NEWSದೇಶ-ವಿದೇಶನಮ್ಮರಾಜ್ಯ

ಐಟಿ ಇಲಾಖೆ ನಡೆಗೆ ತಡೆ : ಕಾಂಗ್ರೆಸ್‌ಗೆ ಸುಪ್ರೀಂಕೋರ್ಟ್‌ನಿಂದ ಬಿಗ್‌ ರಿಲೀಫ್

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸುಪ್ರೀಂಕೋರ್ಟ್‌ನಿಂದ ಬಿಗ್‌ ರಿಲೀಫ್ ಸಿಕ್ಕಿದೆ. ಆದಾಯ ತೆರಿಗೆ ಇಲಾಖೆ ನೀಡಿರುವ ನೋಟಿಸ್‌ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ.

ಲೋಕಸಭಾ ಎಲೆಕ್ಷನ್ ವೇಳೆ ಬಾಕಿ ಇರುವ ಕೋಟ್ಯಂತರ ರೂಪಾಯಿ ತೆರಿಗೆ ಪಾವತಿಸಲು ಐಟಿ ಇಲಾಖೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಕೂಲ ಕ್ರಮ ಕೈಗೊಳ್ಳಬಾರದು ಎಂದು ಹೇಳಿದೆ.

ಸುಪ್ರೀಂಕೋರ್ಟ್‌ನ ಈ ಮಹತ್ವದ ಸೂಚನೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 3,500 ಕೋಟಿ ರೂ. ವಸೂಲಿಗೆ ಯತ್ನಿಸಲ್ಲ ಎಂದು ಐ.ಟಿ. ಅಧಿಕಾರಿಗಳು ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ಐಟಿ ನೋಟಿಸ್ ಸಂಬಂಧ ಮತ್ತೆ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ತೀರ್ಮಾನಿಸಿದ್ದು, ಜೂನ್ 4 ರಂದು ಲೋಕಸಭಾ ಚುನಾವಣೆಯ ರಿಸಲ್ಟ್‌ ಹೊರ ಬೀಳಲಿದೆ. ಹೀಗಾಗಿ ಜೂನ್ 24ರಂದು ಐ.ಟಿ. ನೋಟಿಸ್ ವಿರುದ್ಧ ಕಾಂಗ್ರೆಸ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಪೀಠ ಹೇಳಿದೆ.

ಸುಪ್ರೀಂಕೋರ್ಟ್‌ ವಿಚಾರಣೆ ವೇಳೆ ಕಾಂಗ್ರೆಸ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಿದರು. ನಮ್ಮದು ಆದಾಯ ಗಳಿಸುವ ಸಂಘಟನೆಯಲ್ಲ. ಬರೀ ರಾಜಕೀಯ ಪಕ್ಷ ಮಾತ್ರ. ಈಗಾಗಲೇ ಬ್ಯಾಂಕ್ ಖಾತೆ ಜಪ್ತಿ ಮಾಡಿ 135 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ ಎಂದಿದ್ದಾರೆ. ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ನೇತೃತ್ವದ ಪೀಠದಲ್ಲಿ ಕಾಂಗ್ರೆಸ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಯಿತು.

ಐಟಿ ವಾದವೇನು?: ಸುಪ್ರೀಂಕೋರ್ಟ್‌ನಲ್ಲಿ ಐ.ಟಿ ಇಲಾಖೆಯ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದ್ದರು.

ಈ ಕಾಂಗ್ರೆಸ್ ಪಕ್ಷದಿಂದ 3,500 ಕೋಟಿ ರೂ ಆದಾಯ ತೆರಿಗೆ ಪಾವತಿಗೆ ಬೇಡಿಕೆ ಇದೆ. ಮೆರಿಟ್ ಮೇಲೆ ಬಹಳಷ್ಟನ್ನು ಹೇಳಬೇಕಾಗಿದೆ. ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ ಹಣ ವಸೂಲಿಗೆ ಕ್ರಮ ಕೈಗೊಳ್ಳಲ್ಲ ಎಂದರು.

ಇನ್ನು ಜೂನ್ 2ನೇ ವಾರದಲ್ಲಿ ಅರ್ಜಿ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು. ಹೀಗಾಗಿ ಸುಪ್ರೀಂಕೋರ್ಟ್ ಜೂನ್ 24 ರಂದು ಅರ್ಜಿ ವಿಚಾರಣೆಗೆ ನಡೆಸಲು ದಿನಾಂಕ ನಿಗದಿಪಡಿ ವಿಚಾರಣೆಯನ್ನು ಮುಂದೂಡಿದತು.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ