NEWSನಮ್ಮರಾಜ್ಯ

ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ

ಅಂಚೆ ಮತಗಳ ಮರು ಎಣಿಕೆ ವೇಳೆ 52 ಮತಗಳಿಂದ ಜೀವರಾಜ್​ ಗೆಲುವು ಸಾಧಿಸಿದ್ದು, ಆ ಮೂಲಕ ಚಿಕ್ಕಮಗಳೂರು ಜಿಲ್ಲೆಯ 5 ಕ್ಷೇತ್ರಗಳ ಪೈಕಿ ಒಂದೀಗ ಬಿಜೆಪಿ ತೆಕ್ಕೆಗೆ ಬಂದಂತಾಗಿದೆ.

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಭಾರಿ ಕುತೂಹಲ ಮೂಡಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಬಿ ಗೆಲುವು ಸಾಧಿಸಿದ್ದು, ಡಿ.ಎನ್. ಜೀವರಾಜ್ ಚುನಾವಣಾ ಅಧಿಕಾರಿಗಳಿಂದ ಅಂತಿಮವಾಗಿ ಪ್ರಮಾಣಪತ್ರ ಸ್ವೀಕರಿಸಿದ್ದಾರೆ. ಇನ್ನು ಈ ಮೂಲಕ ಮರು ಮತ ಎಣಿಕೆಯಲ್ಲಿಯೂ ಗೆಲುವಿನ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್​​ನ ಟಿ.ಡಿ. ರಾಜೇಗೌಡಗೆ ಸೋಲಾಗಿದೆ.

ಅಂಚೆ ಮತಗಳ ಮರು ಎಣಿಕೆ ವೇಳೆ 52 ಮತಗಳಿಂದ ಜೀವರಾಜ್​ ಗೆಲುವು ಸಾಧಿಸಿದ್ದು, ಆ ಮೂಲಕ ಚಿಕ್ಕಮಗಳೂರು ಜಿಲ್ಲೆಯ 5 ಕ್ಷೇತ್ರಗಳ ಪೈಕಿ ಒಂದೀಗ ಬಿಜೆಪಿ ತೆಕ್ಕೆಗೆ ಬಂದಂತಾಗಿದೆ.

ಪಟ್ಟು ಹಿಡಿದು ಪ್ರಮಾಣಪತ್ರ ಪಡೆದ ಜೀವರಾಜ್:
ಇನ್ನು ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ನಿನ್ನೆ ಚುನಾವಣಾ ಆಯೋಗದಿಂದ ಮೇಲ್ ಮೂಲಕ ಮಾಹಿತಿ ನೀಡಲಾಗಿತ್ತು. ಮಾಹಿತಿ ಬಂದ ಬೆನ್ನಲ್ಲೇ ನಗರದ ಬೇಲೂರು ರಸ್ತೆಯಲ್ಲಿರುವ ಚುನಾವಣಾಧಿಕಾರಿ ನಿವಾಸಕ್ಕೆ ಡಿ.ಎನ್. ಜೀವರಾಜ್ ಬಂದಿದ್ದು, ಶಾಸಕ ಸ್ಥಾನದ ಪ್ರಮಾಣಪತ್ರ ನೀಡುವಂತೆ ಕೇಳಿದ್ದಾರೆ. ಈ ವೇಳೆ ಕಚೇರಿಯಲ್ಲಿ ನೀಡೋದಾಗಿ ಚುನಾವಣಾಧಿಕಾರಿ ಹೇಳಿದರೂ, ಇಲ್ಲ ನಾನು ಬಂದಿದ್ದೇನೆ ಪ್ರಮಾಣ ಪತ್ರ ನೀಡಿ ಎಂದು ಹೇಳಿ ಕೊನೆಗೂ ಅದನ್ನು ಪಡೆದಿದ್ದಾರೆ ಎನ್ನಲಾಗಿದೆ.

2023ರ ವಿಧಾನಸಭಾ ಚುನಾವಣೆ ಶೃಂಗೇರಿ ಕ್ಷೇತ್ರದ ಫಲಿತಾಂಶ ಭಾರಿ ಕುತೂಹಲ ಮೂಡಿಸಿತ್ತು. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಕಾಂಗ್ರೆಸ್​​ನ ಟಿ.ಡಿ. ರಾಜೇಗೌಡ ಅವರ ವಿರುದ್ಧ ಕೇವಲ 201 ಮತಗಳ ಅಂತರದಲ್ಲಿ ಸೋತಿದ್ದರು. ಚಲಾವಣೆಯಾಗಿದ್ದ ಒಟ್ಟು 1,822 ಅಂಚೆ ಮತಗಳ ಪೈಕಿ 279 ಮತಗಳು ತಿರಸ್ಕೃತಗೊಂಡಿದ್ದವು.

ಹೀಗಾಗಿ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಜೀವರಾಜ್, ಮರು ಎಣಿಕೆಗೆ ಮನವಿ ಮಾಡಿದ್ದರು. ಆದರೆ ಅಂದಿನ ಜಿಲ್ಲಾ ಚುನಾವಣಾಧಿಕಾರಿಗಳು ಮನವಿಯನ್ನು ಪರಿಗಣಿಸದೆ ರಾಜೇಗೌಡ ಅವರನ್ನು ವಿಜೇತರೆಂದು ಘೋಷಿಸಿದ್ದರು. ಇದನ್ನು ಪ್ರಶ್ನಿಸಿ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಅಂಚೆ ಮತಗಳ ಮರು ಎಣಿಕೆಗೆ ಆದೇಶ ಹೊರಡಿಸಿತ್ತು.

ಈಗ ನ್ಯಾಯಾಲಯದ ಆದೇಶ ಮೇರೆಗೆ ಮರು ಮತ ಎಣಿಕೆ ನಡೆದಿದ್ದು ಅದರಲ್ಲಿ ಜೀವರಾಜ್ ಅವರು ಗೆಲುವು ಸಾಧಿಸಿದ್ದಾರೆ. ಹೀಗಾಗಿ ಅವರನ್ನು ಅಧಿಕೃತವಾಗಿ ಶಾಸಕರಾಗಿ ಗೆದ್ದು ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!