ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟ ಮೂವರು ಪೊಲೀಸರ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ಘೋಷಣೆಯಾಗಿದ್ದು, ಇನ್ನೆರಡು ದಿನದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇತ್ತೀಚೆಗೆ ಪೊಲೀಸರಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಅವರ ಕುಟುಂಬದವರಲ್ಲೂ ಭಯವಿದೆ. ಆದರೆ, ಪೊಲೀಸ್ ಇಲಾಖೆ ಪ್ರಮುಖ ಜವಾಬ್ದಾರಿ ಹೊಂದಿದ್ದು ಕೊರೊನಾ ಸೋಂಕು ತಗುಲದಂತೆ ಮುಂಜಾಗ್ರತೆ ವಹಿಸಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.
ಕಂಟೈನ್ಮೆಂಟ್ ಪ್ರದೇಶ ನಿಯಂತ್ರಣ ಮಾಡುವುದರ ಜತೆಗೆ ಜನರ ರಕ್ಷಣೆ ಮಾಡುವ ಹೊಣೆಯೂ ನಮ್ಮ ಪೊಲೀಸರ ಮೇಲಿದೆ. ಹೀಗಾಗಿ ಅವರಲ್ಲಿ ಅಧಿಕ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದು ತಿಳಿಸಿದರು.
ಇನ್ನು ನಮ್ಮ ಆರಕ್ಷ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡರೆ ಬೆಂಗಳೂರಿನಲ್ಲಿ ಅವರಿಗೇ ಪ್ರತ್ಯೇಕವಾಗಿಯೇ ಚಿಕಿತ್ಸೆ ನೀಡಲು ಐದು ಕೋವಿಡ್-19 ಆಸ್ಪತ್ರೆ ಗುರುತಿಸಲಾಗಿದೆ.ಇಲ್ಲಿ ಉತ್ತಮ ಚಿಕಿತ್ಸೆ ಜತೆಗೆ ತಪಾಸಣೆ ತಡವಾಗಬಾರದು ಎಂಬ ಉದ್ದೇಶದಿಂದ ಪೊಲೀಸರಿಗಾಗಿಗೆ ಹೆಚ್ಚು ತಪಾಸಣೆ ಸೆಂಟರ್ ಕೇಳಲಾಗಿದೆ. ಎಸಿಎಸ್ ಅವರೊಂದಿಗೆ ಮಾತನಾಡಿದ್ದು, ಪ್ರತ್ಯೇಕ ಆಸ್ಪತ್ರೆ, ಟೆಸ್ಟಿಂಗ್ ಘಟಕ ನೀಡಲಿದ್ದಾರೆ ಎಂದು ವಿವರಿಸಿದರು.
ಈ ನಡುವೆ ಕರ್ತವ್ಯದಲ್ಲಿದ್ದ ಇಲಾಖೆಯ ಹಲವು ಸಿಬ್ಬಂದಿ ಹಾಗೂ ಅಧಿಕಾರಿಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಹಾಗೂ ಆರೋಗ್ಯದ ದೃಷ್ಟಿಯಿಂದ ವಿಶೇಷ ವ್ಯವಸ್ಥೆ ಕಲ್ಪಿಸುವಂತೆ ಗೃಹ ಇಲಾಖೆ ಆದೇಶ ಹೊರಡಿಸಿದೆ.
Ivaru matra manushyaru bereyavaru?????