NEWSನಮ್ಮಜಿಲ್ಲೆ

ಬಿಡದಿ ಟೌನ್ ಶಿಪ್‌: ರೈತರ ವಿರೋಧದ ನಡುವೆಯೂ ಎಕರೆಗೆ 2.14 ಕೋಟಿ ರೂ. ದರ ನಿಗದಿ- ಭೂಸ್ವಾಧೀನಕ್ಕೆ ಮುಂದಾದ ಸರ್ಕಾರ

ಕಳೆದ ಒಂದೂವರೆ ವರ್ಷದಿಂದ ಯೋಜನೆ ವಿರೋಧಿಸಿ ರೈತರು ನಿರಂತರ ಹೋರಾಟ ಮಾಡುತ್ತಿದ್ದಾರೆ‌. ಹೀಗಿದ್ದರೂ ಕೂಡ ಬಿಡದಿ ಟೌನ್ ಶಿಪ್ ಯೋಜನೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ತಮ್ಮ ಪಟ್ಟು ಬಿಡದೇ ಟೌನ್ ಶಿಪ್ ನಿರ್ಮಾಣದ ಪ್ರಕ್ರಿಯೆ ಮುಂದುವರಿಸಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ
  • ಯೋಜನಾ ವ್ಯಾಪ್ತಿಗೆ ಒಳಪಡುತ್ತಿರುವ 9 ಕಂದಾಯ ಗ್ರಾಮಗಳ ಪೈಕಿ ಆರಂಭಿಕವಾಗಿ ಪ್ರಸ್ತುತ 3 ಗ್ರಾಮಗಳ 518 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟ

ರಾಮನಗರ: ರೈತರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಬಿಡದಿ ಟೌನ್ ಶಿಪ್‌ಗೆ ಅಂತಿಮ ಅಧಿಸೂಚನೆ ಪ್ರಕಟಿಸಿದ್ದು, ಪ್ರತಿ ಎಕರೆಗೆ 2.14 ಕೋಟಿ ರೂ. ಬೆಲೆ ನಿಗದಿ ಮಾಡಲಾಗಿದೆ.

ಈ ಯೋಜನಾ ವ್ಯಾಪ್ತಿಗೆ ಒಳಪಡುತ್ತಿರುವ 9 ಕಂದಾಯ ಗ್ರಾಮಗಳ ಪೈಕಿ ಆರಂಭಿಕವಾಗಿ ಪ್ರಸ್ತುತ 3 ಗ್ರಾಮಗಳ 518 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟ ಮಾಡಲಾಗಿದೆ.

ಅವುಗಳಲ್ಲಿ ಬಿಡದಿ ಹೋಬಳಿಯ ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಹಾಗೂ ವಡೇರಹಳ್ಳಿ ಗ್ರಾಮದ ಸುಮಾರು 754 ರೈತರ ಜಮೀನುಗಳ ಭೂಸ್ವಾಧೀನಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ರೈತರು ಸೂಕ್ತ ದಾಖಲೆ ಸಲ್ಲಿಸಿ ಪರಿಹಾರ ಪಡೆದುಕೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಸೂಚನೆ ನೀಡಿದೆ.

ಇದರಲ್ಲಿ ಪ್ರತಿ ಎಕರೆಗೆ ಕನಿಷ್ಠ 2.14 ಕೋಟಿ ರೂ. ದರ ನಿಗದಿ ಮಾಡಿದೆ. ಆದರೆ, ಈ ನಡುವೆಯೂ ರೈತರು ನೀವು ಗುಂಟೆಗೇ ಕೋಟಿ ರೂ.ಕೊಟ್ಟರು ನಾವು ಜಮೀನು ಕೊಡುವುದಿಲ್ಲ ಎಂದು ಹೋರಾಟ ಮಾಡುತ್ತಿದ್ದಾರೆ.

ಅದು ಕಳೆದ ಒಂದೂವರೆ ವರ್ಷದಿಂದ ಯೋಜನೆ ವಿರೋಧಿಸಿ ರೈತರು ನಿರಂತರ ಹೋರಾಟ ಮಾಡುತ್ತಿದ್ದಾರೆ‌. ಹೀಗಿದ್ದರೂ ಕೂಡ ಬಿಡದಿ ಟೌನ್ ಶಿಪ್ ಯೋಜನೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ತಮ್ಮ ಪಟ್ಟು ಬಿಡದೇ ಟೌನ್ ಶಿಪ್ ನಿರ್ಮಾಣದ ಪ್ರಕ್ರಿಯೆ ಮುಂದುವರಿಸಿದ್ದಾರೆ.

ಇತ್ತ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರಿಗೆ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಸಾಥ್ ನೀಡಿದ್ದು, ರೈತರ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದ್ದು, ಮುಂದೆ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Deva
the authorDeva

Leave a Reply

error: Content is protected !!
Latest news
ಸರ್ಕಾರದಿಂದ ಹೊರಬಿತ್ತು ಮಹತ್ವದ ಆದೇಶ: ಇನ್ನುಮುಂದೆ ಸರ್ಕಾರಿ ಪುರುಷ ನೌಕರರು ಪಡೆಯಬಹುದು 6ತಿಂಗಳ ಶಿಶುಪಾಲನಾ ರಜೆ KSRTC: ಇಂದಿನಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಣೆಗೆ ಸರ್ಕಾರದ ಆದೇಶ ಬಿಡದಿ ಟೌನ್ ಶಿಪ್‌: ರೈತರ ವಿರೋಧದ ನಡುವೆಯೂ ಎಕರೆಗೆ 2.14 ಕೋಟಿ ರೂ. ದರ ನಿಗದಿ- ಭೂಸ್ವಾಧೀನಕ್ಕೆ ಮುಂದಾದ ಸರ್ಕಾರ ಕರೆಂಟ್‌ ಬಿಲ್‌: ವಿದ್ಯುತ್ ವಿತರಣಾ ಕಂಪನಿಗಳ ಅನ್ಯಾಯದ ಬಿಲ್ಲಿಂಗ್ ಪದ್ಧತಿಗೆ ಬ್ರೇಕ್‌- KERC ಆದೇಶ ಪಾಲನೆಗೆ ಗ್ರಾಹಕರ... ಗೃಹಲಕ್ಷ್ಮಿಯೋಜನೆಗೆ ಮತ್ತೆ ಹೊಸದಾಗಿ ಅರ್ಜಿ ಸ್ವೀಕರಿಸುವ ಚಿಂತನೆಯಲ್ಲಿ ಸರ್ಕಾರ! ಮೂರು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ನಿರ್ಧಾರ: ಸಾರಿಗೆ ಸಚಿವ ಬೈರತಿ ... ಹಣ ದುರುಪಯೋಗ, ಕರ್ತವ್ಯ ಲೋಪ ಎಸಗಿದ ಆರೋಪ ಸಾಬೀತು: ಮಹೇಶ್ ಜೋಶಿ ಕಸಾಪ ಆಜೀವ ಸದಸ್ಯತ್ವ ರದ್ದು ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ