CrimeNEWSನಮ್ಮಜಿಲ್ಲೆ

ಮೈಸೂರು: ಹೊಸ ಹೆಲ್ಮೆಟ್ ಇದ್ದರೂ ಧರಿಸದ ಬೈಕ್‌ ಸವಾರ ಅಪಘಾತದಲ್ಲಿ ಮೃತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದು, ಹಿಂಬದಿ ಸವಾರ ತೀವ್ರಗಾಯಗೊಂಡು ಸಾವು ಬದುಕಿನ ಮಧ್ಯೆ ಹೊರಾಡುತ್ತಿರುವ ಘಟನೆ ನಗರದಲ್ಲಿ ನಡೆದಿದೆ.

ಮೈಸೂರು ತಾಲೂಕಿನ ಕಾಮನಕೆರೆ ಹುಂಡಿಯ ನಿವಾಸಿ ಗಾರೆ ಕೆಲಸಗಾರ ಸ್ವಾಮಿ‌ ( 32) ಮೃತರು. ಹೊಸ ಹೆಲ್ಮೆಟ್ ಇದ್ದರೂ ಪೆಟ್ರೋಲ್ ಟ್ಯಾಂಕ್ ಮೇಲೆ ಇಟ್ಟುಕೊಂಡು ಚಾಲನೆ ಮಾಡುತ್ತಿದ್ದರು ಮತ್ತು ಬೀದಿ ದೀಪವೂ ಇರಲಿಲ್ಲ ಎನ್ನಲಾಗಿದೆ.

ಗುರುವಾರ ರಾತ್ರಿ 9.50 ರ ಸಮಯದಲ್ಲಿ ದೇವೇಗೌಡ ವೃತ್ತದ ಎಂಪ್ರೋ ಹೋಟೆಲ್ ಎದುರು ಘಟನೆ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡ ಹಿಂಬದಿ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಲ್ಮೆಟ್ ಧರಸಿದೇ ಗಾಡಿ ಮುಂಬದಿಯಲ್ಲಿ ಇಟ್ಟುಕೊಂಡು ಸಂಚರಿಸುವ ವಾಹನ ಸವಾರರೇ ಇದನ್ನು ಗಮನಿಸಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿದ್ದರೆ ಈ ಕುಟುಂಬದ ಆಕ್ರಂದನ ಮುಗಿಲು ಮುಟ್ಟುತಿರಲಿಲ್ಲ.

ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಕ್ಕೆ ಹಿಂಬದಿಯಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸವಾರ ದುರ್ಮರಣ ಹೊಂದಿದ್ದಾನೆ. ಹೊಸ ಹೆಲ್ಮೇಟ್ ಇದ್ದರೂ ವಾಹನದ ಮುಂದೆ ಇಟ್ಟುಕೊಂಡು ಚಾಲನೆ ಮಾಡಿದ್ದಾನೆ ಎನ್ನಲಾಗಿದೆ. ಹೆಲ್ಮೆಟ್ ಧರಿಸಿದ್ದರೆ ಈ ಅವಘಡದಿಂದ ಮೃತಪಡುತ್ತಿರಲಿಲ್ಲ ಎನ್ನಾಗುತ್ತಿದೆ.

ಈ ಸಂಬಂಧ ಸಿದ್ದಾರ್ಥ ನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC