NEWSನಮ್ಮರಾಜ್ಯವಿದೇಶ

ಬಿಜೆಪಿ ಸಂಸದ- ಶಾಸಕರ ನಡುವೆ  ಜಗಳ ಕೈಕೈ ಮಿಲಾಯಿಸುವ ಹಂತಕ್ಕೆ

ಒಂದು ಬಾರಿ ಅಧಿಕಾರಿ ಮತ್ತೊಂದು ಬಾರಿ ಶಾಸಕರ ಮಧ್ಯ ಪ್ರವೇಶದಿಂದ ಶಾಂತತೆ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಬಿಜೆಪಿ ಸಂಸದ ಮತ್ತು ಶಾಸಕರು ಏಕವಚನದಲ್ಲೇ ಬೈದಾಡಿಕೊಂಡು ಕೈ ಕೈ ಮಿಲಾಯಿಸುವ ಹಂತ ತಲುಪಿದ ಘಟನೆಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಾಕ್ಷಿಯಾದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

ಸಂಸದ ಸಿದ್ದೇಶ್ವರ್ ಹಾಗೂ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರ ನಡುವೆಯೇ ಜಗಳ ನಡೆದಿರುವುದು.  ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ನೇತೃತ್ವದಲ್ಲಿ ಕೋವಿಡ್-19 ಸೋಂಕಿನ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಸಭೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ   ಪರಿಶೀಲನೆ ನಡೆಸಲಾಗುತ್ತಿತ್ತು.

ಕೊರೊನಾದಿಂದಾಗಿ ಉಂಟಾಗಿರುವ ಲಾಕ್‌ಡೌನ್‌ನಿಂದ ಜನರ ಬಳಿ ಹಣ ಇರುವುದಿಲ್ಲ. ಆದ್ದರಿಂದ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಐದು ರೂಪಾಯಿ ಪಡೆಯುವ ಬದಲು ಉಚಿತವಾಗಿ ಇಲ್ಲವೆ ಎರಡು ರೂಪಾಯಿಗೆ ನೀಡಿ ಎಂದು ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ  ಸಲಹೆ ನೀಡುತ್ತಿದ್ದರು. ಈ ವೇಳೆ ಮಧ್ಯೆ ಮಾತುನಾಡಿದ  ಸಂಸದ ಜಿ.ಎಂ. ಸಿದ್ದೇಶ್ವರ್ ಎಲ್ಲವನ್ನು ಪುಕ್ಕಟೆಯಾಗಿ ಕೊಡುವುದಕ್ಕೆ ಆಗುವುದಿಲ್ಲ ಎಂದು ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

ಇದರಿಂದ ಸಿಟ್ಟುಗೊಂಡ ವಿರುಪಾಕ್ಷಪ್ಪ ಸುಮ್ಮನೆ ಕೊತ್ಕೋಳಯ್ಯ ಎಂದು ಹೇಳಿದರು. ಆ ಮಾತು ಕೇಳಿ ಕುರ್ಚಿಯಿಂದ ಎದ್ದು ಬಂದ ಸಿದ್ದೇಶ್ವರ್ ಏನೋನಿಂದು ಎಂದು ಏಕವಚದಲ್ಲಿಯೇ ಕೇಳಿದರು. ಇದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು.  ಈ ವೇಳೆ ಎಸ್‍ಪಿ ಹನುಮಂತರಾಯ ಮಧ್ಯ ಪ್ರವೇಶಿಸಿದ್ದರಿಂದ ಇಬ್ಬರು ಸಮಾಧಾನಗೊಂಡರು. ಇಷ್ಟೆಲ್ಲ ನಡೆದರೂ ಮುಖಪ್ರೇಕ್ಷರಾಗಿಯೇ   ಸಚಿವರು ನೋಡುತ್ತಾ ಕುಳಿತ್ತಿದ್ದರು.

ಇನ್ನು ಸಭೆ ಮುಗಿದ ಬಳಿಕ ಹೊರ ಬರುತ್ತಿದ್ದಾಗ ಕೂಡ ಈ ಇಬ್ಬರು ಕಿತ್ತಾಡಿಕೊಂಡಿದ್ದಾರೆ.  ಒಬ್ಬರಿಗೊಬ್ಬರು ಸವಾಲ್ ಹಾಕುತ್ತ ನಿಂದಿಸಿಕೊಂಡಿದ್ದಾರೆ.  ಈ ವೇಳೆ ಶಾಸಕರಾದ ಎಂಪಿ ರೇಣುಕಾಚಾರ್ಯ, ಎಸ್‍ವಿ ರಾಮಚಂದ್ರಪ್ಪ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಮೂಲಕ ಇಬ್ಬರನ್ನು ಸಮಾಧಾನ ಪಡಿಸಿ ಜತೆಯಲ್ಲೇ ಕರೆದೊಯ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

1 Comment

Leave a Reply

error: Content is protected !!
LATEST
ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್​ ಪಾರ್ಟಿ: ನಟಿಯರು ಸೇರಿ 80ಕ್ಕೂ ಹೆಚ್ಚು ಬಂಧನ KSRTC: ಹೆದ್ದಾರಿಯಲ್ಲಿ ಕೆಟ್ಟುನಿಂತ ಬಸ್‌ಗಳು - ಕಿಮೀ ವರೆಗೆ ಟ್ರಾಫಿಕ್ ಜಾಮ್ KSRTC: ₹185 ಟಿಕೆಟ್‌ ಕೊಟ್ಟು ₹200 ಕೇಳಿದ ಕಂಡಕ್ಟರ್‌ - ದೂರು ಕೊಟ್ಟ ಪ್ರಯಾಣಿಕ ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು ಪತ್ನಿ, ಮಗನಿಗೆ ಮಾಸಿಕ ಜೀವನಾಂಶ ಪಾವತಿಸದ ಪತಿ ಆಸ್ತಿ ಮುಟ್ಟುಗೋಲು: ಹೈಕೋರ್ಟ್ ಮಹತ್ವದ ಆದೇಶ ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಕಾರು ನಜ್ಜುಗುಜ್ಜು - ಪ್ರಯಾಣಿಕರು ಸೇಫ್ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:‌ ಶೇ.25.5 ವೇತನ ಹೆಚ್ಚಳ ಬಹುತೇಕ ಖಚಿತ