ಹೊಸನಗರ: ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ ಲಾರಿ ಹರಿದಿದ್ದು ಘಟನೆ ಬಳಿಕ ಲಾರಿ ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಮಾಸ್ತಿಕಟ್ಟೆಯಿಂದ ಒಂದು ಕಿ.ಮೀ. ದೂರದ ಹುಲಿಕಲ್ ಮುಖ್ಯ ರಸ್ತೆಯಲ್ಲಿ ತಡರಾತ್ರಿ ನಡೆದಿದೆ.
ಹುಲಿಕಲ್ ಬಳಿ ಈ ಹಿಟ್ ಅಂಡ್ ರನ್ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಒಬ್ಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಘಟನೆಯ ಭೀಕರತೆ ನೋಡಿ ಜನ ಬೆಚ್ಚಿಬಿದ್ದಿದ್ದು, ಸುಮಾರು ಎರಡೂವರೆ ಗಂಟೆ ವಾಹನ ಸಂಚಾರ ಸ್ಥಗಿತವಾಗಿತ್ತು.
ಮಾಸ್ತಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಪದ ಕೈ ಕೂಲಿ ಕಾರ್ಮಿಕ ರವಿ (47) ಹಾಗೂ ಅವರ ಅಣ್ಣನ ಮಗ ಶ್ರಿಸಿರ ನಾಲ್ಕನೇ ತರಗತಿ ಹುಡುಗ ಮೃತರು. ರವಿಯವರ ಪತ್ನಿಯ ಕಾಲಿನ ಮೇಲೆ ಲಾರಿ ಹರಿದಿದ್ದು ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ.
ಹುಲಿಕಲ್ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಿದ್ದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ಬರುತ್ತಿದ್ದಾಗ ಸುಮಾರು ರಾತ್ರಿ 9:35 ರ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಘಟನೆ ನಡೆದ ಕ್ಷಣವೇ ಸ್ಥಳೀಯರು ಪೊಲೀಸರು ಮತ್ತು ಆಂಬುಲೆನ್ಸ್ ಕರೆ ಮಾಡಿದ್ದಾರೆ. ಆದರೆ ಸ್ಪಂದನೆ ಸಿಕ್ಕಿಲ್ಲ. 11 ಗಂಟೆಯದ್ರೂ ಪೊಲೀಸರು ಬಂದಿರಲಿಲ್ಲ. ವಿಷಯ ತಿಳಿದ ಕೂಡಲೇ ಬಂದಿದ್ದರೆ ಆ ಝಿವಗಳು ಉಳಿಯುತ್ತಿದ್ದವೋ ಏನು ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಕರೆ ನಾಡಿದರೂ ಸ್ಥಳಕ್ಕೆ ಬಾರದ ಪೊಲೀಸ್ ಮತ್ತು ಆಂಬುಲೆನ್ಸ್ ವಿರುದ್ಧ ಘಟನಾ ಸ್ಥಳದಲ್ಲಿ ಜಮಾಯಿಸಿದ್ದ ನೂರಾರು ಮಂದಿ ಸ್ಥಳೀಯರು ಆಡಳಿತಕ್ಕೆ ಹಿಡಿ ಶಾಪ ಹಾಕಿದ್ದು, ಇದು ನಮ್ಮ ರಾಜ್ಯದಲ್ಲಿ ಇರುವ ಸುವ್ಯವಸ್ಥಿತ ಆಡಳಿತ ವ್ಯವಸ್ಥೆ ಎಂದು ಕಿಡಿಕಾರಿದ್ದಾರೆ.