CrimeNEWSನಮ್ಮಜಿಲ್ಲೆ

ಬಿಇಒ ಬಸವರಾಜು, ಕಾರುಚಾಲಕ ಷರೀಫ್‌ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಪಿರಿಯಾಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ಮತ್ತು ಅವರ ಕಾರುಚಾಲಕ ಷರೀಫ್‌ ಎಂಬುವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ.

ಪಿರಿಯಾಪಟ್ಟಣದ ಪೊಲೀಸ್‌ ಠಾಣೆಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸಿ.ಎಂ.ಶಿವಯ್ಯ ಎಂಬುವರು ನೀಡಿದ ದೂರು ಆಧರಿಸಿ ಪಿರಿಯಾಪಟ್ಟಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು. ತಾಲೂಕು ಮಟ್ಟದ ಕ್ರೀಡಾ ಕೂಟದ ಅನುದಾನಕ್ಕೆ ಸಂಬಂಧಿಸಿದಂತೆ ವಾಹನದಲ್ಲಿ ಕುಳಿತು ಸೆ.17ರಂದು ಸಂಭಾಷಣೆ ಮಾಡುವ ಸಂದರ್ಭದಲ್ಲಿ ಶಿಕ್ಷಣಾಧಿಕಾರಿಗಳು ಅವಾಚ್ಯಶಬ್ದಗಳಿಂದ ನನ್ನನ್ನು ನಿಂದಿಸಿದ್ದು ಜಾತಿ ನಿಂದನೆ ಮಾಡಿದ್ಧಾರೆ.

ಅಲ್ಲದೆ ವಾಹನ ಚಾಲಕ ಷರೀಫ್‌ಕೂಡ ಇದರಲ್ಲಿ ಭಾಗಿಯಾಗಿದ್ದು ಈತನು ಸೇರಿ ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಕ್ರಮವಹಿಸಿರುವ ಪೊಲೀಸರು ಎಸ್ಸಿ ಎಸ್ಟಿ ದೌರ್ಜನ್ಯ ಕಾಯಿದೆ ಅಡಿಯಲ್ಲಿ ಜಾತಿನಿಂದನೆ ಪ್ರಕರಣ ದಾಖಲಿಸಿದ್ಧಾರೆ.

ಚಾಲಕ ಷರೀಫ್ ಮತ್ತು ಬಿಇಒ ಬಸವರಾಜು ಜೀಪ್‌ನಲ್ಲಿ ತೆರಳುವಾಗ ಪರಸ್ಪರ ಸಂಭಾಷಣೆ ಮಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ಇಬ್ಬರೂ ದಲಿತರನ್ನು ಅವಹೇಳನ ಮಾಡಿ ಮಾತನಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಕ್ರಮವಹಿಸುವಂತೆ ದಲಿತ ನವನಿರ್ಮಾಣ ವೇದಿಕೆಯ ಸದಸ್ಯರು ಕೂಡ ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸರು ಸಿ.ಎಂ.ಶಿವಯ್ಯ ಅವರು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಅವರ ಚಾಲಕ ಶಿಕ್ಷಣ ಇಲಾಖೆಯ ಮುಖ್ಯಸ್ಥ ಜಾತಿನಿಂದನೆ ಪ್ರಕರಣಕ್ಕೆ ತುತ್ತಾಗಿದ್ದಾರೆ.

ಡಿಡಿಪಿಐ ಭೇಟಿ: ಘಟನೆಗೆ ಸಂಬಂಧಿಸಿದಂತೆ ನಾಳೆ ಪಿರಿಯಾಪಟ್ಟಣಕ್ಕೆ ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಭೇಟಿ ನೀಡಲಿದ್ದು ಆಡಿಯೋಗೆ ಸಂಬಂಧಿಸಿದಂತೆ ಬಿಇಒ ಬಸವರಾಜು ಮತ್ತು ಚಾಲಕ ಷರೀಫ್‌ಗೆ ಕಾರಣ ಕೇಳಿ ನೋಟಿಸ್ ಜಾರಿಮಾಡಿದ್ಧಾರೆ ಎಂದು ಕಚೇರಿಯ ಮೂಲಗಳು ತಿಳಿಸಿವೆ.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC