NEWSನಮ್ಮರಾಜ್ಯಸಂಸ್ಕೃತಿ

ಬಿಜೆಪಿಗರು ವಿವಾದ ಸೃಷ್ಟಿಸಿ ನನ್ನನ್ನು ಹಿಂದೂವಿರೋಧಿ ಎಂದು ಬಿಂಬಿಸುವ ಪ್ರಯತ್ನದಲ್ಲಿದ್ದಾರೆ : ವಿಪಕ್ಷ ನಾಯಕ ಸಿದ್ದು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಾಸ್ತವದಲ್ಲಿ ನಾನು ಕೊಡಗಿನಲ್ಲಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ. ನಾನು ಆ ದಿನ ಕಳಲೆಪಲ್ಯ ಮತ್ತು ಅಕ್ಕಿರೊಟ್ಟಿ ತಿಂದಿದ್ದೆ. ಇದನ್ನು ಮಾಜಿ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರೂ ಹೇಳಿದ್ದಾರೆ. ವಾದಕ್ಕಾಗಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಬಾರದು ಎಂದು ಎಲ್ಲಿ ಇದೆ ಎಂದು ಪ್ರಶ್ನಿಸಿದ್ದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮಾಂಸ ತಿಂದು ದೇವಸ್ಥಾನಕ್ಕೆ ಹೋದರೂ ತಪ್ಪಲ್ಲ ಎಂದು ಹಿಂದೂ ಸಂಘಟನೆಯ ಪ್ರಮೋದ್ ಮುತಾಲಿಕ್ ಹೇಳಿದ್ದಾರಂತೆ. ಅದೇ ರೀತಿ ಜ್ಯೋತಿಷಿ ದೈವಜ್ಞ ಸೋಮಯಾಜಿಯವರು ಹೇಳಿದ್ದಾರೆ.
ಬಿಜೆಪಿಯ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಅವರು ಇಂತಹ ವಿಷಯಗಳನ್ನೆಲ್ಲ ವಿವಾದ ಮಾಡಬಾರದು ಎಂದು ಹೇಳಿದ್ದಾರೆ.

ಮಾಂಸಾಹಾರ ಮನುಷ್ಯನ ವೈಯಕ್ತಿಕ ವಿಚಾರ. ಯಾವುದಾದರೂ ಧಾರ್ಮಿಕ ಕೇಂದ್ರಗಳಲ್ಲಿ ಅಂತಹ ನಿರ್ಬಂಧಗಳಿದ್ದರೆ ಖಂಡಿತ ನಾವು ಅದನ್ನು ಪಾಲಿಸಬೇಕು. ನನಗೆ ತಿಳಿದಂತೆ ಎಲ್ಲಿಯೂ ಮೀನು-ಮಾಂಸ ತಿಂದು ದೇವಸ್ಥಾನಕ್ಕೆ ಬರಬಾರದು ಎಂಬ ನಿರ್ಬಂಧ ಇಲ್ಲ. ಹೀಗಿದ್ದಾಗ ಯಾಕೆ ಈ ವಿವಾದ ಎಂದು ಸಿದ್ದರಾಮಯ್ಯ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ಇನ್ನು ಹಂದಿ ಮಾಂಸ ತಿಂದು ಮಸೀದಿಗೆ ಹೋಗ್ತಿರಾ? ಎಂದು ಸಂಸದ ಪ್ರತಾಪ್‌ಸಿಂಹ ಕೇಳಿದ್ದಾರೆ. ನಾನು ನನ್ನ ಜೀವನದಲ್ಲಿ ಹಂದಿ ಮಾಂಸ ತಿಂದಿಲ್ಲ, ತಿನ್ನುವವರನ್ನು ಬೇಡ ಎನ್ನುವುದಿಲ್ಲ. ನನಗೆ ತಿಳಿದ ಹಾಗೆ ಮಸೀದಿಯಲ್ಲಿ ಅಂತಹ ನಿರ್ಬಂಧ ಇಲ್ಲ. ಬೇಕಾದರೆ ಪ್ರತಾಪ ಸಿಂಹನೇ ಹಂದಿ ತಿಂದು ಹೋಗಲಿ ಎಂದು ಸಲಹೆ ನೀಡಿದರು.

ರಾಜ್ಯ ಸರ್ಕಾರದ ವಿರುದ್ಧ ಜನ ಈಗಾಗಲೇ ರೊಚ್ಚಿಗೆದ್ದಿದ್ದಾರೆ. ಜನಾಕ್ರೋಶವನ್ನು ಬೇರೆ ಕಡೆ ತಿರುಗಿಸುವ ಉದ್ದೇಶದಿಂದ ಇಂತಹ ಧರ್ಮ-ದೇವರಿಗೆ ಸಂಬಂಧಿಸಿದ ವಿವಾದವನ್ನು ಸೃಷ್ಟಿಸಿ ನನ್ನನ್ನು ಹಿಂದುವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಜ್ಞಾವಂತ ಮತದಾರರಿಗೆ ಈ ಕಳ್ಳಾಟವೆಲ್ಲ ಗೊತ್ತಾಗಿದೆ ಎಂದರು.

ಕೊಡಗು ಜಿಲ್ಲೆ 2019,2020, 2021 ಮತ್ತು ಈ ವರ್ಷ ನಿರಂತರವಾಗಿ ಅತಿವೃಷ್ಟಿಗೆ ಈಡಾಗಿದೆ. ನಮ್ಮ ಸರ್ಕಾರ 750 ಮನೆಗಳನ್ನು ಕಟ್ಟಿಸಿಕೊಟ್ಟಿದ್ದನ್ನು ಬಿಟ್ಟರೆ ಬಿಜೆಪಿ ಸರ್ಕಾರ ಯಾವುದೇ ಹೊಸ ಮನೆ ಕಟ್ಟಿಕೊಟ್ಟಿಲ್ಲ, ಪರಿಹಾರವನ್ನೂ ಸರಿಯಾಗಿ ವಿತರಿಸಿಲ್ಲ, ಕುಸಿದುಬಿದ್ದಿರುವ ಸೇತುವೆ-ರಸ್ತೆಗಳು ದುರಸ್ತಿಯಾಗಿಲ್ಲ ಎಂದು ಕಿಡಿಕಾರಿದರು.

ಮಳೆಯಿಂದ ಮಣ್ಣು ಕುಸಿದ ಜಾಗಗಳಲ್ಲಿ ಸೇತುವೆಯ ಬದಲಿಗೆ ವೆಂಟೆಡ್ ಡ್ಯಾಮ್ ಕಟ್ಟಿದ್ದಾರೆ. ಇದರಿಂದ ಕಸ-ಕಲ್ಲು, ಮರದ ತುಂಡುಗಳು ಹರಿವ ನೀರಿಗೆ ಅಡ್ಡವಾಗಿ, ಮನೆ-ಶಾಲೆಗಳಿಗೆ ನೀರು ನುಗ್ಗಿದೆ. ಕೆಲವು ಸಂತ್ರಸ್ತರಿಗೆ ಬಿಜೆಪಿಯವರು ಹತ್ತು ಸಾವಿರ ರೂಪಾಯಿ ಪರಿಹಾರದ ಚೆಕ್ ಕೊಟ್ಟು ಸುಮ್ಮನಾಗಿದ್ದಾರೆ ಎಂದರು.

ಮಡಿಕೇರಿಯಲ್ಲಿ ಮಿನಿವಿಧಾನಸೌಧ ನಿರ್ಮಿಸಲಾಗಿದ್ದು ಅದಕ್ಕೆ ತಡೆಗೋಡೆ ಕಟ್ಟಿದ್ದಾರೆ. 7.5 ಕೋಟಿ ರೂ. ವೆಚ್ಚದ ಈ ತಡೆಗೋಡೆ ಆಗಲೇ ಬಿದ್ದುಹೋಗಿದೆ. ಸಿಎಂ ಭೇಟಿ ವೇಳೆಯೂ ಅದನ್ನು ಮುಚ್ಚಿಟ್ಟಿದ್ದಾರೆ. ನಾನು ಕೂಡಾ ಅಲ್ಲಿಗೆ ಹೋಗಬಾರದೆಂದು ಶಾಸಕರು ಮತ್ತು ಗುತ್ತಿಗೆದಾರರು ಸೇರಿ ನನ್ನ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಎಂದು ಆರೋಪಿಸಿದರು.

ಅತಿವೃಷ್ಟಿ ಪರಿಹಾರ ಕಾರ್ಯದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪರಿಹಾರ ಕಾಮಗಾರಿಗಳನ್ನು ನೋಡಿದರೆ ವ್ಯಾಪಕವಾಗಿ ಭ್ರಷ್ಟಾಚಾರ ನಡೆದಿರುವುದು ಗೊತ್ತಾಗುತ್ತದೆ. ಕಳೆದ 3 ವರ್ಷಗಳ ಅತಿವೃಷ್ಟಿ ಕಾಮಗಾರಿಯಲ್ಲಿನ ಭ್ರಷ್ಟಾಚಾರದ ಬಗ್ಗೆ ರಾಜ್ಯ ಸರ್ಕಾರ ಸಮಗ್ರವಾಗಿ ತನಿಖೆ ಮಾಡಬೇಕೆಂದು ಒತ್ತಾಯಿಸಿದರು.

ಎಸಿಬಿ ರದ್ದತಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ತೀರ್ಪು ಹೊರಬಿದ್ದ ದಿನವೇ ಎಂದು ಹೇಳಿದ್ದೇವೆ. ನಾವು ತೀರ್ಪಿನ ವಿರುದ್ಧ ಮೇಲ್ಮನವಿ ಹಾಕುವುದಿಲ್ಲ. ತೀರ್ಪಿನ ಜಾರಿಗೆ ಸಂಪೂರ್ಣ ಸಹಕಾರ ಕೊಡುತ್ತೇವೆ ಎಂದು ಹೇಳಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!?