NEWSನಮ್ಮಜಿಲ್ಲೆನಮ್ಮರಾಜ್ಯ

ಫೆ.1ರಂದು ಸಾರಿಗೆ ನೌಕರರ ಬೆಂಗಳೂರು ಚಲೋ ಬೃಹತ್‌ ಪ್ರತಿಭಟನೆ : ಅದಿಮೂರ್ತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.1ರಂದು ಬೆಂಗಳೂರು ಚಲೋ ಬೃಹತ್‌ ಪ್ರತಿಭಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು KSRTC ಸ್ಟಾಪ್ & ವರ್ಕರ್ಸ್ ಯೂನಿಯನ್ ಬಳ್ಳಾರಿ ವಿಭಾದ ಅದ್ಯಕ್ಷ ಎಚ್.ಎ. ಅದಿಮೂರ್ತಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸ್ಟಾಪ್ ಆಂಡ್ ವರ್ಕರ್ಸ್‌ ಫೆಡರೇಷನ್‌ ನೇತೃತ್ವದಲ್ಲಿ ಆಯೋಜನೆ ಮಾಡುತ್ತಿರುವ ಈ ಕಾರ್ಯಕ್ರಮದಲ್ಲಿ ನೌಕರರ ವಿವಿಧ ಬೇಡಿಕೆಗಳ ಈಡೇರಿಸಿಕೊಳ್ಳುವ ಸಲುವಾಗಿ ಸರ್ಕಾರದ ಮೇಲೆ ಒತ್ತಡ ಹೇರಲು‌ ನಿವೃತ್ತ ನೌಕರರು ಸೇರಿದಂತೆ ಸಮಸ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಬೆಂಗಳೂರು ಚಲೋ ಬೃಹತ್‌ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು (ನಿವೃತ್ತ ನೌಕರರು ಸೇರಿ)ಭಾಗವಹಿಸಿ ಹೋರಾಟವನ್ನು ಯಶಸ್ಸು ಗೊಳಿಸಬೇಕು ಎಂದು ಕೋರಿದ್ದಾರೆ.

ಇನ್ನು ಪ್ರಮುಖ ಬೇಡಿಕೆಗಳು ಯಾವುವು ಎಂದರೆ ಮೊದಲನೆಯದಾಗಿ 1/1/ 2020ರಿಂದ ನಿವೃತ್ತ ನೌಕರರಿಗೂ ಸೇರಿದಂತೆ ಹಾಲಿ ವೃತ್ತಿ ನಿತರ ಎಲ್ಲ ನೌಕರರಿಗೂ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡಬೇಕು.

ಎರಡನೆಯದಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಪಘಾತವಾದಾಗ ಹಿಟ್& ರನ್ ಪ್ರಕರಣದಲ್ಲಿ ಚಾಲಕರಿಗೆ ವಿಧಿಸುವ ಶಿಕ್ಷೆಯನ್ನು ರದ್ದು ಪಡಿಸಬೇಕು.

ಮೂರನೆಯದಾಗಿ 1/1/2024 ರಿಂದ ಹೊಸ ಕೈಗಾರಿಕೆ ಒಪ್ಪಂದ ಮಾಡುವ ಮೂಲಕ ಅಗ್ರಿಮೆಂಟ್‌ ಮಾಡಲು ಎಲ್ಲ ಸಂಘಟನೆಗಳ ಮುಖಂಡ ಸಭೆ ಕರೆದು ಚರ್ಚಿಸಬೇಕು. ಇನ್ನು ನಾಲ್ಕನೆಯದಾಗಿ ನಿವೃತ್ತ ನೌಕರರಿಗೆ ಕೊಡಬೇಕಿರುವ ಗ್ರಾಚ್ಯುಟಿ ಹಾಗೂ ಇತರೆ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು.

ಇವುಗಳ ಜತೆಗೆ ಸದ್ಯ ಪ್ರಚಲಿತದಲ್ಲಿರುವ ಶಕ್ತಿ ಯೋಜನೆಯಡಿ ಸರ್ಕಾರದಿಂದ ಸಂಸ್ಥೆಗೆ ಬರಬೇಕಾದ ಸಂಪೂರ್ಣ ಹಣ ಪಾವತಿಸಬೇಕು. 6.ಶಕ್ತಿ ಯೋಜನೆಯಿಂದ ನಿರ್ವಾಹಕರಿಗೆ ಆಗುತ್ತಿರುವ ಕಿರುಕುಳ ಹಿಂಸೆ ತಪ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಈ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು 15 ದಿನದ ಹಸುಳೆಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ - ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಸ್ತ್ರ: ಅಪರ ಸಿವಿಲ್ ನ್ಯಾಯಾಧೀಶೆ ಶಕುಂತಲಾ ಯೋಗ ಮಾಡಿ ಸಮೃದ್ಧ ಆರೋಗ್ಯವಂತ ಜೀವನ ನಡೆಸಿ: ಡಾ. ದಿವ್ಯಾ ಸಲಹೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದ ಸರ್ಕಾರ: ಎಎಪಿ ಆಕ್ರೋಶ KSRTC ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್‌ ಕಳೆದುಕೊಂಡ ಮಹಿಳೆ: ತನಿಖಾಧಿಕಾರಿಗಳಿಗೆ ಹೆದರಿ ಬಸ್‌ನಿಂದ ಕೆಳಗಿಳಿಸಿದ ಕಂಡ... ಜುಲೈ 7ರಂದು KSRTC ನೌಕರರ ಕ್ರೆಡಿಟ್‌ ಸಹಕಾರ ಸಂಘದ ಚುನಾವಣೆ- ಜೂ.27ರಿಂದ ನಾಮಪತ್ರ ಸಲ್ಲಿಕೆ