NEWSನಮ್ಮರಾಜ್ಯ

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಸರ್ಕಾರ ವಿಫಲ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಿರುವ ಮೂರ್ನಾಲ್ಕು ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲು ಬೆಡ್ ಗಳಿಲ್ಲ, ವೆಂಟಿಲೇಟರ್ ಗಳ ಕೊರತೆ ಇದೆ. ಇದಕ್ಕೆ ಸ್ವಯಂ ಪ್ರೇರಿತ ಲಾಕ್ ಡೌನ್ ಒಂದೇ ಪರಿಹಾರ ಎಂದು ಸರ್ಕಾರದ ನಡೆಯಿಂದ ಜನರು ಅನುಭವಿಸುತ್ತಿರುವ ಸಮಸ್ಯೆ ಕುರಿತು  ನಾಗರಿಕರಿಗೆ ಈ ಸಲಹೆ ನೀಡಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ನಿವಾಸಿಗಳೇ, ನೀವು COVID-19 ನಿಂದ ಪಾರಾಗಲು ಈಗ ಉಳಿದಿರುವುದು ಒಂದೇ ದಾರಿ. ಮನೆಯಲ್ಲೇ ಉಳಿದು ನೀವೇ ಸ್ವಯಂ ಘೋಷಿತ ಬಂದ್ ಆಚರಿಸಿ. ಪ್ರಾಣಕ್ಕಿಂತಲೂ ಹಣ ಮುಖ್ಯವಲ್ಲ.‌ ಜೀವ ಇದ್ದರೆ ಹೇಗಾದರೂ ಬದುಕಬಹುದು. ನಿಮ್ಮ ಜೀವ ಜೀವನ ಈಗ ನಿಮ್ಮ ಕೈಯಲ್ಲಿದೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಕೂಡ ಇದನ್ನೇ ಪರೋಕ್ಷವಾಗಿ ಹೇಳುತ್ತಿದೆ. ಕೊರೊನಾ ವೈರಸ್ ಸಮೂಹ ಪ್ರಸರಣದ ಈಗಿನ ಸ್ಥಿತಿಯಲ್ಲಿ ಮನೆಯಲ್ಲಿರುವುದೇ ‘ಮನೆ ಮದ್ದು’. ಈ ಸೋಂಕಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸರ್ಕಾರ ನಿಗದಿಪಡಿಸಿರುವುದು ದಿನಕ್ಕೆ 10-15 ಸಾವಿರ ರೂ. ಈ ದರ ಬಡವರಿಗಿರಲಿ, ಮೇಲ್ಮಧ್ಯಮವರ್ಗದವರಿಗೂ ಭರಿಸಲು ಸಾಧ್ಯವಾಗದು ಎಂದು ಸರ್ಕಾರದ ನಡೆಗೆ ಕಿಡಿಕಾರಿದ್ದಾರೆ.

ಒಂದು ಕುಟುಂಬದ ನಾಲ್ಕು ಜನರಿಗೆ ಕೊರೊನಾ ಬಂದರೆ ಖಾಸಗಿ ಆಸ್ಪತ್ರೆಯಲ್ಲಿ 15 ದಿನಗಳ ಚಿಕಿತ್ಸೆಗೆ ಸರ್ಕಾರ ನಿಗದಿಪಡಿಸಿರುವ ದರದ ಪ್ರಕಾರ 5-6 ಲಕ್ಷ ರೂ ಬೇಕು. ಬಡವರು ಮಧ್ಯಮವರ್ಗದವರು ಎಲ್ಲಿಂದ ತರುತ್ತಾರೆ? ಸರ್ಕಾರ ಕೈಚೆಲ್ಲಿ ಕುಳಿತಿರುವಾಗ ನಮ್ಮ ಜೀವ ನಾವೇ ಉಳಿಸಿಕೊಳ್ಳಬೇಕು. ದಯಮಾಡಿ ಎಚ್ಚರದಿಂದಿರಿ. ಇದು ನನ್ನ ಕಳಕಳಿಯ ಮನವಿ ಎಂದು ನಾಗರಿಕರಲ್ಲಿ ಕೇಳಿಕೊಂಡಿದ್ದಾರೆ.

 

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್