NEWSನಮ್ಮರಾಜ್ಯರಾಜಕೀಯ

ಮುಡಾ, ಕಾಂಗ್ರೆಸ್‌ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ-ಜೆಡಿಎಸ್‌ ಮೈಸೂರು ಚಲೋಗೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಡಾ ಹಗರಣ ಹಾಗೂ ಕಾಂಗ್ರೆಸ್‌ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು ಇಂದು ಬೆಂಗಳೂರಿನ ಮೈಸೂರು ರಸ್ತೆಯ ಕೆಂಗೇರಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಎಚ್.ಡಿ. ಕುಮಾರಸ್ವಾಮಿ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.

ಕೆಂಗೇರಿಯ ನೈಸ್‌ ಜಂಕ್ಷನ್ ಬಳಿ ಇರುವ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಿದರು.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಆಶೋಕ್‌ ಡಾ. ರಾಧಾ ಮೋಹನ್‌ ದಾಸ್ ಅಗರವಾಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ, ಮಾಜಿ ಸಿಎಂಗಳಾದ ಬಸವರಾಜು ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಮೈತ್ರಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಜೆಡಿಸ್ ಹಾಗೂ ಬಿಜೆಪಿ ಜಂಟಿಯಾಗಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯ ಗೀತೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಬಿಡುಗಡೆ ಮಾಡಿದರು.

ಕಾಂಗ್ರೆಸ್‌ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ ಜೆಡಿಎಸ್‌ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಕರ್ನಾಟಕದ ದಿಕ್ಕು ಬದಲಿಸಲಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧದ ಹೋರಾಟ ಇದಾಗಿದೆ. ಕರುನಾಡ ಜನರ ಸುಲಿಗೆ ಮಾಡಿ ರಾಹುಲ್‌ ಗಾಂಧಿ ಅವರಿಗೆ ಕಳುಹಿಸಿ ಕೊಡುತ್ತಿದೆ ಕರ್ನಾಟಕ ಕಾಂಗ್ರೆಸ್ ಎಂದು ಹೇಳಿದರು.

ಪಾದಯಾತ್ರೆ ಎಲ್ಲಿ, ಎಷ್ಟು ದಿನ: ಇಂದಿನಿಂದ ಆಗಸ್ಟ್ 10ರವರೆಗೆ 140 ಕಿಮೀ ಪಾದಯಾತ್ರೆ ಇದಾಗಿದೆ. ಕೆಂಗೇರಿಯಲ್ಲಿ ಉದ್ಘಾಟನೆ, ಮೈಸೂರಿನ ಸಮಾರೋಪ ಕಾರ್ಯಕ್ರಮ ಹೊರತುಪಡಿಸಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬಹಿರಂಗ ಸಭೆಗಳು ನಡೆಯಲಿವೆ.

ಬೆಳಗ್ಗೆ 10 ಕಿ.ಮೀ. ಮಧ್ಯಾಹ್ನ ಊಟದ ನಂತರ 10 ಕೀ.ಮೀನಂತೆ ಪ್ರತಿದಿನ 20 ಕಿ.ಮೀ. ಕ್ರಮಿಸಲು ಯೋಜಿಸಲಾಗಿದೆ. ಆಗಸ್ಟ್​ 10ರಂದು ಬೆಳಗ್ಗೆ 10.30ಕ್ಕೆ ಮೈಸೂರಿನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ.

ವಿಧಾನಸಭೆ ಕ್ಷೇತ್ರವಾರು 200 ಜನರು ಸೇರಿ ಪ್ರತಿದಿನ ಐದಾರು ಸಾವಿರ ಜನರು ಭಾಗಹಿಸಲಿದ್ದಾರೆ. ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ಸೇರಿ ರಾಜ್ಯದ ಎಲ್ಲ ಜಿಲ್ಲೆಗಳ ಮುಖಂಡರು, ಪದಾಧಿಕಾರಿಗಳು ಏಳು ದಿನವೂ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆಯ ಯಶಸ್ಸಿಗೆ 20ರಿಂದ 22 ವಿಭಾಗಗಳನ್ನು ರಚಿಸಲಾಗಿದೆ.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ