NEWSದೇಶ-ವಿದೇಶರಾಜಕೀಯ

ತೆಲಂಗಾಣದಲ್ಲಿ ಬಿಜೆಪಿಯ 4 ಟೈರ್ ಪಂಕ್ಚರ್ : ರಾಹುಲ್​ ಗಾಂಧಿ

ವಿಜಯಪಥ ಸಮಗ್ರ ಸುದ್ದಿ

ಹೈದರಾಬಾದ್: ಪ್ರಧಾನಿ ಮೋದಿಯವರ ರಿಮೋಟ್​ ಕಂಟ್ರೋಲ್​ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್ ಕೆಲಸ ಮಾಡುತ್ತಿದ್ದಾರೆ. ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷವು ಬಿಜೆಪಿಯ ಬಿ-ಟೀಮ್​ ಎಂದು ರಾಹುಲ್​ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ತೆಲಂಗಾಣದ ಕಮ್ಮಮ್​ ನಗರದಲ್ಲಿ ನಡೆದ ಕಾಂಗ್ರೆಸ್​ನ ಜನ ಘರ್ಜನ ಬೃಹತ್​ ಸಮಾವೇಶದಲ್ಲಿ ಮಾತನಾಡಿದರು. ಇದಕ್ಕೂ ಮುನ್ನ ಕರ್ನಾಟಕದಂತೆ ತೆಲಂಗಾಣದಲ್ಲೂ ಕಾಂಗ್ರೆಸ್​ನ ಗ್ಯಾರಂಟಿಗಳನ್ನು ಘೋಷಣೆ ಮಾಡಿದರು.

ಆ ಬಳಿಕ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ, ತಮ್ಮ ಮಾತಿನುದ್ದಕ್ಕೂ ಸಿಎಂ ಕೆಸಿಆರ್​ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆ​ ಫಲಿತಾಂಶವು ತೆಲಂಗಾಣದಲ್ಲಿ ಮರುಕಳಿಸಲಿದೆ. ಇಲ್ಲಿ ಬಿಜೆಪಿಯ 4 ಟೈರ್ ಪಂಕ್ಚರ್ ಆಗಿವೆ. ನೆರೆಯ ರಾಜ್ಯದಲ್ಲಿ ಆಗಿರುವುದೇ ಇಲ್ಲೂ ಆಗಲಿದೆ ಎಂದು ಭವಿಷ್ಯ ನುಡಿದರು.

ಇನ್ನು ಸಿಎಂ ಕೆಸಿಆರ್​ ಭ್ರಷ್ಟಾಚಾರ ಮಾಡುವಂತಹ ಯಾವ ಅವಕಾಶ ಬಿಟ್ಟಿಲ್ಲ. ಸಂಪೂರ್ಣವಾಗಿ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಜರಿದರು.

ಬಿಆರ್​ಎಸ್ ಪಕ್ಷ ಅಂದರೇ ಬಿಜೆಪಿಯ ‘ರಿಸ್ತೇದಾರ್ ಸಮಿತಿ’. ಇಂತಹ ಬಿ- ಟೀಮ್​ ಜತೆ ಕಾಂಗ್ರೆಸ್​ ಮೈತ್ರಿ ಮಾಡಿಕೊಳ್ಳಲು ಸಿದ್ಧವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್, ಬಿಜೆಪಿಯನ್ನು ಸೋಲಿಸಿದಂತೆ ತೆಲಂಗಾಣದಲ್ಲೂ ಬಿಜೆಪಿಯ ಬಿ- ಟೀಮ್ ಸೋಲಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದರು.

ಇನ್ನು ಇದೇ ವೇಳೆ ತೆಲಂಗಾಣದ ಕಾಂಗ್ರೆಸ್​ ನಾಯಕರು, ರಾಹುಲ್​ ಗಾಂಧಿ ಸೇರಿ ಹಿರಿಯ ನಾಗರಿಕರು, ವಿಧವಾ ಮಹಿಳೆಯರಿಗೆ ಪ್ರತಿ ತಿಂಗಳು 4 ಸಾವಿರ ರೂಪಾಯಿ, ಪೋಟು ಜಮೀನು ಅನ್ನು ಆದಿವಾಸಿಗಳಿಗೆ‌ ನೀಡುವ ಗ್ಯಾರಂಟಿಗಳನ್ನು ಘೋಷಿಸಿದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ