ಬೀದರ್: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ಬ್ಯಾಂಕ್ ಸಿಬ್ಬಂದಿ ಮೇಲೆ ಫೈರಿಂಗ್ ಮಾಡಿ ಸಿಬ್ಬಂದಿಯನ್ನು ಹತ್ಯೆಮಾಡಿ, ಜತೆಗೆ ಹಾಡಹಗಲೇ ಸುಮಾರು 93 ಲಕ್ಷ ರೂಪಾಯಿ ದರೋಡೆ ಮಾಡಿ ಪರಾರಿಯಾಗಿದ್ದ ಇಬ್ಬರು ಖದೀಮರನ್ನು ಹೈದರಾಬಾದ್ನಲ್ಲಿ ಪೊಲೀಸರಿಗೆ ಬಂಧಿಸಿದ್ದಾರೆ.
ಗುರುವಾರ ಬೆಳಗ್ಗೆ ಬೀದರ್ನಲ್ಲಿ ಇಬ್ಬರು ಬ್ಯಾಂಕ್ ಸಿಬ್ಬಂದಿಗಳ ಮೇಲೆ ಗುಂಡುಹಾರಿಸಿ, 93 ಲಕ್ಷ ಹಣದೊಂದಿಗೆ ದರೋಡೆಕೋರರು ಪರಾರಿಯಾಗಿದ್ದರು. ಅವರಲ್ಲಿ ಒಬ್ಬ ಸ್ಥಳದಲ್ಲೇ ಮೃತಪಟ್ಟಿದು ಮತ್ತೊಬ್ಬ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸದ್ಯ ಗುಂಡಿನ ದಾಳಿಗೆ ಒಳಗಾದ ಶಿವಾ ಎಂಬಾತನನ್ನು ಹೈದ್ರಾಬಾದ್ ಕೇರ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಪ್ರಾಣಪಾಯದಿಂದ ಪಾರಾಗಿದ್ದಾನೆ ಎಂದು ತಿಳಿಸಿದ್ದಾರೆ.
ಇನ್ನು ಬೀದರ್ ರೀತಿಯಲ್ಲೇ ಹೈದ್ರಾಬಾದ್ನಲ್ಲೂ ಫೈರಿಂಗ್ ಮಾಡಿ ಅಟ್ಟಹಾಸ ಮೆರೆದಿದ್ದರು. ಈ ವೇಳೆ ಇಬ್ಬರೂ ಆರೋಪಿಗಳನ್ನು ಹೈದರಾಬಾದ್ನ ಅಫ್ಜಲ್ಗಂಜ್ ಪೊಲೀಸರು ಬಂಧಿಸಿದ್ದಾರೆ.
ಖದೀಮರು ಛತ್ತೀಸಗಢಗೆ ಹೋಗುವ ತಯಾರಿಯಲ್ಲಿದ್ದರು. ಖಾಸಗಿ ಟ್ರಾವೆಲರ್ ಬಳಿಯೂ ಗುಂಡು ಹಾರಿಸಿದ್ದರು. ಹೈದರಾಬಾದ್ ಅಟ್ಟಹಾಸದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಖಾಸಗಿ ಟ್ರಾವೆಲ್ ಸಂಸ್ಥೆಯಲ್ಲಿ ವ್ಯವಸ್ಥಾಪಕನಿಗೆ ಗುಂಡುಹಾರಿಸಿ ಪರಾರಿಯಾಗಲು ಎತ್ನಿಸಿದ ವೇಳೆ ಪೊಲೀಸರು ಹೆಡೆಮುರಿಕಟ್ಟಿದ್ದಾರೆ.
ಇನ್ನು ಖದೀಮರ ಗುಂಡೇಟಿನಿಂದ ಗಾಯಗೊಂಡಿರುವ ಖಾಸಗಿ ಟ್ರಾವೆಲ್ ಸಂಸ್ಥೆಯಲ್ಲಿ ವ್ಯವಸ್ಥಾಪಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀರು ತಿಳಿಸಿದ್ದಾರೆ.