ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವೋಲ್ವೋ ಬಸ್ ಪಲ್ಟಿಯಾಗಿರುವ ಘಟನೆ ಪ್ಯಾಲೇಸ್ ಗುಟ್ಟಹಳ್ಳಿ ಫ್ಲೈಓವರ್ ಬಳಿ ನಡೆದಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಚ್‍ಎಸ್‍ಆರ್ ಲೇಔಟ್ ಕಡೆ ಬಿಎಂಟಿಸಿ ವೋಲ್ವೋ ಬಸ್ (KA 57 f 0237) ಬರುತ್ತಿತ್ತು. ಈ ವೇಳೆ ಪ್ಯಾಲೇಸ್ ಗುಟ್ಟಹಳ್ಳಿ ಫ್ಲೈಓವರ್ ಹತ್ತುವಾಗ ಚಾಲಕನಿಗೆ ತಲೆ ಸುತ್ತು ಬಂದ ಕಾರಣ ಬಸ್ ನಿಯಂತ್ರಣ ಕಳೆದು ಕೊಂಡು ಪಲ್ಟಿಯಾಗಿದೆ.
ಚಾಲಕ ತಲೆಸುತ್ತು ಬರುತ್ತಿದ್ದಂತೆ ಬಸ್ಅನ್ನು ಸೈಡ್‌ನಲ್ಲಿ ನಿಲ್ಲಿಸಲು ಪ್ರಯತ್ನ ಪಟ್ಟಿದ್ದಾರೆ, ಆದರೆ ಅಷ್ಟರಲ್ಲೇ ನಿಯಂತ್ರಣ ಕಳೆದು ಕೊಂಡ ಬಸ್ ಡಿವೈಡರ್‌ಗೆ ಡಿಕ್ಕೆ ಹೊಡೆದು ಪಲ್ಟಿಯಾಗಿದೆ. ಅವಘಡದ ವೇಳೆ ಚಾಲಕ ನಿರ್ವಾಹಕ ಸೇರಿ 13 ಮಂದಿ ಬಸ್‌ನಲ್ಲಿದ್ದರು. ಘಟನೆಯಿಂದ ಬಸ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಾಲಕನ ತಲೆಗೆ ಪೆಟ್ಟು ಬಿದ್ದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸದಾಶಿವನಗರ ಟ್ರಾಫಿಕ್ ಪೊಲೀಸರು ಘಟನೆಯಿಂದಾಗಿ ಪ್ಯಾಲೇಸ್ ರೋಡ್‌ನಲ್ಲಿ ಉಂಟಾಗಿದ್ದ ಟ್ರಾಫಿಕ್ ಜಾಮ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
![](https://vijayapatha.in/wp-content/uploads/2024/02/QR-Code-VP-1-1-300x62.png)