NEWSನಮ್ಮಜಿಲ್ಲೆಬೆಂಗಳೂರು

BMTC ವಜ್ರ ಬಸ್‌ಗಳಲ್ಲಿ ಅಂಧರ ಪಾಸ್‌ಗಳು ಮಾನ್ಯ: ಸಿಟಿಎಂ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಜ್ರ  ಬಸ್‌ಗಳಲ್ಲಿ ಇನ್ನು ಮುಂದೆ ದೃಷ್ಟಿದೋಷವುಳ್ಳವರು (ಅಂಧ) ಅಂಧರ ಪಾಸಿನೊಂದಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಇದೇ ಏ.24ರಂದು ಆದೇಶ ಹೊರಡಿಸಿದ್ದು, ಈ ಆದೇಶ ಪೂರ್ಣ ಅಂಧರಾಗಿದ್ದು(Total blindness) ಅಂಧರ ಉಚಿತ ಪಾಸು ಪಡೆದಿರುವ ಪಾಸುದಾರರರಿಗೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಹೀಗಾಗಿ ಸಂಸ್ಥೆಯ ಸಾಮಾನ್ಯ ಮತ್ತು ವಜ್ರ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಮುಂದುವರಿದು, ಸಂಸ್ಥೆಯ ಸೇವೆಗಳಲ್ಲಿ ವಿಕಲಚೇತನರಿಗೆ ಆಸನಗಳನ್ನು ಮೀಸಲಿರಿಸಿದೆ ಎಂದೂ ತಿಳಿಸಿದ್ದಾರೆ.

ಸಾಮಾನ್ಯ ಸೇವೆಗಳಲ್ಲಿ ವಾಹನದ ಮುಂಬಾಗಿಲಿನ ಕಿಟಕಿಯ ಎಡಭಾಗದ ಒಂದು ಅಸನವನ್ನು ಹಾಗೂ ಹಿಂಭಾಗದ/ ಮಧ್ಯದ ಬಾಗಿಲಿನ ಹಿಂಬಾಗಿಲಿನ ಕಿಟಕಿಯ ಪಕ್ಕದ ಒಂದು ಆಸನವನ್ನು ಮೀಸಲಿರಿಸಲಾಗಿದೆ.

ಅದರಂತೆ ವಜ್ರ ವಾಹನಗಳಲ್ಲಿ ಮಧ್ಯದ ಬಾಗಿಲಿನ ಎದುರಿಗಿರುವ (ಮಡಿಚುವಂತಹ) ಎರಡು ಅಸನಗಳನ್ನು (ಸುಲಭವಾಗಿ ಹತ್ತಿ ಇಳಿಯಲು ಅನುಕೂಲವಾಗುವಂತೆ) ವಿಕಲಚೇತನರಿಗೆ ಮೀಸಲಿರಿಸಲಾಗಿದ್ದು ಈ ಸಂಬಂಧ ನಿಗಮದ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಮ್ಮ ಎಲ್ಲ ಚಾಲನಾ ಸಿಬ್ಬಂದಿಗಳಿಗೂ ಸೂಕ್ತ ತಿಳಿವಳಿಕೆ ನೀಡುವುದರ ಜತೆಗೆ ಸೂಚನಾ ಫಲಕದಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಅಲ್ಲದೆ ಎಲ್ಲ ವಲಯದ ವಿಭಾಗೀಯ ಸಂಚಾರ ಅಧಿಕಾರಿಗಳು, ಎಲ್ಲ ಹಿರಿಯ/ ಘಟಕ ವ್ಯವಸ್ಥಾಪಕರು ಕೂಡ ಚಾಲನಾ ಸಿಬ್ಬಂದಿಗಳಿಗೆ ಈ ವಿಷಯದ ಬಗ್ಗೆ ಮಾಹಿತಿ ಒದಗಿಸುವುದು ಹಾಗೂ ಸಾರ್ವಜನಿಕ ಪ್ರಯಾಣಿಕರೊಂದಿಗೆ ವಿಶೇಷವಾಗಿ ಅಂಧರು, ವಿಕಲಚೇತನರು ಮತ್ತು ವಿದ್ಯಾರ್ಥಿಗಳೊಂದಿಗೆ ಸೌಜನ್ಯಯುತವಾಗಿ ವರ್ತಿಸಲು ತಿಳಿವಳಿಕೆ ನೀಡಬೇಕು ಎಂದು ಆದೇಶ ಹೊರಡಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ