NEWSನಮ್ಮರಾಜ್ಯರಾಜಕೀಯ

ಇಂಧನ ಬೆಲೆ ಏರಿಕೆ:  ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರುಪೆಟ್ರೋಲ್, ಡೀಸೆಲ್ ದರ ಹೆಚ್ಚಳ ವಿರೋಧಿಸಿ ಸೋಮವಾರ (ಜೂ.29) ಸೈಕಲ್ ಚಳವಳಿ ಮಾಡಿದ ರಾಜ್ಯ  ಕಾಂಗ್ರೆಸ್ ನಾಯಕರು ಕೇಂದ್ರ  ಮತ್ತು ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೋಗಿ ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ  ನೇತೃತ್ವದಲ್ಲಿ ಇಂದು ನಡೆದ ಪ್ರತಿಭಟನೆಯಲ್ಲಿ ಪಕ್ಷದ ಹಿರಿಯ ನಾಯಕರು ಮತ್ತು ಕಾರ್ಯಕರ್ತರು  ಭಾಗವಹಿಸಿ ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿ ಖಂಡಿಸಿದರು.

ಅಲ್ಲದೆ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ  ಮಾಡುವ ಮೂಲಕ ರಾಜ್ಯ ಸರ್ಕಾರದ  ರೈತರ ಜತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಕಳೆದ 15ದಿನಗಳಿಂದ ನಿರಂತರವಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡುತ್ತಾ ಬಂದಿದೆ. ಇದರಿಂದ ಜನ ಸಾಮಾನ್ಯರ ಜೀವನ ಕಷ್ಟಕರವಾಗುತ್ತಿದೆ. 25ರೂ. ಆಸುಪಾಸಿನಲ್ಲೇ ಸಿಗುವ ಇಂಧನವನ್ನು 82 ರೂ.ಗೆ ಮಾರಾಟ ಮಾಡುವುದು ಎಷ್ಟು ಸರಿ ಎಂದು ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಮಾತನಾಡಿ, ದಪ್ಪ ಚರ್ಮದ ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಜೈಲ್ ಭರೋ ಸೇರಿದಂತೆ ವಿವಿಧ ರೀತಿಯ ಹೋರಾಟ ಅನಿವಾರ್ಯವಾಗಿದೆ ಎಂದರು.

ಆರು ವರ್ಷಗಳಲ್ಲಿ ದರ ಏರಿಕೆ ಮತ್ತು ಡೀಸೆಲ್, ಪೆಟ್ರೋಲ್ ಮೇಲಿನ ತೆರಿಗೆ ಮೂಲಕ ಕೇಂದ್ರ ಸರಕಾರ ಸುಮಾರು 18 ಲಕ್ಷ ಕೋಟಿ ರೂ. ಸಂಗ್ರಹಿಸಿದ ಮಾಹಿತಿ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಿರುವುದರಿಂದ ಪೆಟ್ರೋಲ್ ಡೀಸೆಲ್ ಇಪ್ಪತ್ತೈದು ರೂಪಾಯಿ ಆಸುಪಾಸಿನಲ್ಲಿ ಇರಬೇಕಿತ್ತು. ಆದರೆ ಸುಮಾರು 82 ರೂ.ಗಳಿಗೆ ಮಾರಾಟ ಮಾಡುತ್ತಿದೆ ಎಂದು ಕಿಡಿಕಾರಿದರು.

ಇನ್ನು ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಸರ್ಕಾರದ ವೈಫಲ್ಯದ ಪರಿಣಾಮ ಆರ್ಥಿಕ ಸ್ಥಿತಿಗೆ ಪಾರ್ಶ್ವವಾಯು ಹೊಡೆದಿದೆ.  ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯರು, ಸಿಬ್ಬಂದಿಗೆ ಸೌಲಭ್ಯಗಳೇ ಇಲ್ಲ ಎಂದು ಗುಡುಗಿದರು.

ಸಾಮಾನ್ಯ ಜನರಿಗೆ ಕೊರೊನಾ ಪಾಸಿಟಿವ್‌ ಇದೆ ಎಂದು ದೃಢಪಟ್ಟರು ಅವರನ್ನು ಕೋವಿಡ್‌ ಆಸ್ಪತ್ರೆಗೆ ಸೇರಿಸಿ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ಸರ್ಕಾರ ಸೋತಿದೆ ಎಂದು ಆರೋಪಿಸಿದರು.

ಪೆಟ್ರೋಲ್‌ ಟ್ಯಾಂಕರ್‌ ಮೇಲೆ ಏರಿದ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರು ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿಯ ವಿರುದ್ಧ ಧಿಕ್ಕಾರ ಕೂಗಿದರು.

ಪ್ರತಿಭಟನೆ ವೇಳೆ ನೂರಾರು ಮಂದಿ ಪಕ್ಷದ ಕಾರ್ಯಕರ್ತರು ಸೇರಿದ್ದು, ಕೆಲವರು ಮಾಸ್ಕ್‌ ಹಾಕಿರಲಿಲ್ಲ. ಜತೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಲ್ಲಿ ವಿಫಲರಾದರು. ಇದರಿಂದ ಸಾಮಾನ್ಯ ಜನರಿಗೊಂದು ನ್ಯಾಯ ರಾಜಕಾರಣಿಗಳಿಗೊಂದು ನ್ಯಾಯವ ಎಂಬ ಕೂಗು ಕೇಳಿಬಂದಿತು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್