NEWSನಮ್ಮರಾಜ್ಯರಾಜಕೀಯ

ಬಡಜನರಿಗೆ ಸಾವಿನ ಭಾಗ್ಯ, ಭ್ರಷ್ಟರಿಗೆ ಸಂಪತ್ತಿನ ಭಾಗ್ಯ ಕೊಟ್ಟ ಬಿಜೆಪಿ ಸರ್ಕಾರ : ಸಿದ್ದರಾಮಯ್ಯ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಯನ್ನೇ 2000 ಕೋಟಿ ರೂಪಾಯಿಗೆ ಮಾರಾಟಕ್ಕೆ ಇಟ್ಟಿರುವ ರಾಜಕೀಯ ವ್ಯಾಪಾರಿ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ‌ ಮಾಡುತ್ತಿರುವುದು ತಮಾಷೆಯಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಿನ್ನೆ ಮಂಡ್ಯದಲ್ಲಿ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಶಾ ವಿರುದ್ಧ ಹರಿಹಾಯ್ದಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಆಪರೇಷನ್ ಕಮಲದ ಅನೈತಿಕ ಕೂಸು ಬಿಜೆಪಿ ಸರ್ಕಾರ ಹುಟ್ಟಿಕೊಂಡ ದಿನದಿಂದ ಬಡಜನರಿಗೆ ಸಾವಿನ ಭಾಗ್ಯ, ಭ್ರಷ್ಟರಿಗೆ ಸಂಪತ್ತಿನ ಭಾಗ್ಯ ಬಂದು, ವಿಧಾನಸೌಧವೇ ಕಮಿಷನ್ ಅಡ್ಡೆಯಾಗಿ ಬದಲಾಗಿದೆ. ಶೇ.40 ರಷ್ಟು ಕಮೀಷನ್ ನಲ್ಲಿ ನಿಮ್ಮ‌ ಪಾಲೆಷ್ಟು ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಪಾಲಿನ ಜಿಎಸ್‌ಟಿ ಪರಿಹಾರ ಪೂರ್ಣ ಪ್ರಮಾಣದಲ್ಲಿ ಬಂದಿಲ್ಲ, ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗಿಲ್ಲ, ಅತಿವೃಷ್ಟಿ, ಅನಾವೃಷ್ಟಿ, ಬೆಳೆಹಾನಿ ಪರಿಹಾರ ರೈತರಿಗೆ ಸಿಕ್ಕಿಲ್ಲ. ಅಮಿತ್ ಶಾ ಅವರೇ, ಸರ್ಕಾರದ 40% ಕಮಿಷನ್‌‌ನಲ್ಲಿ ನಿಮ್ಮ ಪಾಲು ತಪ್ಪದೆ ಸಂದಾಯ ಆಗುತ್ತಿದೆಯೇ ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ನೇಮಕಾತಿ, ವರ್ಗಾವಣೆ, ಬಡ್ತಿ, ಅನುದಾನ ಹಂಚಿಕೆ, ಕಾಮಗಾರಿ ಅನುಷ್ಠಾನ, ಬಿಲ್ ಪಾವತಿ ಹೀಗೆ ಅಡಿಯಿಂದ ಮುಡಿವರೆಗೆ 40% ಕಮಿಷನ್ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ರಾಜ್ಯ ನಾಯಕರನ್ನು ಪಕ್ಕದಲ್ಲಿಟ್ಟುಕೊಂಡು ಭ್ರಷ್ಟಾಚಾರದ ಬಗೆಗೆ ಮಾತನಾಡುವ ಅಮಿತ್ ಶಾ ಅವರ ಭಂಡತನಕ್ಕೆ ಶಹಭಾಸ್ ಅನ್ನಲೇಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಬೆಳಗಾವಿಯ ಸಂತೋಷ್ ಪಾಟೀಲ್ ಅವರಿಂದ ಹಿಡಿದು ದೇವರಾಯನದುರ್ಗದ ಟಿ.ಎನ್.ಪ್ರಸಾದ್ ವರೆಗೆ ರಾಜ್ಯ ಸರ್ಕಾರದ 40% ಕಮಿಷನ್ ಕಿರುಕುಳಕ್ಕೆ ಬಲಿಯಾದ ಗುತ್ತಿಗೆದಾರರ ಸರಣಿ‌ ಆತ್ಮಹತ್ಯೆಗಳು ನಿಂತಿಲ್ಲ. ಈ ಸಾವುಗಳಿಗೆ ನ್ಯಾಯ ಕೊಡ್ತೀರಾ ಮಿಸ್ಟರ್
ಶಾ ಅವರೇ ಎಂದು ಪ್ರಶ್ನಿಸಿದ್ದಾರೆ.

ಇನ್ನು ಕೊರೊನಾ ಕಾಲದಲ್ಲಿ ನಿಮ್ಮ ರಾಜ್ಯ ಸರ್ಕಾರದ ಸಚಿವರು ಕಮಿಷನ್ ಮುಕ್ಕಿ ತೇಗಿದರು. ನಿರಪರಾಧಿ ಜನ ಆಮ್ಲಜನಕ, ಬೆಡ್, ವೆಂಟಿಲೇಟರ್ ಸಿಗದೆ ಹಾದಿಬೀದಿಯಲ್ಲಿ ಪ್ರಾಣ ಬಿಟ್ಟರು. ನೀವು ತಟ್ಟೆ ಬಾರಿಸಲು ಹೇಳಿ ಜನರನ್ನು ಮಂಗ ಮಾಡಿದಿರಿ. ಇದನ್ನು ರಾಜ್ಯದ ಜನ ಮರೆತಿಲ್ಲ ಮಿಸ್ಟರ್ ಎಂದು ಶಾ ಅವರಿಗೆ ತಿವಿದಿದ್ದಾರೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ