃತಪಡುತ್ತಿರುವ ಸಂಖ್ಯೆ ಏರುತ್ತಲೇ ಇದ್ದು  ಇಂದು ಕೂಡ 12  ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೃತ ಸಂಖ್ಯೆ 118ಕ್ಕೆ ಏರಿಕೆ ಆಗಿದೆ. (ಅನ್ಯಕಾರಣಕ್ಕೆ ನಾಲ್ವರು ಸೇರಿ).

ಬಳ್ಳಾರಿ 48, ಕಲಬುರಗಿ 48, ದಕ್ಷಿಣ ಕನ್ನಡ 23, ರಾಮನಗರ 21, ಬೆಂಗಳೂರು ನಗರ 17, ಯಾದಗಿರಿ 8, ಮಂಡ್ಯ 7, ಬೀದರ್ 6, ಗದಗ 5, ರಾಯಚೂರು 4, ಹಾಸನ 4, ಧಾರವಾಡ 4, ದಾವಣಗೆರೆ 3, ಚಿಕ್ಕಮಗಳೂರು 3, ವಿಜಯಪುರ 2, ಉತ್ತರ ಕನ್ನಡ 2, ಮೈಸೂರು 2, ಬಾಗಲಕೋಟೆ, ಶಿವಮೊಗ್ಗ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ಇಂದು 179 ಜನರು ಕೊರೊನಾದಿಂದ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಒಟ್ಟು 7,944 ಸೋಂಕಿತರಲ್ಲಿ 2,843 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, 4,983 ಜನರು ಡಿಸ್ಚಾರ್ಜ್ ಆಗಿದ್ದಾರೆ.  ಇಂದು ಪತ್ತೆಯಾದ 210 ಸೋಂಕಿತರ ಪೈಕಿ 58 ಮಂದಿ ಅಂತರಾಜ್ಯ ಹಾಗೂ 21 ಅಂತರಾಷ್ಟ್ರೀಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇನ್ನು ಐಸಿಯುನಲ್ಲಿ 73 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ನಗರದ 57, 58, 39, 68, 31 ವರ್ಷದ ವ್ಯಕ್ತಿ, 74, 65 ಮತ್ತು 40 ವರ್ಷದ ಮಹಿಳೆ, ಕೊಪ್ಪಳದಲ್ಲಿ 50 ವರ್ಷದ ಮಹಿಳೆ, ಬೀದರ್ ನಲ್ಲಿ 55 ವರ್ಷದ ವ್ಯಕ್ತಿ, ವಿಜಯಪುರದಲ್ಲಿ 66 ವರ್ಷದ ಮಹಿಳೆ, ಕಲಬುರಗಿಯಲ್ಲಿ 50 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ದೇಶದಲ್ಲಿ 368,705 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 368,705 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ 12,280 ಮಂದಿ ಮೃತಪಟ್ಟಿದ್ದಾರೆ. 195,139 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 8,478,208 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು  452,225  ಜನರು ಮೃತಪಟ್ಟಿದ್ದಾರೆ 4,444,418 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್