NEWSನಮ್ಮಜಿಲ್ಲೆನಮ್ಮರಾಜ್ಯವಿಡಿಯೋ

ಮಳೆಗೆ ಸೋರುತ್ತಿರುವ ಬಿಎಂಟಿಸಿ ಬನಶಂಕರಿ ಟಿಟಿಎಂಸಿ!!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬನಶಂಕರಿ ಟಿಟಿಎಂಸಿ ಬಸ್ ನಿಲ್ದಾಣ  ಮಳೆಗೆ ಸೋರುತ್ತಿದೆ.

ಈ ವೇಳೆ ಸಾರ್ವಜನಿಕರು ಕುಳಿತುಕೊಳ್ಳುವುದಿರಲಿ ನಿಲ್ಲುವುದಕ್ಕೂ ಆಗುತ್ತಿಲ್ಲ. ಸಾರಿಗೆ ಸಚಿವರು ಮತ್ತು ಅಧಿಕಾರಿಗಳಿಗೆ ಈ ಬಗ್ಗೆ ಕಾಳಜಿಯೇ ಇಲ್ಲವಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ರಾಜಧಾನಿಗೆ ದೇಶ ವಿದೇಶದಿಂದ ಲಕ್ಷಾಂತರ ಮಂದಿ ಬಂದು ನೆಲೆಸಿದ್ದಾರೆ. ಆದರೆ, ಇಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮಳೆ ಬಂದರೆ ಕುಳಿತುಕೊಳ್ಳುವುದಕ್ಕೂ ಆಗದ ಪರಿಸ್ಥಿತಿ ಎದುರಾಗಿದೆ.

ಈ ಬಗ್ಗೆ ವಿದೇಶದಿಂದ ಪ್ರವಾಸಕ್ಕೆ ಬಂದು ಹೋಗುವ ವಿದೇಶಿಗರ ಮನಸ್ಸಿನಲ್ಲಿ ಯಾವ ರೀತಿಯ ಭಾವನೆ ಮೂಡುತ್ತದೆ ಎಂಬ ಅರಿವು ಕೂಡ ಇಲ್ಲದವರಂತೆ ಅಧಿಕಾರಿಗಳು ಮತ್ತು ಸರ್ಕಾರ ನಡೆದುಕೊಳ್ಳುತ್ತಿರುವುದುವು ಭಾರಿ ಖೇದಕರ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗ ಮಳೆಗಾಲ ಆರಂಭವಾಗಿದ್ದು ಇನ್ನುಮೇಲಾದರು ಈ ರೀತಿ ನಿಲ್ದಾಣಗಳು ಸೋರದಂತೆ ಅದರಲ್ಲೂ ಟಿಟಿಎಂಸಿಗಳಲ್ಲಿ ಇಂಥ ಆವಂತರಗಳು ಆಗದಂತೆ ನೋಡಿಕೊಳ್ಳಬೇಕಿದೆ ಎಂದು ನಾಗರಿಕರು ಸಲಹೆ ನೀಡಿದ್ದಾರೆ.

ಇತ್ತೀಚೆಗೆ ಮಳೆಗೆ ಬಿಎಂಟಿಸಿ ಜಯನಗರ 4ನೇ ಘಟಕದ ಬಸ್‌ ಸೋರುತ್ತಿದ್ದರ ಬಗ್ಗೆ ಪ್ರಯಾಣಿಕರೊಬ್ಬರು ಫೋಟೋ ತೆಗೆದು ವಿಜಯಪಥ ಕಚೇರಿಗೆ ಕಳುಹಿಸಿದ್ದರು. ಈ ಬಗ್ಗೆ ವರದಿ ಬಂದ ಬಳಿಕ ಬಸ್‌ ಸೋರದಂತೆ ಮಾಡಿದ್ದಾರೆ.

ಇನ್ನು ಈ ರೀತಿ ಸೋರುತ್ತಿರುವ ಬಸ್‌ಗಳನ್ನು ಆಯಾಯ ಡಿಪೋ ವ್ಯವಸ್ಥಾಪಕರು ಸಂಬಂಧ ಪಟ್ಟವರಿಗೆ ನೋಡಿಕೊಳ್ಳುವಂತೆ ಸೂಚನೆ ನೀಡಿ ಮಾರ್ಗಕ್ಕೆ ಇಳಿಯುವ ಮುನ್ನವೇ ಸರಿಪಡಿಸಬೇಕು ಎಂದು ಜನತೆ ಆಗ್ರಹಿಸಿದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ