NEWSದೇಶ-ವಿದೇಶರಾಜಕೀಯ

ಜೈಲಲ್ಲೇ ದೆಹಲಿ ಸಿಎಂ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು: ಸಚಿವೆ ಅತಿಶಿ ಗಂಭೀರ ಆರೋಪ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿ ಹತ್ಯೆ ಮಾಡಲು ಭಾರತೀಯ ಜನತಾ ಪಕ್ಷ (BJP) ಸಂಚು ರೂಪಿಸಿದೆ ಎಂದು ಎಎಪಿ ಸಚಿವೆ ಅತಿಶಿ ಗಂಭೀರ ಆರೋಪ ಮಾಡಿದ್ದಾರೆ.

ನ್ಯಾಯಾಲಯದ ಮುಂದೆ ಇಡಿ ಅಧಿಕಾರಿಗಳು ಕೇಜ್ರಿವಾಲ್ ಉದ್ದೇಶಪೂರ್ವಕವಾಗಿ ಸಕ್ಕರೆ ಪ್ರಮಾಣವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ ಬಳಿಕ ಅತಿಶಿ ಈ ಆರೋಪ ಮಾಡಿದ್ದಾರೆ. ಕೇಜ್ರಿವಾಲ್ ಟೈಪ್ 2 ಡಯಾಬಿಟಿಸ್ ರೋಗಿಯಾಗಿದ್ದಾರೆ. ಪದೇಪದೆ ಮನವಿ ಮಾಡಿದರೂ ಅವರಿಗೆ ಇನ್ಸುಲಿನ್ ನೀಡುತ್ತಿಲ್ಲ. ವೈದ್ಯರೊಂದಿಗೆ ವಿಡಿಯೋ ಸಮಾಲೋಚನೆಗೆ ಮಾಡಲಾದ ವಿನಂತಿಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.

ಚುನಾವಣೆಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಲು ಬಿಜೆಪಿಗೆ ಸಾಧ್ಯವಾಗಿಲ್ಲ. ಇದೇ ಕಾರಣಕ್ಕೆ ಅವರನ್ನು ಜೈಲಿನಲ್ಲಿಟ್ಟು ಕೊಲ್ಲಲು ಯೋಜನೆ ರೂಪಿಸಲಾಗುತ್ತಿದೆ. ಕೇಜ್ರಿವಾಲ್ ಅವರು ತೀವ್ರ ಮಧುಮೇಹದಿಂದ ಬಳಲುತ್ತಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ. ಅವರು ಕಳೆದ 30 ವರ್ಷಗಳಿಂದ ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಅವರು ಪ್ರತಿದಿನ 54 ಯೂನಿಟ್ ಇನ್ಸುಲಿನ್ ತೆಗೆದುಕೊಳ್ಳುತ್ತಾರೆ ಎಂದರು.

ಯಾವುದೇ ವೈದ್ಯರಲ್ಲಿ ಕೇಳಿ, ಅಂತಹ ತೀವ್ರ ಮಧುಮೇಹ ಇರುವವರು ಮಾತ್ರ ಇಷ್ಟು ಇನ್ಸುಲಿನ್ ತೆಗೆದುಕೊಳ್ಳುತ್ತಾರೆ. ಅದಕ್ಕಾಗಿಯೇ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಅವರಿಗೆ ಮನೆಯಲ್ಲಿ ಬೇಯಿಸಿದ ಆಹಾರ ಮತ್ತು ವೈದ್ಯರು ಹೇಳಿದ ಆಹಾರವನ್ನು ತಿನ್ನಲು ಸೂಚಿಸಿದೆ ಎಂದರು.

ಇಂದು ಭಾರತೀಯ ಜನತಾ ಪಕ್ಷವು ತನ್ನ ಅಂಗಸಂಸ್ಥೆ ಇಡಿ ಮೂಲಕ ಕೇಜ್ರಿವಾಲ್ ಆರೋಗ್ಯವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ. ಇಂದು ಇಡಿ ಪದೇಪದೆ ಸುಳ್ಳು ಹೇಳುತ್ತಿದೆ ಎಂದು ಇಡಿಯ ವಾದಗಳಿಗೆ ಅವರು ತಿರುಗೇಟು ನೀಡಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!? ಪಿರಿಯಾಪಟ್ಟಣ: ಲಂಚ ಸ್ವೀಕಾರ- ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಬಿದ್ದ ಗುಮಾಸ್ತ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ