CrimeNEWSನಮ್ಮಜಿಲ್ಲೆ

BMTC: ಹಿಂದಿನಿಂದ ಬಸ್‌ಗೆ ಡಿಕ್ಕಿ ಹೊಡೆದ ಕಾರು ಕ್ಷಣಾರ್ಧದಲ್ಲಿ ಭಸ್ಮ- ಸಮಯ ಪ್ರಜ್ಞೆ ಮೆರೆದ ಚಾಲಕ- ತಪ್ಪಿದ ಭಾರಿ ಅನಾಹುತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿಂತಿದ್ದ ಬೆಂಗಳೂರು ಮಹಾನಗರ ಸಾರಿಗೆ ಬಸ್‌ಗೆ ಅತಿವೇಗವಾಗಿ ಬಂದ ಕಾರೊಂದು ಹಿಂದಿನಿಂದ ಡಿಕ್ಕಿಹೊಡೆದು ಹೊತ್ತಿ ಉರಿದ ಘಟನೆ ನಾಯಂಡನಹಳ್ಳಿ ಬಳಿ ಜರುಗಿದೆ.

ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು, ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರಿನಲ್ಲಿ ಕ್ಷಣರ್ಧದಲ್ಲೇ ಬೆಂಕಿಕಾಣಿಸಿಕೊಂಡು  ಸಂಪೂರಣವಾಗಿ ಸುಟ್ಟು ಕರಕಲಾಗಿದೆ.

ಇನ್ನು ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಇನ್ನು  ಕಾರು ಸಂಪೂರ್ಣ ಸುಟ್ಟು ಹೋಗಿದ್ದೆದರೆ, ಬಸ್​ನ ಹಿಂದಿನ ಭಾಗ ಸ್ವಲ್ಪ ಬೆಂಕಿಗಾಹುತಿಯಾಗಿದೆ. ವೇಗವಾಗಿ ಕಾರ್ ಬಂದು ಡಿಕ್ಕಿ ಹೊಡೆದ ಹಿನ್ನೆಲೆ ಕಾರು ಚಾಲಕನಿಗೆ ಮೂಗಿನ ಬಳಿ ಸಣ್ಣಪುಟ್ಟ ಗಾಯಗಳಾಗಿವೆ. ಉಳಿದಂತೆ ಬಸ್ ನಲ್ಲಿದ್ದ ಪ್ರಯಾಣಿಕರು ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಯಶವಂತಪುರ – ಬನಶಂಕರಿ ಮಾರ್ಗದಲ್ಲಿ ಸಂಚರಿಸುವ ಡಿಪೋ 26ರ ಮಾರ್ಗದ 401NY ಬಸ್​ ಸಂಖ್ಯೆ F4968ರ ಬಸ್ ಇದಾಗಿದ್ದು ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ. ಚಾಲಕ ಗೌರೀಶ್​ ಬಿ, ನಿರ್ವಾಹಕ ಗಿರಿಧರ್​​ ಇಬ್ಬರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಚಂದ್ರಲೇಔಟ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಲು ಹಾಗೂ ಹತ್ತಿಸಲು ನಿಲ್ಲಿಸಿದ್ದ ವೇಳೆ ಕಾರು​ ವೇಗವಾಗಿ ಬಂದು ಬಸ್​​ಗೆ ಗುದ್ದಿದೆ.

ಬಿಎಂಟಿಸಿ ಚಾಲಕ ಮಾಡಿದ ಆ ಕೆಲಸಕ್ಕೆ ಎಲ್ಲರ ಮೆಚ್ಚುಗೆ: ಇನ್ನು ಬಿಎಂಟಿಸಿ ಬಸ್​ ಚಾಲಕ ಪ್ರಯಾಣಿಕರ ರಕ್ಷಣೆ ಮಾಡುವುದರ ಜತೆಗೆ ಬಿಎಂಟಿಸಿ ಬಸ್ ರಕ್ಷಣೆ ಸಹ ಮಾಡಿದ್ದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಬೆಂಕಿ ಹೊತ್ತಿದ್ದ ಕಾರು ಹಾಗೂ ಬಸ್​ ಪರಸ್ಪರ ಸಿಕ್ಕಿ ಹಾಕಿಕೊಂಡಿದ್ದು ಅದನ್ನು ಬಿಡಿಸಲು ಬಸ್ ಚಾಲಕ ಪ್ರಯತ್ನ ಮಾಡಿದ್ದಾರೆ.

ನೂರು ಮೀಟರ್ ಬಸ್ ಚಲಾಯಿಸಿ ಕಾರ್​ನಿಂದ ಬಸ್ ಕಾಪಾಡಿದ್ದಾರೆ. ಹೀಗಾಗಿ ಬಸ್​ ಬೆಂಕಿಗಾಹುತಿಯಾಗುವುದು ತಪ್ಪಿದೆ. ಇಲ್ಲವಾದಲ್ಲಿ ನಡುರಸ್ತೆಯಲ್ಲಿ ಬಿಎಂಟಿಸಿ ಬಸ್ ಕೂಡ ಸುಟ್ಟು ಭಸ್ಮವಾಗುತ್ತಿತ್ತು. ಹೊತ್ತಿ ಉರಿಯುತ್ತಿರುವ ಬೆಂಕಿಯ ನಡುವೆಯೂ ಬಸ್ ಏರಿ ಬಸ್ ಚಲಾಯಿಸಿದ್ದಾರೆ. ಸತತ ಒಂದೂವರೆ ನಿಮಿಷಗಳ ಹರಸಾಹಸದ ಬಳಿಕ ಡಿವೈಡರ್ ಹಾರಿಸಿ ಮತ್ತೊಂದು ರಸ್ತೆಗೆ ಚಲಾಯಿಸುವ ಮುಖಾಂತರ ಬಸ್‌ಅನ್ನು ಕಾರಿನಿಂದ ಬಿಡಿಸುವಲ್ಲಿ ಚಾಲಕ ಗೌರೀಶ್  ಯಶಸ್ವಿಯಾಗಿದ್ದಾರೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ