NEWSನಮ್ಮಜಿಲ್ಲೆನಮ್ಮರಾಜ್ಯ

bmtc: ಕರ್ತವ್ಯಕ್ಕೆ ನಿಯೋಜಿಸುವ 48ಗಂಟೆ ಮುಂಚಿತವಾಗಿ ಚಾಲನಾ ಸಿಬ್ಬಂದಿಗಳ ಸಹಿ ಪಡೆಯದಿದ್ರೆ ಕ್ರಮ – ಡಿಎಂಗಳಿಗೆ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈ ಹಿಂದೆ ರೂಢಿಯಲ್ಲಿದ್ದಂತೆ ಚಾಲನಾ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸುವ 48 ಗಂಟೆಗಳ ಮುಂಚಿತವಾಗಿ ಡ್ಯೂಟಿರೂಟ ಪ್ರಕಾರ ಸಹಿ ಪಡೆಯುವುದು ಕಡ್ಡಾಯವಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಲ್ಲ ಘಟಕದ ಅಧಿಕಾರಿಗಳು ಇದನ್ನು ತಪ್ಪದೇ ಪಾಲಿಸಬೇಕು ಎಂದು ಮೇಲಧಿಕಾರಿಗಳು ಸೋಮವಾರ ಆದೇಶ ಹೊರಡಿಸಿದ್ದಾರೆ.

BMTCಯ ಎಲ್ಲ ಘಟಕ ವ್ಯವಸ್ಥಾಪಕರು ಹಾಗೂ ಸಂಚಾರ ಮೇಲ್ವಿಚಾರಕರು ಇದನ್ನು ಕಡ್ಡಾಯವಾಗಿ ಪಾಲಿಸಬೇಕು, ಇಲ್ಲದಿದ್ದರೆ ನಿಮ್ಮ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲು ವರದಿ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೆಲವು ಘಟಕಗಳಲ್ಲಿ ಈ ರೂಢಿಯನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ. ಆದ್ದರಿಂದ ಎಲ್ಲ ಘಟಕಗಳಲ್ಲಿ ಕಡ್ಡಾಯವಾಗಿ ಸಹಿ ಪಡೆಯುವ ಪದ್ಧತಿಯನ್ನು ಮುಂದುವರೆಸಲು ಕಟ್ಟುನಿಟ್ಟಾಗಿ ಸೂಚಿಸಿದೆ. ತಪ್ಪಿದಲ್ಲಿ ಅಂತಹ ಘಟಕ ವ್ಯವಸ್ಥಾಪಕರು ಹಾಗೂ ಸಂಚಾರ ಮೇಲ್ವಿಚಾರಕರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮೇಲಧಿಕಾರಿಗಳು ತಿಳಿಸಿದ್ದಾರೆ.

ಘಟಕ ಮಟ್ಟದಲ್ಲಿ ಕೆಲ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿರುವುದರಿಂದ ತಮಗೆ ಬೇಕಾದವರಿಗೆ ಅವರ ಅನುಕೂಲಕ್ಕೆ ತಕ್ಕಂತೆ ಡ್ಯೂಟಿರೂಟ ಹೊಂದಿಸುತ್ತಿದ್ದಾರೆ ಎಂಬ ಆರೋಪವು ಈ ಹಿಂದೆ ನೌಕರರಿಂದ ಕೇಳಿ ಬಂದಿತ್ತು.

ಆದರೆ, ಈ ಬಗ್ಗೆ ಮೇಲಧಿಕಾರಿಗಳು ಅಷ್ಟಾಗಿ ಗಮನಿಸಿರಲಿಲ್ಲ. ಈಗ ಅದನ್ನು ಗಮನಿಸಿದ್ದು, ಜತೆಗೆ 2024ರ ಜನವರಿ 1ರಿಂದ ಮೂಲ ವೇತನ ಹೆಚ್ಚಳವಾಗಬೇಕಿರುವುದರಿಂದ ಜನರಿಗೆ ಸಾರಿಗೆ ಸೌಲಭ್ಯವನ್ನು ಸರಳೀಕರಣ ಅಂದರೆ ಸಮಯಕ್ಕೆ ಸರಿಯಾಗಿ ದೊರಕುವಂತೆ ನೋಡಿಕೊಳ್ಳುವ ದೃಷ್ಟಿಯಿಂದ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನು 2020ರ ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಪಡೆಯುವುದಕ್ಕೆ ನಿಗಮದಲ್ಲಿ ಸದ್ಯಕ್ಕೆ ಯಾವುದೇ ಆರ್ಥಿಕ ಸಮಸ್ಯೆ ಇಲ್ಲ. ಕಾರಣ ಶಕ್ತಿಯೋಜನೆಯಿಂದ ಬಹುತೇಕ ಎಲ್ಲ ನಮ್ಮ ಬಸ್‌ಗಳು ಮಿತಿ ಮೀರಿ ರಷ್‌ ಆಗುತ್ತಿದ್ದು ಒಳ್ಳೆ ಲಾಭದಲ್ಲೇ ಇದೆ. ಹೀಗಾಗಿ 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ಆಡಳಿತ ಮಂಡಳಿ ಮನಸ್ಸು ಮಾಡಬೇಕು ಅಷ್ಟೇ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ