CRIMENEWS

BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ

ಬೈಕ್​ಗೆ ಬಿಎಂಟಿಸಿ ಬಸ್​ ಡಿಕ್ಕಿಯಾದ ಪರಿಣಾಮ ದಂಪತಿ, ಪುತ್ರಿ ಸೇರಿದಂತೆ ಮೂವರು ಅಸುನೀಗಿದ್ದಾರೆ.  ದೇವನಹಳ್ಳಿ ತಾಲೂಕಿನ ತೆಲ್ಲಹಳ್ಳಿ ಗ್ರಾಮದ ನಿವಾಸಿಗಳಾದ ಅರುಣ್ (35), ಅನುಷಾ(32) ಮತ್ತು ಹರ್ನಾ(2) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ 5 ವರ್ಷದ ಅನುಶಿಕಾ ಎಂಬ ಮಗುವಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪಥ ಸಮಗ್ರ ಸುದ್ದಿ

ಹೊಸಕೋಟೆ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿ ನಡೆದಿದೆ.

ಬೈಕ್​ಗೆ ಬಿಎಂಟಿಸಿ ಬಸ್​ ಡಿಕ್ಕಿಯಾದ ಪರಿಣಾಮ ದಂಪತಿ, ಪುತ್ರಿ ಸೇರಿದಂತೆ ಮೂವರು ಅಸುನೀಗಿದ್ದಾರೆ.  ದೇವನಹಳ್ಳಿ ತಾಲೂಕಿನ ತೆಲ್ಲಹಳ್ಳಿ ಗ್ರಾಮದ ನಿವಾಸಿಗಳಾದ ಅರುಣ್ (35), ಅನುಷಾ(32) ಮತ್ತು ಹರ್ನಾ(2) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ 5 ವರ್ಷದ ಅನುಶಿಕಾ ಎಂಬ ಮಗುವಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೂಲಿಬೆಲೆಯಿಂದ ಹೊಸಕೋಟೆ ಕಡೆಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ ದೇವನಹಳ್ಳಿ ಕಡೆ ಇಬ್ಬರು ಮಕ್ಕಳೊಂದಿಗೆ ತೆರಳುತ್ತಿದ್ದ ದಂಪತಿಯ ಬೈಕ್​​ಗೆ ಡಿಕ್ಕಿ ಹೊಡೆದಿದೆ. ರಾಂಗ್ ರೂಟ್​ನಲ್ಲಿ ಬಿಎಂಟಿಸಿ ಬಸ್ ಬಂದಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಇತ್ತ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸೂಲಿಬೆಲೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

2 ದಿನಗಳಲ್ಲಿ ಬಿಎಂಟಿಸಿಗೆ ನಾಲ್ವರು ಬಲಿ:
ಬಿಎಂಟಿಸಿ ಎಲೆಕ್ಟ್ರಿಕ್ ‌ಬಸ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಮಂಗನಹಳ್ಳಿ ಕ್ರಾಸ್ ಬಳಿ ನಿನ್ನೆ (ಜೂನ್​​ 18) ಸಂಜೆ 7 ಗಂಟೆ ಸುಮಾರಿಗೆ ನಡೆದಿತ್ತು. ಅಂದು ರಾಜು (58) ಎಂಬುವರು ಮೃತಪಟ್ಟಿದ್ದರು. ಗಾರೆ ಕೆಲಸ ಮಾಡಿಕೊಂಡಿದ್ದ ಮೃತರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಸ್ ಹರಿದು ದುರಂತ ಸಂಭವಿಸಿತ್ತು.

ಮನೆಗೆ ತರಕಾರಿ ತರಲು ಹೊರಗೆ ಬಂದಿದ್ದ ರಾಜು, ಮಂಗನಹಳ್ಳಿ ಕ್ರಾಸ್ ಬಳಿ ರಸ್ತೆ ದಾಟುವ ವೇಳೆ ಅಮ್ಮ ಆಶ್ರಮ ಸರ್ಕಲ್ ಕಡೆಯಿಂದ ಅತಿ ವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ರಾಜು ಮೈ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.

ಈ ಘಟನೆ ಮಾಸುವ ಮುನ್ನವೇ ಬಿಎಂಟಿಸಿ ಬಸ್​​ ಈಗ ಮತ್ತೆ ಮೂವರ ಬಲಿ ಪಡೆದಿರೋದು ಆತಂಕಕ್ಕೆ ಕಾರಣವಾಗಿದೆ. ಬಸ್‌ಗಳು ಈ ರೀತಿ ಚಾಲಕರ ನಿಯಂತ್ರಣ ಕಳೆದುಕೊಳ್ಳುತ್ತಿರುವುದು ಏಕೆ? ಇಲ್ಲ ಚಾಲಕರೇ ಅಜಾರುಕತೆಯಿಂದ ಈ ರೀತಿಯ ಘಟನೆಗಳಿಗೆ ಕಾರಣರಾಗುತ್ತಿದ್ದಾರೆ ಎಂಬ ಬಗ್ಗೆ ಭಾರಿ ಆತಂಕ ವ್ಯಕ್ತವಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಚಾಲಕರಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ ಅಡ್ಡ ಮತದಾನ ಮಾಡಿದ್ದು ಯಾರೆಂದು ಗೊತ್ತು: ಮುಂದಿದೆ ಮಾರಿಹಬ್ಬ- ಎಚ್‌ಡಿಕೆ BMTC ಎಂಡಿ ಈಗ KSRTC ವ್ಯವಸ್ಥಾಪಕ ನಿರ್ದೇಶಕ- ಬಿಎಂಟಿಸಿಗೆ ರಘುನಂದನ್ ಮೂರ್ತಿ ನೂತನ ಎಂಡಿ 7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ