NEWSದೇಶ-ವಿದೇಶರಾಜಕೀಯ

ಪಶ್ಚಿಮ ಬಂಗಾಳ: ಪೊಲೀಸರು -ಬಿಜೆಪಿ ಮುಖಂಡರ ನಡುವೆ ಹಿಂಸಾತ್ಮಕ ಘರ್ಷಣೆ

ವಿಜಯಪಥ ಸಮಗ್ರ ಸುದ್ದಿ

ಕೋಲ್ಕತ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಪ್ರತಿಭಟನೆ ವೇಳೆ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಪೊಲೀಸರು ಕಮಲ ಪಕ್ಷದ ಕಾರ್ಯಕರ್ತರಿಂದ ಬಂದೂಕು ವಶಪಡಿಸಿಕೊಂಡಿದ್ದಾರೆ.

ಬಿಜೆಪಿ ಕಾರ್ಯಕರ್ತರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಗುರುವಾರ ಪಶ್ಚಿಮ ಬಂಗಾಳ ಸಚಿವಾಲಯದ ಕಡೆಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಭೇದಿಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ.

ಮೂಲಗಳ ಪ್ರಕಾರ, ಪೊಲೀಸರು ಹೌರಾದ ಸಂತಗಾಚಿಯಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಬಿಜೆಪಿ ಕಾರ್ಯಕರ್ತರ ಮೇಲೆ ಅಶ್ರುವಾಯು, ನೀರಿನ ಫಿರಂಗಿಯನ್ನು ಬಳಸಿದ್ದಾರೆ. ಇದಕ್ಕೆ ಜಗ್ಗದ ಕೇಸರಿ ಬೆಂಬಲಿಗರು ಬಂಗಾಳ ಪೊಲೀಸರೊಂದಿಗೆ ಘರ್ಷಣೆಗಿಳಿದ್ದಾರೆ. ಈ ವೇಳೆ ಪ್ರತಿಭಟನಾಕಾರರಲ್ಲಿ ಒಬ್ಬರಿಂದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜು ಬ್ಯಾನರ್ಜಿ ಮತ್ತು ಸಂಸದ ಜ್ಯೋತಿರ್ಮೊಯ್ ಸಿಂಗ್ ಮಹತೋ ಗಾಯಗೊಂಡಿದ್ದಾರೆ.

ಪ್ರತಿಭಟನೆ ವೇಳೆ ಬಿಜೆಪಿ ಹಲವು ಕಾರ್ಯಕರ್ತರು ಕೊರೊನಾ ನಿಯಮವನ್ನು ಪಾಲಿಸಿಲ್ಲ. ಮಾಸ್ಕ್‌ ಮತ್ತು ಸ್ಯಾನಿಟೈಸರ್‌ ಸಹ ಬಳಸಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ಹಲವರನ್ನು ಪವಶಕ್ಕೆ ಪಡೆದು ನಿಯಮ ಉಲ್ಲಂಘನೆ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.

ಬಿಜೆಪಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ನಾಲ್ಕು ಪ್ರಮುಖ ರ‍್ಯಾಲಿಗಳನ್ನು ಆಯೋಜಿಸಿದ್ದು, ಕೋಲ್ಕತ ಮತ್ತು ಹೌರಾದಿಂದ ತಲಾ ಎರಡು ಪ್ರತಿಭಟನಾ ರ‍್ಯಾಲಿಗಳು ರಾಜ್ಯ ಸಚಿವಾಲಯ ನಬಣ್ಣಾ ಕಡೆಗೆ ಸಾಗಲಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ